ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಬಿಗ್ ಶಾಕ್ -IPLನಿಂದ ಇಂಗ್ಲೆಂಡ್‌ನ ಸ್ಟಾರ್ ಆಲ್‌ರೌಂಡರ್ ಸ್ಯಾಮ್ ಕರನ್ OUT

ಐಪಿಎಲ್ ಟೂರ್ನಿಯ ಆರಂಭಕ್ಕೂ ಮುನ್ನ ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಬಿಗ್ ಶಾಕ್ ಎದುರಾಗಿದೆ. ಇಂಗ್ಲೆಂಡ್‌ನ ಸ್ಟಾರ್ ಆಲ್‌ರೌಂಡರ್ ಸ್ಯಾಮ್ ಕರನ್ ಗಾಯದ ಕಾರಣದಿಂದಾಗಿ 2026ರ ಐಪಿಎಲ್ ಟೂರ್ನಿಯಿಂದ ಹೊರ ಬಿದ್ದಿದ್ದಾರೆ. ಕರನ್ ತೊಡೆಸಂದು ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ, ಇದರ ಪರಿಣಾಮವಾಗಿ ಅವರು ಗುಣಮುಖರಾಗಲು ಹೆಚ್ಚು ಸಮಯ ತೆಗೆದುಕೊಳ್ಳಬಹುದು. ಚೆನ್ನೈ ಸೂಪರ್ ಕಿಂಗ್ಸ್ ಜೊತೆಗಿನ ಟ್ರೇಡ್ ಡೀಲ್ ಮೂಲಕ ಸ್ಯಾಮ್ ಕರನ್ ಅವರನ್ನು ರಾಜಸ್ಥಾನ್ ರಾಯಲ್ಸ್ ತನ್ನ ತಂಡಕ್ಕೆ ಸೇರಿಸಿಕೊಂಡಿತ್ತು . ಈ ವ್ಯವಹಾರದಲ್ಲಿ ಸಂಜು ಸ್ಯಾಮ್ಸನ್ ಮತ್ತು ರವೀಂದ್ರ ಜಡೇಜಾ ಅವರಂತಹ ಪ್ರಮುಖ ಹೆಸರುಗಳು ಸಹ ಸೇರಿವೆ.
ಇದನ್ನೂ ಓದಿ: ಬೇಸಿಗೆಗಾಲದಲ್ಲಿ ನಿರ್ಜಲೀಕರಣ ಸಮಸ್ಯೆ ಕಾಣಿಸಿಕೊಳ್ಳುತ್ತಾ? – ಹಾಗಾದ್ರೆ ಈ ಪಾನೀಯ ಕುಡಿಯಿರಿ!
ಸ್ಯಾಮ್ ಕರನ್ 2026ರ ಮಾರ್ಚ್ 6 ರಂದು ಭಾರತ ವಿರುದ್ಧದ ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ತಮ್ಮ ಕೊನೆಯ ಪಂದ್ಯವನ್ನು ಆಡಿದ್ದರು. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದಿದ್ದ ಆ ಪಂದ್ಯದಲ್ಲ ಕರನ್ ಸಾಕಷ್ಟು ದುಬಾರಿಯಾಗಿದ್ದರು. ಅವರು ತಮ್ಮ ನಾಲ್ಕು ಓವರ್‌ಗಳಲ್ಲಿ 53 ರನ್‌ಗಳನ್ನು ಬಿಟ್ಟುಕೊಟ್ರೆ, ಬ್ಯಾಟಿಂಗ್‌ನಲ್ಲಿ ಕೇವಲ 18 ರನ್‌ಗಳನ್ನು ಗಳಿಸಿದ್ದರು. ರಾಜಸ್ಥಾನ ರಾಯಲ್ಸ್ ತಂಡಕ್ಕೆ ಅವರ ಅನುಪಸ್ಥಿತಿ ಕಾಡಲಿದೆ. ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡರಲ್ಲೂ ಅವರು ಮ್ಯಾಚ್ ವಿನ್ನರ್ ಆಗಿದ್ದು, ಇದು ತಂಡಕ್ಕೆ ಡಬಲ್ ಶಾಕ್ ನೀಡಲಿದೆ.
ಇನ್ನೂ ಸ್ಯಾಮ್ ಕರನ್ ಅನುಪಸ್ಥಿತಿಯಲ್ಲಿ, ರಾಜಸ್ಥಾನ್ ರಾಯಲ್ಸ್ ತಂಡವು ಇದೀಗ ದಕ್ಷಿಣ ಆಫ್ರಿಕಾದ ಡೊನೊವನ್ ಫೆರೇರಾ ಅವರನ್ನ ತಂಡಕ್ಕೆ ಸೇರಿಸಿಕೊಳ್ಳುವ ಸಾಧ್ಯತೆ ಇದೆ. ಫೆರೇರಾ ಕೂಡ ಟ್ರೇಡ್ ಡೀಲ್ ಮೂಲಕ ರಾಯಲ್ಸ್ ತಂಡವನ್ನು ಸೇರಿಕೊಂಡಿದ್ದರು ಮತ್ತು ಇದೀಗ ಮಧ್ಯಮ ಕ್ರಮಾಂಕದಲ್ಲಿ ಫಿನಿಷರ್ ಪಾತ್ರವನ್ನು ನಿರ್ವಹಿಸಬಹುದು. ಫ್ರಾಂಚೈಸಿ ಇನ್ನೂ ಇತರ ವಿದೇಶಿ ಆಟಗಾರರನ್ನು ಕರನ್ ಬದಲಿಗೆ ಸಂಭಾವ್ಯ ಆಟಗಾರರಾಗಿ ಪರಿಗಣಿಸುತ್ತಿದ್ದರೂ, ಬದಲಿ ಆಟಗಾರರ ಕುರಿತು ಅಧಿಕೃತ ಘೋಷಣೆ ಇನ್ನೂ ಮಾಡಿಲ್ಲ.

ನೋಡಿರಿ

