ಉಡುಪಿಯಲ್ಲಿ LPG ಗ್ಯಾಸ್ ಟ್ಯಾಂಕರ್ ಪಲ್ಟಿ! – ಅನಿಲ ಸೋರಿಕೆ.. ವಾಹನ ಸಂಚಾರಕ್ಕೆ ಮಾರ್ಗ ಬದಲಾವಣೆ!

ಉಡುಪಿಯಲ್ಲಿ LPG ಗ್ಯಾಸ್ ಟ್ಯಾಂಕರ್ ಪಲ್ಟಿ! – ಅನಿಲ ಸೋರಿಕೆ.. ವಾಹನ ಸಂಚಾರಕ್ಕೆ ಮಾರ್ಗ ಬದಲಾವಣೆ!

ಇರಾನ್‌ – ಇಸ್ರೇಲ್‌ ಯುದ್ದ ಸದ್ಯಕ್ಕೆ ನಿಲ್ಲುವಂತೆ ಕಾಣುತ್ತಿಲ್ಲ. ಕ್ಷಣ ಕ್ಷಣಕ್ಕೂ ಸಂಘರ್ಷ ತೀವ್ರಗೊಳ್ಳುತ್ತಿದೆ. ಈ ಯುದ್ದದ ಎಫೆಕ್ಟ್‌ ಭಾರತಕ್ಕೂ ತಟ್ಟಿದೆ. ದೇಶದಲ್ಲಿ ಅಡುಗೆ ಅನಿಲದ ಅಭಾವ ಉಂಟಾಗಿದೆ. ಈ ಹೊತ್ತಲ್ಲೇ ಉಡುಪಿಯ ಕಟಪಾಡಿಯಲ್ಲಿ ಗ್ಯಾಸ್ ಟ್ಯಾಂಕರ್ ಮಗುಚಿ ಬಿದ್ದಿದೆ.

ಇದನ್ನೂ ಓದಿ: ಭಾರತೀಯರಿಗೆ ಗುಡ್‌ನ್ಯೂಸ್!‌ – ವಾರ್‌ ನಡುವೆಯೂ ಭಾರತಕ್ಕೆ 45,000 ಮೆಟ್ರಿಕ್ ಟನ್ LPG ಹೊತ್ತು ತಂದ ಶಿವಾಲಿಕ್‌ ಹಡಗು

ಮಂಗಳೂರಿನಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಗ್ಯಾಸ್ ಟ್ಯಾಂಕರ್ ಪಲ್ಟಿಯಾಗಿದೆ. ರಸ್ತೆ ಕಾಮಗಾರಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿಯಲ್ಲೇ ಟ್ಯಾಂಕರ್ ಮಗುಚಿ ಬಿದ್ದಿದೆ. ಪರಿಣಾಮ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸಂಚಾರ ಅಸ್ತವ್ಯಸ್ತವಾಗಿತ್ತು. ಇನ್ನು ಈ ಘಟನೆ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ, ಟ್ಯಾಂಕರ್‌ನಲ್ಲಿ ಅನಿಲ ಸೋರಿಕೆ ಇದೆಯೇ ಎಂಬ ಬಗ್ಗೆ ಪರಿಶೀಲನೆ ನಡೆಸಿದರು.  ಅಲ್ಲದೇ ಅನಿಲ ಸೋರಿಕೆ ತಡೆಯಲು ಟ್ಯಾಂಕರ್‌ ಮೇಲೆ ನಿರಂತರವಾಗಿ ನೀರು ಹಾಕಿದ್ದಾರೆ. ಬಳಿಕ ಮಂಗಳೂರಿನಿಂದ ಇನ್ನೊಂದು ಟ್ಯಾಂಕರ್ ಬಂದ ಬಳಿಕ ಗ್ಯಾಸ್ ಶಿಫ್ಟ್ ಕಾರ್ಯ ಆರಂಭಿಸಲಾಗಿದೆ.

ಇನ್ನು ಗ್ಯಾಸ್ ಟ್ಯಾಂಕ‌ರ್ ಪಲ್ಟಿಯಾದ ಬೆನ್ನಲ್ಲೇ ಉಡುಪಿ ಜಿಲ್ಲಾ ಪೊಲೀಸರು, ರಸ್ತೆಯಲ್ಲಿ ಸಂಚರಿಸುವ ವಾಹನಗಳ ಸುರಕ್ಷತೆಗಾಗಿ ಸಂಚಾರ ಮಾರ್ಗ ಬದಲಾವಣೆ ಮಾಡಿದ್ದಾರೆ.

ಮಂಗಳೂರಿನಿಂದ ಉಡುಪಿ ಕಡೆಗೆ ಹೋಗುವ ವಾಹನಗಳಿಗೆ ಬದಲಿ ಮಾರ್ಗ

ಮಂಗಳೂರಿನಿಂದ ಉಡುಪಿಗೆ ಹೋಗುವ ವಾಹನಗಳು ಕಾಪುವಿನಿಂದ ಶಿರ್ವಾ-ಮೂಡಬೆಳ್ಳೆ ಮಣಿಪುರ ಮಾರ್ಗವಾಗಿ ಮಣಿಪಾಲಕ್ಕೆ ತೆರಳಿ ಅಲ್ಲಿಂದ ಉಡುಪಿಗೆ ಹೋಗುವುದು ಅಥವಾ ಪಡುಬಿದ್ರೆ ಬೆಳ್ಳಣ್- ಶಿರ್ವ ಮಾರ್ಗವಾಗಿ ಮಣಿಪಾಲಕ್ಕೆ ತೆರಳಿ ಅಲ್ಲಿಂದ ಉಡುಪಿಗೆ ತಲುಪುವುದು

ಉಡುಪಿಯಿಂದ ಮಂಗಳೂರು ಕಡೆಗೆ ಬದಲಿ ಮಾರ್ಗ

ಉಡುಪಿಯಿಂದ ಮಂಗಳೂರಿಗೆ ಹೋಗುವ ವಾಹನಗಳು ಮಣಿಪಾಲದಿಂದ ಮಣಿಪುರ-ಮೂಡಬೆಳ್ಳೆ ಮಾರ್ಗವಾಗಿ ಶಿರ್ವ ಮಾರ್ಗವಾಗಿ ಕಾಪು ತಲುಪಿ ಅಲ್ಲಿಂದ ಮಂಗಳೂರು ಕಡೆಗೆ ತೆರಳುವುದು ಅಥವಾ ಮಣಿಪಾಲದಿಂದ ಶಿರ್ವ-ಬೆಳ್ಳಣ್ ಮಾರ್ಗವಾಗಿ ಪಡುಬಿದ್ರೆ ತಲುಪಿ ಅಲ್ಲಿಂದ ಮಂಗಳೂರು ಕಡೆಗೆ ಸಂಚರಿಸುವುದು.

Shwetha M

Leave a Reply

Your email address will not be published. Required fields are marked *