ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳು ವೈರಲ್ – ಬಿಜೆಪಿ, ಕಾಂಗ್ರೆಸ್ ಲೀಡರ್‌ಗಳಿಗೆ ಕಂಟಕ!

ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗಳು ವೈರಲ್ ಆದ ಪ್ರಕರಣದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆಯಾಗಿದೆ. ಪ್ರಜ್ವಲ್ ರೇವಣ್ಣ ವಿಡಿಯೋ ವೈರಲ್ ಕೇಸ್ನಲ್ಲಿ ಬಿಗ್ ಟ್ವಿಸ್ಟ್ ಎಂಬಂತೆ ಮತ್ತೊಂದು ಸ್ಫೋಟಕ ವಿಚಾರ ಬಯಲಾಗಿದೆ. ಭಾರೀ ಸಂಚಲನ ಮೂಡಿಸಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದ ಸಂಬಂಧ ಕೊನೆಗೂ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಎಸ್‌ಐಟಿ ಅಧಿಕಾರಿಗಳು ತೀವ್ರ ವಿಚಾರಣೆ ನಡೆಸಿ ಎಲ್ಲಾ ಮಾಹಿತಿ ಕಲೆ ಹಾಕಿದ್ದಾರೆ.
ವಿಶೇಷ ತನಿಖಾ ತಂಡ (ಎಸ್‌ಐಟಿ) ನಿನ್ನೆ ಹಾಸನ ಹಿರಿಯ ಸಿವಿಲ್ ನ್ಯಾಯಾಲಯಕ್ಕೆ ದೊಡ್ಡ ಚಾರ್ಜ್ ಶೀಟ್ ಸಲ್ಲಿಸಿದೆ. ಈ ದೋಷಾರೋಪಣೆ ಪಟ್ಟಿ ಒಟ್ಟು 13,712 ಪುಟಗಳಷ್ಟು ದೊಡ್ಡದಾಗಿದೆ. ಇದು ರಾಜ್ಯದಲ್ಲಿ ದೊಡ್ಡ ಸಂಚಲನ ಮೂಡಿಸಿದ ಪ್ರಕರಣಕ್ಕೆ ಸಂಬಂಧಿಸಿದ್ದು ಆಗಿದೆ. ಈ ಪ್ರಕರಣದಲ್ಲಿ ಒಟ್ಟು 52 ಮಂದಿಯ ಹೆಸರುಗಳು ಉಲ್ಲೇಖವಾಗಿವೆ. ಇವರಲ್ಲಿ 39 ಮಂದಿ ವಿರುದ್ಧ ಆರೋಪಗಳು ಸಾಬೀತಾಗಿವೆ ಎಂದು ಎಸ್‌ಐಟಿ ದೃಢಪಡಿಸಿದೆ.
ಇದನ್ನೂ ಓದಿ: ಅಪಘಾತದಲ್ಲಿ ಎರಡೂ ಕಾಲು ಕಟ್! – ಸ್ಟ್ರೆಚರ್ ಬೆಡ್ ಮೇಲೆಯೇ ಮಲಗಿ ಪರೀಕ್ಷೆ ಬರೆದ SSLC ವಿದ್ಯಾರ್ಥಿನಿ!
ಇನ್ನೂ ಮಹತ್ವದ ವಿಚಾರ ಎಂದೆ ಈ ಚಾರ್ಜ್ಶೀಟ್ನಲ್ಲಿ ಕೆಲ ಪ್ರಭಾವಿಗಳ ಹೆಸರು ಉಲ್ಲೇಖವಾಗಿದೆ. ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ಹೆಸರು, ಸಚಿವರ ಆಪ್ತರ ಹೆಸರುಗಳು ಉಲ್ಲೇಖವಾಗಿದೆ. ಇದರಿಂದಾಗಿ ಈ ಪ್ರಕರಣದಲ್ಲಿ ಮತ್ತಷ್ಟು ದೊಡ್ಡ ಬೆಳವಣಿಗೆಯಾಗುವ ಸಾಧ್ಯತೆಗಳು ದಟ್ಟವಾಗಿದೆ. ಜೊತೆಗೆ ಪ್ರಭಾವಿಗಳಿಗೆ ಕಂಟಕ ಎದರಾಗುವ ಸಾಧ್ಯತೆ ಕೂಡ ಇದೆ.
ಚಾರ್ಜ್ ಶೀಟ್‌ನಲ್ಲಿ ಮುಖ್ಯ ಆರೋಪಿಗಳು ಎಂದರೆ ಎ1 ನವೀನ್, ಎ2 ಪ್ರಜ್ವಲ್ ರೇವಣ್ಣ ಅವರ ಕಾರು ಚಾಲಕ ಕಾರ್ತಿಕ್ ಎನ್, ಎ3 ಚೇತನ್ ಬಿಸಿ, ಎ4 ಚೇತನ್ ವೈ ಎಸ್, ಎ5 ಲಿಖಿತ್ ಗೌಡ ಇವರೊಂದಿಗೆ ಇನ್ನೂ ಹಲವು ಮಂದಿ ಸೇರಿ ಒಟ್ಟು 39 ಆರೋಪಿಗಳ ವಿರುದ್ಧ ದೋಷಾರೋಪಣೆ ಮಾಡಲಾಗಿದೆ. ಇವರಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಪಕ್ಷದ ಕಾರ್ಯಕರ್ತರ ಹೆಸರುಗಳು ಸೇರಿವೆ. ಬಿಜೆಪಿ ನಾಯಕ ಪ್ರೀತಂಗೌಡ ಮತ್ತು ಸಂಸದ ಶ್ರೇಯಸ್ ಅವರ ಅತ್ಯಾಪ್ತರ ವಿರುದ್ಧವೂ ಆರೋಪಗಳು ಸಾಬೀತಾಗಿವೆ ಎಂದು ತನಿಖಾ ತಂಡ ತಿಳಿಸಿದೆ.

ನೋಡಿರಿ

