ತೊಗರಿ ಬೆಳೆಗಾರರಿಗೆ ಸರ್ಕಾರದಿಂದ ಗುಡ್ ನ್ಯೂಸ್ – ನೆಟೆ ರೋಗದ ಹಾನಿಗೆ ಪರಿಹಾರ ಘೋಷಣೆ!

ತೊಗರಿ ಬೆಳೆಗಾರರಿಗೆ ಸರ್ಕಾರದಿಂದ ಗುಡ್ ನ್ಯೂಸ್ – ನೆಟೆ ರೋಗದ ಹಾನಿಗೆ ಪರಿಹಾರ ಘೋಷಣೆ!

ಧಾರಾಕಾರ ಮಳೆಯಿಂದ ತೊಗರಿ ಬೆಳೆ ಹಾಳಾಗಿ ಅಳಿದುಳಿದ ಬೆಳೆಯಾದ್ರೂ ಕೈಸೇರಬಹುದು ಅಂದುಕೊಂಡಿದ್ದ ರೈತರಿಗೆ ನೆಟೆರೋಗ ಶಾಕ್ ಕೊಟ್ಟಿತ್ತು. ಕಾಳಿಡುವ ಮುನ್ನವೇ ಗಿಡಗಳು ಹೊಲಗಳಲ್ಲಿ ಒಣಗಿ ಹೋಗಿದ್ದವು. ಹೀಗಾಗಿ ರೈತರು ಸರ್ಕಾರ ಪರಿಹಾರ ನೀಡುವಂತೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಪ್ರತಿಭಟನೆ ನಡೆಸಿದ್ದರು. ಕೊನೆಗೂ ಎಚ್ಚೆತ್ತಿರೋ ಸರ್ಕಾರ ಹಾನಿಗೊಳಗಾದ ರೈತರ ನೆರೆವಿಗೆ ಧಾವಿಸಿದೆ. ಇದನ್ನ “ವಿಶೇಷ ಪ್ರಕರಣ”ವೆಂದು ತೀರ್ಮಾನಿಸಿ ಪರಿಹಾರ ಘೋಷಣೆ ಮಾಡಿದೆ.

ಇದನ್ನೂ ಓದಿ: ಮೆಟ್ರೋ ಪ್ರಯಾಣಿಕರಿಗೆ ಶಾಕಿಂಗ್ ಸುದ್ದಿ – ನಾಲ್ಕು ದಿನ ಮೆಟ್ರೋ ಸಂಚಾರ ಸ್ಥಗಿತ

ಉತ್ತರ ಕರ್ನಾಟಕದ  ಬೀದರ್‌, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ನೆಟೆ ರೋಗದಿಂದ ತೊಗರಿ ಬೆಳೆಗೆ ಸಂಭವಿಸಿದ  ಬೆಳೆಹಾನಿಯನ್ನು ರಾಜ್ಯ ಸರ್ಕಾರ ವಿಶೇಷ ಪ್ರಕರಣವೆಂದು ಪರಿಗಣಿಸಿದೆ. ಪ್ರತಿ ಹೆಕ್ಟೇರ್‌ಗೆ 10,000 ರೂಪಾಯಿಯಂತೆ ಎನ್.ಡಿ.ಆರ್.ಎಫ್./ಎಸ್.ಡಿ.ಆರ್.ಎಫ್. ಮಾರ್ಗಸೂಚಿಯಂತೆ ಗರಿಷ್ಟ 2 ಹೆಕ್ಟೇರ್‌ಗೆ ಸೀಮಿತಗೊಳಿಸಿ ಬಾಧಿತ ರೈತರಿಗೆ ಪರಿಹಾರ ಘೋಷಿಸಿದೆ. ಒಟ್ಟು ಪರಿಹಾರ ಮೊತ್ತ 223 ಕೋಟಿಯೆಂದು ಅಂದಾಜಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಈ ತೀರ್ಮಾನ ಕೈಗೊಂಡಿದ್ದಾರೆ.

ಬೀದರ್‌, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಅಕಾಲಿಕ ಮಳೆ ಹಾಗೂ ನವೆಂಬರ್ ತಿಂಗಳಿನಲ್ಲಿ  ಉಂಟಾದ ಒಣ/ ಶುಷ್ಕ ವಾತಾವರಣದಿಂದ ತೊಗರಿ ಬೆಳೆಯಲ್ಲಿ ಸಂಕೀರ್ಣ ನೆಟೆ ರೋಗ ಕಾಣಿಸಿಕೊಂಡಿತ್ತು. ಈ ಮೂರು ಜಿಲ್ಲೆಗಳಲ್ಲಿ ಅತೀ ಹೆಚ್ಚು ಹಾನಿಯಾಗಿದ್ದು ಕಲಬುರಗಿ ಜಿಲ್ಲೆಯಲ್ಲಿ ಸುಮಾರು 1.98 ಲಕ್ಷ ಹೆಕ್ಟೇರ್, ಬೀದರ್ ಜಿಲ್ಲೆಯಲ್ಲಿ ಸುಮಾರು 0.145 ಲಕ್ಷ ಹೆಕ್ಟೇರ್ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಸುಮಾರು 0.1028 ಲಕ್ಷ ಹೆಕ್ಟೇರ್ ಒಟ್ಟಾರೆಯಾಗಿ 2.2278 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ತೊಗರಿ ಬೆಳೆ  ನೆಟೆ ರೋಗಕ್ಕೆ ಹಾನಿಯಾಗಿರುವುದು ವರದಿಯಾಗಿದೆ.

suddiyaana