ರಾಜ್ಯದಲ್ಲಿ ರೆಸಾರ್ಟ್ ರಾಜಕೀಯ ಶುರು! – ಬಿಡದಿ ರೆಸಾರ್ಟ್ನಿಂದ ಮೈಸೂರು ಪ್ರವಾಸಕ್ಕೆ ತೆರಳಿದ ಒಡಿಶಾ ಕೈ ಶಾಸಕರು

ಮಾ.16ರ ರಾಜ್ಯಸಭೆ ಚುನಾವಣೆ ವೇಳೆ ಆಪರೇಷನ್ ಕಮಲ ಭೀತಿ ಹಿನ್ನೆಲೆಯಲ್ಲಿ ಒಡಿಶಾದ 8 ಮಂದಿ ಶಾಸಕರನ್ನು ಕಾಂಗ್ರೆಸ್ ಕರ್ನಾಟಕಕ್ಕೆ ಕರೆಸಲಾಗಿದೆ. ಇದೀಗ ಬಿಡದಿ ರೆಸಾರ್ಟ್ನಲ್ಲಿರುವ ಒಡಿಶಾ ಕಾಂಗ್ರೆಸ್ ಶಾಸಕರು ಮೈಸೂರು ಪ್ರವಾಸ ಕೈಗೊಂಡಿದ್ದಾರೆ.
ಇದನ್ನೂ ಓದಿ: ಇಸ್ರೇಲ್ – ಇರಾನ್ ಎಫೆಕ್ಟ್! – ಇನ್ಮುಂದೆ ವಿಮಾನಯಾನದಲ್ಲೂ ಇಂಧನ ಶುಲ್ಕ ಪಾವತಿಸಬೇಕು!
ಟ್ರಬಲ್ ಶೂಟರ್ ಡಿಸಿಎಂ ಡಿಕೆ ಶಿವಕುಮಾರ್ ಅವರ ಸೂಚನೆ ಹಿನ್ನೆಲೆಯಲ್ಲಿ 8 ಮಂದಿ ಶಾಸಕರು ಹಾಗೂ ಪಿಸಿಸಿ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಸೇರಿ 15ಕ್ಕೂ ಹೆಚ್ಚು ಮಂದಿ ಪ್ರವಾಸಕ್ಕೆ ತೆರಳಿದ್ದಾರೆ. ಸ್ಥಳೀಯ ಕಾಂಗ್ರೆಸ್ ಮುಖಂಡರ ನೇತೃತ್ವದಲ್ಲಿಇಂದು ಸಂಜೆವರೆಗೂ ಮೈಸೂರಿನ ಪ್ರವಾಸಿ ತಾಣಗಳನ್ನು ವೀಕ್ಷಿಸಲಿದ್ದಾರೆ.
ರಾಜ್ಯಸಭೆಯ 37 ಸ್ಥಾನಗಳಿಗೆ ಮಾರ್ಚ್ 16ರಂದು ಚುನಾವಣೆ ನಡೆಯಲಿದ್ದು 10 ರಾಜ್ಯಗಳ ಶಾಸಕರು ರಾಜ್ಯಸಭಾ ಸದಸ್ಯರ ಆಯ್ಕೆಗೆ ಮತದಾನ ಮಾಡಲಿದ್ದಾರೆ. ಇದರಲ್ಲಿ ನಾಲ್ಕು ರಾಜ್ಯಸಭಾ ಸದಸ್ಯರನ್ನು ಒಡಿಶಾದ ಶಾಸಕರು ಚುನಾಯಿಸಲಿದ್ದಾರೆ. ಚುನಾವಣೆಯಲ್ಲಿಅಡ್ಡ ಮತದಾನ ತಡೆಯಲು ಒಡಿಶಾದ ಕಾಂಗ್ರೆಸ್ ಶಾಸಕರನ್ನು ರಾಮನಗರದ ಬಿಡದಿಯಲ್ಲಿರುವ ವಂಡರ್ ಲಾ ರೆಸಾರ್ಟ್ಗೆ ಕರೆತರಲಾಗಿದೆ.
ಈ ಪೈಕಿ ನಾಲ್ಕನೇ ಸ್ಥಾನಕ್ಕೆ ಯಾವುದೇ ಪಕ್ಷದ ಬಳಿ ಸ್ಪಷ್ಟ ಸಂಖ್ಯಾ ಬಲ ಇಲ್ಲದ ಕಾರಣ ಒಡಿಶಾ ರಾಜಕೀಯದಲ್ಲಿ ಅಡ್ಡ ಮತದಾನದ ಭೀತಿ ಎದುರಾಗಿದೆ. ಆಡಳಿತಾರೂಢ ಬಿಜೆಪಿ ‘ಆಪರೇಷನ್ ಕಮಲ’ದ ಮೂಲಕ ಅಡ್ಡ ಮತದಾನಕ್ಕೆ ಯತ್ನಿಸಬಹುದು ಎಂಬ ಚರ್ಚೆಗಳು ನಡೆಯುತ್ತಿವೆ.
ರಾಜ್ಯಸಭೆಯ ನಾಲ್ಕನೇ ಸ್ಥಾನಕ್ಕಾಗಿ ಬಿಜೆಡಿ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದ್ದು, ಖ್ಯಾತ ಮೂತ್ರಪಿಂಡ ತಜ್ಞ ದತ್ತೇಶ್ವರ ಹೋಟಾ ಅವರನ್ನು ಕಣಕ್ಕಿಳಿಸಿವೆ. ಪ್ರಖ್ಯಾತ ಹೋಟೆಲ್ ಉದ್ಯಮಿ ಮತ್ತು ಮಾಜಿ ಕೇಂದ್ರ ಸಚಿವ ದಿಲೀಪ್ ರೇ ಅವರು ಬಿಜೆಪಿ ಬೆಂಬಲದೊಂದಿಗೆ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ.
ದಿಲೀಪ್ ರೇ ಕಣದಲ್ಲಿರುವುದು ಕಾಂಗ್ರೆಸ್ ಆತಂಕಕ್ಕೆ ಕಾರಣವಾಗಿದೆ. 2002 ರ ಚುನಾವಣೆಯಲ್ಲಿ ಒಂದು ಡಜನ್ ಕಾಂಗ್ರೆಸ್ ಮತ್ತು ಬಿಜೆಡಿ ಶಾಸಕರು ಅಡ್ಡ ಮತದಾನ ಮಾಡಿದ್ದರು. ದಿಲೀಪ್ ರೇ ಆಯ್ಕೆಯಾಗಲು 8 ಮತಗಳ ಅಗತ್ಯವಿದೆ.

ನೋಡಿರಿ

