ಸ್ಟಾರ್ ಸ್ಪಿನ್ನರ್ ಕುಲ್ದೀಪ್ ಯಾದವ್ ಹೊಸ ಇನ್ನಿಂಗ್ಸ್ – ಗೆಳತಿ ವಂಶಿಕಾ ಚಡ್ಡಾ ಜೊತೆ ಮದುವೆ

ಟೀಂ ಇಂಡಿಯಾದ ಸ್ಟಾರ್ ಸ್ಪಿನ್ನರ್ ಕುಲ್ದೀಪ್ ಯಾದವ್ ತಮ್ಮ ಬದುಕಿನ ಹೊಸ ಇನ್ನಿಂಗ್ಸ್ ಆರಂಭಿಸಿದ್ದಾರೆ. ತಮ್ಮ ಬಾಲ್ಯದ ಗೆಳತಿ ವಂಶಿಕಾ ಚಡ್ಡಾ ಅವರ ಜೊತೆ ಹಸೆಮಣೆ ಏರಿದ್ದಾರೆ.
ಇದನ್ನೂ ಓದಿ:SRH ವಿರುದ್ಧ ಬಾಯ್ಕಾಟ್ ಟ್ರೆಂಡ್ – ಪಾಕ್ ಬೌಲರ್ ಮೇಲೆ ಕಾವ್ಯಾ ಬಿಡ್
ಉತ್ತರಾಖಂಡದ ಮುಸ್ಸೂರಿಯಲ್ಲಿ ಟೀಮ್ ಇಂಡಿಯಾದ ಸ್ಟಾರ್ ಸ್ಪಿನ್ನರ್ ಕುಲದೀಪ್ ಯಾದವ್ ಅವರು ತಮ್ಮ ಬಾಲ್ಯದ ಗೆಳತಿ ವಂಶಿಕಾ ಚಡ್ಡಾ ಜೊತೆ ಮದುವೆಯಾಗಿದ್ದಾರೆ. ಈ ವಿವಾಹ ಸಮಾರಂಭದಲ್ಲಿ ಕ್ರಿಕೆಟಿಗರು ಹಾಗೂ ಗಣ್ಯರು ಭಾಗಿಯಾಗಿದ್ದರು. ಟಿ20 ವಿಶ್ವಕಪ್ ಗೆದ್ದ ತಂಡದ ಸದಸ್ಯರಲ್ಲಿ ಒಬ್ಬರಾಗಿರುವ ಸ್ಟಾರ್ ಸ್ಪಿನ್ನರ್ ಕುಲ್ದೀಪ್ ಯಾದವ್ ಕಪ್ ಗೆದ್ದ ಬೆನ್ನಲ್ಲೇ ಬದುಕಿನ ಹೊಸ ಇನ್ನಿಂಗ್ಸ್ ಆರಂಭಿಸುತ್ತಿರುವುದು ವಿಶೇಷ.
ಉತ್ತರಾಖಂಡದ ಮುಸ್ಸೂರಿಯಲ್ಲಿರುವ ಸವೊಯ್ ಹೋಟೆಲ್‌ನಲ್ಲಿ ವಿವಾಹ ಕಾರ್ಯಕ್ರಮ ನಡೆದಿದೆ. ಕುಲ್ದೀಪ್ ಯಾದವ್ ಉತ್ತರ ಪ್ರದೇಶದ ಕಾನ್ಪುರದವರು. ಅವರ ಪತ್ನಿ ವಂಶಿಕಾ ಕೂಡ ಇಲ್ಲೇ ಹುಟ್ಟಿ ಬೆಳೆದವರು. ವಂಶಿಕಾ ತಮ್ಮ ಶಾಲಾ ಶಿಕ್ಷಣವನ್ನು ಕಾನ್ಪುರದಲ್ಲಿ ಪೂರ್ಣಗೊಳಿಸಿದರು. ನಂತರ, ಉನ್ನತ ಶಿಕ್ಷಣಕ್ಕಾಗಿ ಆಸ್ಟ್ರೇಲಿಯಾದ ಮೆಲ್ಬೋರ್ನ್‌ಗೆ ತೆರಳಿದರು. ವಂಶಿಕಾ ಓದಿನಲ್ಲಿ ಸದಾ ಮುಂದಿದ್ದರು, ಅದಕ್ಕೆ ತಕ್ಕಂತೆ ಉತ್ತಮ ಉದ್ಯೋಗವನ್ನೂ ಪಡೆದರು. ವಂಶಿಕಾ ಚಡ್ಡಾ ಅವರು ಭಾರತದ ನಂಬರ್-1 ವಿಮಾ ಕಂಪನಿಯಾದ ಲೈಫ್ ಇನ್ಶುರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (LIC) ದಲ್ಲಿ ಕೆಲಸ ಮಾಡುತ್ತಿದ್ದಾರೆ. ಅವರು ಅಡ್ಮಿನಿಸ್ಟ್ರೇಟಿವ್ ಆಫೀಸರ್ (AAO) ಹುದ್ದೆಯಲ್ಲಿದ್ದು, ಶಾಖಾ ಮಟ್ಟದ ನಿರ್ವಹಣಾ ಕಾರ್ಯಗಳನ್ನು ನೋಡಿಕೊಳ್ಳುತ್ತಾರೆ ಎಂದು ತಿಳಿದುಬಂದಿದೆ. ಇವರಿಬ್ಬರ ಪ್ರೇಮಕಥೆ ಕಾನ್ಪುರದ ಶ್ಯಾಮ್ ನಗರ ಪ್ರದೇಶದಲ್ಲಿ ಶುರುವಾಗಿತ್ತು. ಇದೀಗ ಇಬ್ಬರು ಮದುವೆಯಾಗುವ ಮೂಲಕ ತಮ್ಮ ಸ್ನೇಹ, ಪ್ರೀತಿಯನ್ನು ಉಳಿಸಿಕೊಂಡು ಪ್ರೇಮಿಗಳಿಗೆ ಮಾದರಿಯಾಗಿದ್ದಾರೆ.

ನೋಡಿರಿ

