ಕುವೈತ್ ವಿದ್ಯುತ್ ಸ್ಥಾವರದ ಮೇಲೆ ಇರಾನ್ ದಾಳಿ – ಭಾರತೀಯ ಕಾರ್ಮಿಕ ಸಾ*ವು

ಇಸ್ರೇಲ್ ಮತ್ತು ನೆರೆಯ ಗಲ್ಫ್ ಅರಬ್ ರಾಷ್ಟ್ರಗಳನ್ನು ಗುರಿಯಾಗಿಸಿಕೊಂಡು ಇರಾನ್‌ಪ್ರತೀಕಾರದ ದಾಳಿ ನಡೆಸುತ್ತಿದೆ. ಇದೀಗ ಇರಾನ್ ಕುವೈತ್‌ನ ವಿದ್ಯುತ್ ಸ್ಥಾವರ ಮತ್ತು ನಿರ್ಲವಣೀಕರಣ ಘಟಕದ ಮೇಲೆ ಇರಾನ್ ದಾಳಿ ನಡೆಸಿದ್ದು, ಭಾರತೀಯ ಕಾರ್ಮಿಕರೊಬ್ಬರು ಮೃತಪಟ್ಟಿದ್ದಾರೆ.
ಇದನ್ನೂ ಓದಿ: KKR ವಿರುದ್ಧ ಮುಂಬೈಗೆ ರೋಚಕ ಗೆಲುವು – ಅತ್ಯಧಿಕ ಮೊತ್ತ ಬೆನ್ನಟ್ಟಿದ ದಾಖಲೆ ಬರೆದ ಪಾಂಡ್ಯ ಪಡೆ
ಭಾನುವಾರ ಸಂಜೆ ದಾಳಿ ನಡೆದ್ದು, ಇದು ದೇಶದ ಮೇಲೆ ಇರಾನ್ ನಡೆಸಿದ ಅತಿದೊಡ್ಡ ಆಕ್ರಮಣಗಳಲ್ಲಿ ಒಂದಾಗಿದೆ ಎಂದು ಕುವೈತ್‌ನ ವಿದ್ಯುತ್, ನೀರು ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ತಿಳಿಸಿದೆ. ಇರಾನ್ ನಡೆಸಿದ ದಾಳಿಯಲ್ಲಿ ಸ್ಥಳದಲ್ಲಿದ್ದ ಭಾರತೀಯ ಕಾರ್ಮಿಕನೊಬ್ಬ ಮೃತಪಟ್ಟಿದ್ದು, ವಿದ್ಯುತ್ ಸ್ಥಾವರದ ಸೇವಾ ಕಟ್ಟಡ ಸಂಪೂರ್ಣವಾಗಿ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಮೊದಲು ಕುವೈತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇಂಧನ ಟ್ಯಾಂಕ್‌ಗಳ ಮೇಲೂ ಇರಾನ್ ಡ್ರೋನ್ ದಾಳಿ ನಡೆಸಿತ್ತು.
ಮತ್ತೊಂದ್ಕಡೆ ಇಸ್ರೇಲ್‌ನತ್ತ ಉಡಾಯಿಸಲಾದ ಕ್ಷಿಪಣಿಗಳ ಮೂಲಕ ಭಾರತದ ಜನರಿಗೆ ಧನ್ಯವಾದಗಳು ಎಂದು ಇರಾನ್ ಹೇಳಿದ ಮರುದಿನವೇ ಈ ಘಟನೆ ನಡೆದಿದೆ. ಘಟನೆಯ ಬಗ್ಗೆ ಕುವೈತ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿ ಅಥವಾ ವಿದೇಶಾಂಗ ಸಚಿವಾಲಯ ತಕ್ಷಣದ ಪ್ರತಿಕ್ರಿಯೆ ನೀಡಿಲ್ಲ.
ಇಸ್ರೇಲ್ ಮತ್ತು ಇತರ ದೇಶಗಳ ಮೇಲೆ ಉಡಾಯಿಸಲಾದ ಕ್ಷಿಪಣಿಗಳ ಮೇಲೆ ಭಾರತ, ಜರ್ಮನಿ, ಪಾಕಿಸ್ತಾನ ಮತ್ತು ಸ್ಪೇನ್ ದೇಶಗಳಿಗೆ ಧನ್ಯವಾದ ಅರ್ಪಿಸುವ ಕೈಬರಹದ ಚೀಟಿಗಳನ್ನು ಇರಾನ್ ಅಂಟಿಸಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
ಇಸ್ರೇಲ್ ಮೇಲಿನ ದಾಳಿ ಕುರಿತಂತೆ ಮುಂಬೈಯಲ್ಲಿರುವ ಇರಾನ್‌ನ ಕಾನ್ಸುಲೇಟ್ ಕಚೇರಿ ಸಾಮಾಜಿಕ ಮಾಧ್ಯಮ ವೇದಿಕೆ ಎಕ್ಸ್‌ನಲ್ಲಿ ಮಾಹಿತಿ ನೀಡಿತ್ತು. ಕ್ಷಿಪಣಿಗಳ ಮೇಲೆ ಭಾರತ, ಪಾಕಿಸ್ತಾನ, ಸ್ಪೇನ್ ಹಾಗೂ ಜರ್ಮನಿ ದೇಶದ ಜನರಿಗೆ ಧನ್ಯವಾದಗಳು ಎಂದು ಬರೆದಿರುವ ಫೋಟೊಗಳನ್ನೂ ಹಂಚಿಕೊಂಡಿತ್ತು.

ನೋಡಿರಿ

