ದೇಶದ ಜನರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ! – ಇನ್ಮುಂದೆ ಪಡಿತರ ಅಂಗಡಿಗಳಲ್ಲಿ ಸಿಗಲಿದೆ ಸೀಮೆಎಣ್ಣೆ!

ದೇಶದ ಜನರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ! – ಇನ್ಮುಂದೆ ಪಡಿತರ ಅಂಗಡಿಗಳಲ್ಲಿ ಸಿಗಲಿದೆ ಸೀಮೆಎಣ್ಣೆ!

ಗಲ್ಫ್ ರಾಷ್ಟ್ರಗಳಲ್ಲಿ ಯುದ್ಧದ ಪರಿಣಾಮ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ತೀವ್ರ ಹೊಡೆತ ಕೊಟ್ಟಿದೆ. ಗ್ಯಾಸ್‌ ಸಿಲಿಂಡರ್‌ ಪೂರೈಕೆಯಲ್ಲಿ ಅಭಾವ ಉಂಟಾಗಿದ್ದು, ವಾಣಿಜ್ಯ ಉದ್ದೇಶದ ಗ್ಯಾಸ್ ಸಿಲಿಂಡರ್ ಮಾತ್ರವಲ್ಲದೇ, ಗೃಹ ಬಳಕೆಯ ಸಿಲಿಂಡರ್ ಗಳ ಕೊರತೆಯೂ ಕಾಡಿದೆ. ಇದೀಗ ದೇಶದ ಜನತೆಗೆ ಕೇಂದ್ರ ಸರ್ಕಾರ ಗುಡ್‌ನ್ಯೂಸ್‌ ಕೊಟ್ಟಿದೆ. ಭಾರತದಲ್ಲಿ ಮತ್ತೆ ಸೀಮೆಎಣ್ಣೆ ಬಳಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಇನ್ಮುಂದೆ ಸೀಮೆಎಣ್ಣೆ ಸ್ಟೌವ್‌ಗಳಲ್ಲಿ ಅಡುಗೆ ಮಾಡಬಹುದು.

ಇದನ್ನೂ ಓದಿ: ಸೌದೆಗೆ ಈಗ ಡಿಮ್ಯಾಂಡಪ್ಪೋ ಡಿಮ್ಯಾಂಡ್..!– ಅಕ್ರಮವಾಗಿ ಮರ ಕಡಿದರೆ ಸರ್ಕಾರದಿಂದ ಕಠಿಣ ಕ್ರಮ..!

ಸೀಮೆಎಣ್ಣೆಯ ಬದಲು ಅಡುಗೆಗೆ ಎಲ್‌ಪಿಜಿ ಬಳಸುವ ಅಭಿಯಾನ 2012 ರಲ್ಲಿ ಆರಂಭವಾಗಿತ್ತು. ಈಗ ಉಜ್ವಲ ಯೋಜನೆಯ ಅಡಿ ಬಡ ಕುಟುಂಬಕ್ಕೆ ಸರ್ಕಾರ ಸಬ್ಸಿಡಿ ದರದಲ್ಲಿ ಸಿಲಿಂಡರ್‌ ನೀಡುತ್ತಿದೆ. ಹೀಗಾಗಿ ಸೀಮೆ ಎಣ್ಣೆ ನೀಡುವುದನ್ನ ನಿಲ್ಲಿಸಲಾಗಿತ್ತು. ಇದೀಗ ಮತ್ತೆ ಕೇಂದ್ರ ಸರ್ಕಾರ ಪಡಿತರ ಅಂಗಡಿಗಳಲ್ಲಿ ಸೀಮೆ ಎಣ್ಣೆ ನೀಡಲು ನಿರ್ಧರಿಸಿದೆ. ಗುರುವಾರ ರಾಜ್ಯಗಳಿಗೆ ಕೇಂದ್ರ 1 ಲಕ್ಷ ಕಿಲೋಲೀಟರ್‌ ನಿಯಮಿತ ಕೋಟಾದ ಜೊತೆಗೆ ಹೆಚ್ಚುವರಿಯಾಗಿ 48,000 ಕಿಲೋಲೀಟರ್ ಸೀಮೆಎಣ್ಣೆಯನ್ನು ಹಂಚಿಕೆ ಮಾಡಿದೆ. ಪ್ರಾಥಮಿಕವಾಗಿ ಪಡಿತರ ಅಂಗಡಿಗಳ (PDS) ಮೂಲಕ ಸೀಮೆಎಣ್ಣೆಯನ್ನು ವಿತರಿಸಲಾಗುತ್ತದೆ.

ಎಲ್‌ಪಿಜಿ ಸಿಲಿಂಡರ್‌ ಸಮಸ್ಯೆ ಹೆಚ್ಚಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ಬುಕ್ಕಿಂಗ್‌ ಅವಧಿಯನ್ನು ಏರಿಸಲಾಗಿದೆ. ಮೊದಲು 25 ದಿನಕ್ಕೆ ಒಂದು ಸಿಲಿಂಡರ್‌ ಸಿಗುತ್ತಿತ್ತು. ಇನ್ನು ಮುಂದೆ 45 ದಿನಗಳಿಗೊಮ್ಮೆ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜಂಟಿ ಕಾರ್ಯದರ್ಶಿ (ಮಾರುಕಟ್ಟೆ) ಸುಜಾತಾ ಶರ್ಮಾ ಪ್ರತಿಕ್ರಿಯಿಸಿ, ದೇಶವು ಹಿಂದೆಂದೂ ಈ ರೀತಿಯ ಪರಿಸ್ಥಿತಿಯನ್ನು ನೋಡಿರಲಿಲ್ಲ. ಹಾರ್ಮುಜ್ ಜಲಸಂಧಿಯನ್ನು ಮುಚ್ಚಿದ ನಂತರ ದೇಶೀಯ ಸರಬರಾಜುಗಳ ಮೇಲೆ ಪರಿಣಾಮ ಬೀರಿದೆ. ಗ್ರಾಮೀಣ ಗ್ರಾಹಕರು ಈಗ 45 ದಿನಗಳ ನಂತರ ಮಾತ್ರ ಸಿಲಿಂಡರ್‌ಗಳನ್ನು ಬುಕ್ ಮಾಡಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಇನ್ನು ಹೋಟೆಲ್‌, ರೆಸ್ಟೋರೆಂಟ್‌ಗಳು ಪರ್ಯಾಯ ಇಂಧನವಾಗಿ ಬಯೋಮಾಸ್, ಆರ್‌ಡಿಎಫ್ ಪೆಲೆಟ್‌ಗಳು ಮತ್ತು ಕಲ್ಲಿದ್ದಲನ್ನು ಒಂದು ತಿಂಗಳ ಕಾಲ ಬಳಸಲು ಅನುಮತಿ ನೀಡುವಂತೆ ಪರಿಸರ ಸಂಸ್ಥೆಗಳನ್ನು ಕೇಳಿದೆ.

Shwetha M