ಕಾಶ್ಮೀರದ ಮಾತಾ ವೈಷ್ಣೋದೇವಿಯ ದರ್ಶನ ಪಡೆದ ಅಭಿಷೇಕ್ ಶರ್ಮಾ

ಟಿ20 ವಿಶ್ವಕಪ್ ಗೆದ್ದ ನಂತರ ಭಾರತ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಜಮ್ಮು ಮತ್ತು ಕಾಶ್ಮೀರದ ಸುಪ್ರಸಿದ್ದ ದೇವಾಲಯ ಮಾತಾ ವೈಷ್ಣೋದೇವಿಯ ದರ್ಶನ ಪಡೆದುಕೊಂಡಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಅಂತಿಮ ಪಂದ್ಯದಲ್ಲಿ ಅಭಿಷೇಕ್ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸಿದರು ಕೇವಲ 21 ಎಸೆತಗಳಲ್ಲಿ 52 ರನ್ ಕಲೆಹಾಕಿದರು. ಅಭಿಷೇಕ್ ತಮ್ಮ ಸಾಮಾಜಿಕ ಮಾಧ್ಯಮ ಖಾತೆ ‘ಇನ್‌ಸ್ಟಾಗ್ರಾಮ್’ ನಲ್ಲಿ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಇದರಲ್ಲಿ ಅಭಿಷೇಕ್ ಸಾಂಪ್ರದಾಯಿಕ ಉಡುಗೆ ತೊಟ್ಟಿದ್ದು ‘ಜೈ ಮಾತಾ ದಿ’ ಎಂಬ ಶೀರ್ಷಿಕೆ ನೀಡಿ ಫೋಟೊ ಹಂಚಿಕೊಂಡಿದ್ದಾರೆ.
2026ರ ಟಿ20 ವಿಶ್ವಕಪ್ ಫೈನಲ್‌ಗೆ ಮುನ್ನ ಅಭಿಷೇಕ್ ರನ್ ಗಳಿಸಲು ಹೆಣಗಾಡಿದರು. ಎಡಗೈ ಬ್ಯಾಟ್ಸ್‌ಮನ್ ತಮ್ಮ ಮೊದಲ ಏಳು ಇನ್ನಿಂಗ್ಸ್‌ಗಳಲ್ಲಿ ಕೇವಲ 89 ರನ್ ಗಳಿಸಿದರು. ಪಂದ್ಯಾವಳಿಯಾದ್ಯಂತ ಅವರ ನಿರಂತರವಾಗಿ ಕುಸಿಯುತ್ತಿರುವ ಫಾರ್ಮ್ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿತು. ಇದರ ಹೊರತಾಗಿಯೂ, ನಾಯಕ ಸೂರ್ಯಕುಮಾರ್ ಯಾದವ್ ಮತ್ತು ತಂಡದ ಆಡಳಿತ ಮಂಡಳಿ ಅಭಿಷೇಕ್‌ಗೆ ನಿರಂತರವಾಗಿ ಬೆಂಬಲ ನೀಡಿತು, ಇದು ಫೈನಲ್‌ನಲ್ಲಿ ಅವರ ಪ್ರದರ್ಶನಕ್ಕೆ ಕಾರಣವಾಯಿತು.
ಇದನ್ನೂ ಓದಿ: ಸ್ಟಾರ್ ಸ್ಪಿನ್ನರ್ ಕುಲ್ದೀಪ್ ಯಾದವ್ ಹೊಸ ಇನ್ನಿಂಗ್ಸ್ – ಗೆಳತಿ ವಂಶಿಕಾ ಚಡ್ಡಾ ಜೊತೆ ಮದುವೆ
ವಿಶ್ವಕಪ್ ಫೈನಲ್‌ನಲ್ಲಿ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಅಭಿಷೇಕ್, ಸಂಜು ಸ್ಯಾಮ್ಸನ್ ಜೊತೆಗೂಡಿ ಪಂದ್ಯವನ್ನು ಸಂಪೂರ್ಣವಾಗಿ ಏಕಪಕ್ಷೀಯ ಪಂದ್ಯವನ್ನಾಗಿ ಪರಿವರ್ತಿಸಿದರು, ಕೇವಲ 7.1 ಓವರ್‌ಗಳಲ್ಲಿ ಮೊದಲ ವಿಕೆಟ್‌ಗೆ 98 ರನ್‌ಗಳನ್ನು ಸೇರಿಸಿದರು. 52 ರನ್ ಗಳಿಸಿದ ಅಭಿಷೇಕ್ ಇನ್ನಿಂಗ್ಸ್‌ನಲ್ಲಿ ಆರು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳು ಬಾರಿಸಿದರು. ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ತಂಡ ದಾಖಲೆಯ ಮೂರನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದಿತು. ಇದರೊಂದಿಗೆ ತವರು ನೆಲದಲ್ಲಿ ಟಿ20 ವಿಶ್ವಕಪ್ ಪ್ರಶಸ್ತಿಯನ್ನು ಗೆದ್ದ ಮೊದಲ ತಂಡವಾಯ್ತು. ಅಲ್ಲದೇ ಸತತ ಎರಡನೇ ಬಾರಿಗೆ ಪ್ರಶಸ್ತಿ ಗೆದ್ದ ವಿಶ್ವದ ಮೊದಲ ತಂಡವಾಯಿತು.

ನೋಡಿರಿ

