ದೆಹಲಿಯಲ್ಲಿ ಭೀಕರ ಅಗ್ನಿ ದುರಂತ – 3 ಮಕ್ಕಳು ಸೇರಿ 7ಕ್ಕೂ ಹೆಚ್ಚು ಸಾ*ವು!

ದೆಹಲಿಯಲ್ಲಿ ಭೀಕರ ಅಗ್ನಿ ದುರಂತ – 3 ಮಕ್ಕಳು ಸೇರಿ 7ಕ್ಕೂ ಹೆಚ್ಚು ಸಾ*ವು!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೀಕರ ಅಗ್ನಿ ದುರಂತ ನಡೆದಿದೆ.  ದೆಹಲಿಯ  ಪಲಮ್ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದರಲ್ಲಿ ಬೆಂಕಿ ತಗುಲಿದೆ. ಈ ದುರಂತದಲ್ಲಿ 7ಕ್ಕೂ ಹೆಚ್ಚು ಜನರು ಪ್ರಾಣ ಕಳೆದುಕೊಂಡಿದ್ದಾರೆ ಅನ್ನೋ  ಮಾಹಿತಿ ಸದ್ಯಕ್ಕೆ ತಿಳಿದುಬಂದಿದೆ. ಇನ್ನೂ ಹಲವಾರು ಜನರಿಗೆ ಗಾಯಗಳಾಗಿವೆ. ದುರಂತದಲ್ಲಿ ಮೃತಪಟ್ಟಿರುವವರ ಪೈಕಿ ಮೂವರು ಮಕ್ಕಳಿದ್ದಾರೆ ಎಂದು ಹೇಳಲಾಗುತ್ತಿದೆ. ಬೆಂಕಿ ದುರಂತಕ್ಕೆ ಏನು ಕಾರಣ ಎಂದು ಸದ್ಯಕ್ಕೆ ತಿಳಿದುಬಂದಿಲ್ಲ.

ಇದನ್ನೂ ಓದಿ: ಅಪಘಾತದಲ್ಲಿ ಎರಡೂ ಕಾಲು ಕಟ್‌! – ಸ್ಟ್ರೆಚರ್‌ ಬೆಡ್‌ ಮೇಲೆಯೇ ಮಲಗಿ ಪರೀಕ್ಷೆ ಬರೆದ SSLC ವಿದ್ಯಾರ್ಥಿನಿ!

ಕಟ್ಟಡಕ್ಕೆ ಬೆಂಕಿ ತಗುಲಿರುವ ಬಗ್ಗೆ ಅಗ್ನಿಶಾಮಕ ವಿಭಾಗಕ್ಕೆ ಬೆಳಗ್ಗೆ 7:30ಕ್ಕೆ ಮಾಹಿತಿ ಹೋಗಿದೆ. ಕೂಡಲೇ 30 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸುವ ಮತ್ತು ಜನರನ್ನು ರಕ್ಷಿಸುವ ಕಾರ್ಯದಲ್ಲಿ ತೊಡಗಲಾಗಿದೆ. ಪೊಲೀಸ್ ಹಾಗು ಇತರ ತುರ್ತು ಸೇವೆಗಳೂ ಕೂಡ ಸ್ಥಳಕ್ಕೆ ಬಂದು ಕಾರ್ಯಾಚರಣೆಲ್ಲಿ ನೆರವಾಗುತ್ತಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋಗಳು ವೈರಲ್ – ಬಿಜೆಪಿ, ಕಾಂಗ್ರೆಸ್‌ ಲೀಡರ್‌ಗಳಿಗೆ ಕಂಟಕ!

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರು ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದಾರೆ. ಆರು ಮಂದಿ ಮೃತಪಟ್ಟಿದ್ದು, ಕೆಲ ಜನರು ಈಗಲೂ ಕಟ್ಟಡದಲ್ಲಿ ಸಿಲುಕಿದ್ದಾರೆ. ಜಿಲ್ಲಾಡಳಿತ, ಅಗ್ನಿಶಾಮಕ ಇಲಾಖೆ, ಪೊಲೀಸರು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ ಎಂದು ಟ್ವೀಟ್ ಮಾಡಿರುವ ಸಿಎಂ ರೇಖಾ ಗುಪ್ತಾ, ಘಟನೆಯನ್ನು ನ್ಯಾಯಾಂಗ ತನಿಖೆ ನಡೆಸುವಂತೆ ಆದೇಶಿಸಿರುವುದಾಗಿ ತಿಳಿಸಿದ್ದಾರೆ.

Kishor KV