ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ! – ಶ್ವಾನಗಳ ಕಾಟಕ್ಕೆ ಬೇಸತ್ತು ದೇವರ ಮೊರೆ ಹೋದ ಅಪಾರ್ಟ್ಮೆಂಟ್ ನಿವಾಸಿಗಳು!

ಕಷ್ಟ ಬಂದ್ರೆ ದೇವರ ಮೊರೆ ಹೋಗುವುದನ್ನ ನಾವು ನೋಡಿದ್ದೇವೆ. ಸಮಸ್ಯೆ ಪರಿಹಾರವಾಗಲಿ, ಮನಸ್ಸಿಗೆ ನೆಮ್ಮದಿ ಸಿಗಲಿ ಎಂದು ಹೋಮ, ಹವನ ಮಾಡಿಸುವುದನ್ನ ನಾವು ನೋಡಿದ್ದೇವೆ. ಆದ್ರೀಗ ಇಲ್ಲೊಂದು ಕಡೆ ಬೀದಿ ನಾಯಿಗಳ ಹಾವಳಿಗೆ ಬೇಸತ್ತು ದೇವರ ಮೊರೆ ಹೋಗಿದ್ದಾರೆ.
ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ! – ನಾಲ್ವರು ಸ್ಥಳದಲ್ಲೇ ಸಾವು
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೀದಿ ನಾಯಿಗಳ ದಿನೇ ದಿನೆ ಹೆಚ್ಚಾಗುತ್ತಿದೆ. ಸಿಕ್ಕ ಸಿಕ್ಕವರ ಮೇಲೆ ದಾಳಿ ಮಾಡುತ್ತಿದ್ದು, ರಸ್ತೆಯಲ್ಲಿ ಓಡಾಡುವುದೂ ಕಷ್ಟವಾಗಿದೆ. ಇದೀಗ ಬೆಂಗಳೂರಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ಬೀದಿ ನಾಯಿಗಳ ಹಾವಳಿಗೆ ಬೇಸತ್ತು ಅಲ್ಲಿನ ನಿವಾಸಿಗಳು ದೇವರ ಮೊರೆ ಹೋಗಿದ್ದಾರೆ. ಜೆಪಿ ನಗರದ ಎಲಿಟಾ ಪ್ರೊಮೆನೇಡ್ ಅಪಾರ್ಟ್ಮೆಂಟ್ ನಿವಾಸಿಗಳು ವಿಶಿಷ್ಟ ಕಾರ್ಯಕ್ರಮವನ್ನು ಆಯೋಜಿಸಿದ್ದು, ನಿವಾಸಿಗಳು ಕಾಲಭೈರವ ಮತ್ತು ದತ್ತಾತ್ರೇಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಬೀದಿ ನಾಯಿಗಳು ಹಾಗೂ ಸಾಕು ನಾಯಿಗಳಿಗೆ ಶಾಂತಿ ದೊರಕಲಿ, ಮಾನವರೊಂದಿಗೆ ಸ್ನೇಹಭಾವ ಬೆಳೆಸಲಿ ಎಂದು ನಿವಾಸಿಗಳು ಈ ಮೂಲಕ ಪ್ರಾರ್ಥಿಸಿದ್ದಾರೆ. ಅಪಾರ್ಟ್ಮೆಂಟ್ ಕ್ಲಬ್ ಹೌಸ್‌ನಲ್ಲಿ ನಡೆದ ಈ ಪೂಜೆಯಲ್ಲಿ ಅಪರಾರ್ಟ್‌ಮೆಂಟ್ ನಿವಾಸಿಗಳು ಭಾಗವಹಿಸಿದ್ದರು. ಜೊತೆಗೆ ಪೂಜೆಗೆ ಅವರ ಸಾಕು ನಾಯಿಗಳನ್ನು ಕರೆದುಕೊಂಡಿದ್ದರು.
ನಗರದ ಅನೇಕ ಅಪಾರ್ಟ್ಮೆಂಟ್‌ಗಳಲ್ಲಿ ಬೀದಿ ನಾಯಿಗಳ ಸಮಸ್ಯೆ ಹೆಚ್ಚುತ್ತಿರುವುದು ಗಮನಾರ್ಹ. ಕೆಲವೆಡೆ ಮಕ್ಕಳಿಗೆ ಹಾಗೂ ನಿವಾಸಿಗಳಿಗೆ ಕಚ್ಚುವ ಘಟನೆಗಳೂ ವರದಿಯಾಗಿವೆ. ಇಂತಹ ಸಂದರ್ಭದಲ್ಲಿ ಪೂಜೆ ಮತ್ತು ಪ್ರಾರ್ಥನೆಯ ಮೂಲಕ ಮಾನವ-ನಾಯಿ ನಡುವಿನ ಸ್ನೇಹವನ್ನು ಹೆಚ್ಚಿಸಲು ನಿವಾಸಿಗಳು ಮುಂದಾಗಿರುವುದು ವಿಶೇಷವಾಗಿದೆ. ಒಟ್ಟಿನಲ್ಲಿ, ಬೀದಿ ನಾಯಿಗಳು ಮತ್ತು ಜನರ ನಡುವೆ ಪರಸ್ಪರ ಪ್ರೀತಿ, ನಂಬಿಕೆ ಬೆಳೆಸುವ ಉದ್ದೇಶದಿಂದ ನಡೆದ ಈ ಕಾರ್ಯಕ್ರಮ ಗಮನಸೆಳೆದಿದೆ.

ನೋಡಿರಿ

