‘ಭಾರತ್ ಜೋಡೋ ಯಾತ್ರೆ’ ಸಮಾರೋಪ ಸಮಾರಂಭ – ದೇವೇಗೌಡರಿಗೆ ಆಹ್ವಾನ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ‘ಭಾರತ್ ಜೋಡೋ ಯಾತ್ರೆ’ ಕಾಶ್ಮೀರ ತಲುಪಿದೆ. ಶ್ರೀನಗರದಲ್ಲಿ ಜನವರಿ 30ರಂದು ಯಾತ್ರೆಯ ಸಮಾರೋಪ ಸಮಾರಂಭ ನಡೆಯಲಿದೆ. ಯಾತ್ರೆಯ ಸಮಾರೋಪ ಸಮಾರಂಭಕ್ಕೆ ಮಾಜಿ ಪ್ರಧಾನಿ, ಜೆಡಿಎಸ್ ನಾಯಕ ಹೆಚ್ ಡಿ ದೇವೇಗೌಡ ಅವರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಹ್ವಾನಿಸಿದ್ದಾರೆ.
ಇದನ್ನೂ ಓದಿ: ಚುನಾವಣೆ ತಯಾರಿ ನಡುವೆಯೇ ನಿಖಿಲ್ ಕುಮಾರಸ್ವಾಮಿ ಹೊಸ ಸಿನಿಮಾ ಘೋಷಣೆ
ಈ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ತನ್ನನ್ನು ಆತ್ಮೀಯವಾಗಿ ಆಹ್ವಾನಿಸಿದ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೇವೇಗೌಡರು ಪತ್ರ ಬರೆದಿದ್ದಾರೆ. ‘ನಾನು ಈ ಕಾರ್ಯಕ್ರಮದಲ್ಲಿ ಹಾಜರಾಗಲು ಆಗುತ್ತಿಲ್ಲ. ರಾಹುಲ್ ಗಾಂಧಿ ಅವರಿಗೆ ಶುಭಾಷಯ ಕೋರುತ್ತೇನೆ. ದೇಶದ ಒಗ್ಗೂಡಿವಿಕೆಗೆ ರಾಹುಲ್ ಗಾಂಧಿಯವರು ಪಾದಯಾತ್ರೆ ಮಾಡಿದ್ದಾರೆ. ರಾಷ್ಟ್ರಪಿತ ಮಹಾತ್ಮ ಗಾಂಧಿ ಹುತಾತ್ಮರಾದ ದಿನದಂದು ಈ ಕಾರ್ಯಕ್ರಮ ಆಯೋಜಿಸುತ್ತಿರುವುದು ಅತ್ಯಂತ ಸೂಕ್ತವಾಗಿದೆ. 3,500 ಕಿಲೋಮೀಟರ್ ರಾಹುಲ್ ಗಾಂಧಿ ಯಾತ್ರೆ ನಡೆಸಿದ್ದಾರೆ. ನನ್ನ ಶುಭಾಶಯಗಳನ್ನು ರಾಹುಲ್ ಗಾಂಧಿ ಅವರಿಗೆ ತಿಳಿಸಿ’ ಎಂದು ಪತ್ರದ ಮೂಲಕ ಅಭಿನಂದನೆ ತಿಳಸಿದ್ದಾರೆ.