ಯುದ್ಧದಿಂದ ರಾಜ್ಯದಲ್ಲಿ LPG ಗ್ಯಾಸ್ ಕೊರತೆ – ಬೀದಿಗೆ ಬಿದ್ದ ಆಟೋ ಚಾಲಕರ ಬದುಕು!

ಭಾರತ ಸೇರಿದಂತೆ ಹಲವು ದೇಶಗಳ ಮೇಲೆ ಅಮೆರಿಕ, ಇಸ್ರೇಲ್ ಹಾಗೂ ಇರಾನ್ ಯುದ್ಧದ ಪರಿಣಾಮ ಬೀರುತ್ತಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಆಟೋ ಚಾಲಕರ ಹೊಟ್ಟೆ ಮೇಲೆ ಹೊಡೆಯುತ್ತಿದೆ.ಬೆಂಗಳೂರಿನಲ್ಲಿ ಆಟೋ ಎಲ್ಪಿಜಿ ಕೊರತೆ ತೀವ್ರಗೊಂಡಿದ್ದು, ದಿನದ ದುಡಿಮೆಯನ್ನೇ ನಂಬಿ ಜೀವನ ನಡೆಸುತ್ತಿರುವ ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಬೆಂಗಳೂರಿನ ಸೇಂಟ್ ಮಾರ್ಕ್ಸ್ ರಸ್ತೆ, ಹೆಬ್ಬಾಳದ ಗುಡ್ಡದಹಳ್ಳಿ ವೃತ್ತ ಮತ್ತು ನವರಂಗ್ ಸೇರಿದಂತೆ ವಿವಿಧ ಎಲ್ಪಿಜಿ ಬಂಕ್ಗಳಲ್ಲಿ ಕಿಲೋಮೀಟರ್ಗಟ್ಟಲೇ ಆಟೋಗಳು ಕ್ಯೂ ನಿಂತಿರುವ ದೃಶ್ಯಗಳು ಕಂಡುಬರುತ್ತಿವೆ. ಬೆಳಗ್ಗಿನ ಜಾವ 4-6 ಗಂಟೆಗಳಿಂದಲೇ ಚಾಲಕರು ಗ್ಯಾಸ್ಗಾಗಿ ಕಾಯುತ್ತಿದ್ದಾರೆ.
ಇದನ್ನೂ ಓದಿ: ಬಕೆಟ್ಗೆ ಬಿದ್ದು ಮ*ಗು ಸಾವು – ಕರಳ ಬಳ್ಳಿ ಸಾವಿಗೆ ನಾನೇ ಕಾರಣವೆಂದು ತಾಯಿ ಸೂ*ಸೈಡ್
ಸಿಲಿಕಾನ್ ಸಿಟಿ ಬೆಂಗಳೂರಿನ ಹೊಸಹಳ್ಳಿ, ಸೇಂಟ್ ಮಾರ್ಕ್ಸ್ ರಸ್ತೆ, ಹೆಬ್ಬಾಳದ ಗುಡ್ಡದಹಳ್ಳಿ ವೃತ್ತ , ಮೂಡಲಪಾಳ್ಯ ಮತ್ತು ರಾಜಾಜಿನಗರದ ರಸ್ತೆಗಳಲ್ಲಿ ಆಟೋಗಳು ಎರಡು ಕಿಲೋಮೀಟರ್ವರೆಗೂ ಸಾಲುಗಟ್ಟಿ ನಿಂತಿವೆ. ‘ಕೊರೊನಾ ಸಮಯದಲ್ಲಿಯೂ ನಾವು ಇಷ್ಟು ಪರದಾಡಿಲ್ಲ’ ಎಂದು ಚಾಲಕರು ತಮ್ಮ ಅಳಲು ತೋಡಿಕೊಂಡಿದ್ದಾರೆ. ವಿಜಯನಗರ ಮತ್ತು ಚಾಮರಾಜಪೇಟೆಯ ಭಾರತ್ ಪೆಟ್ರೋಲ್ ಬಂಕ್ಗಳಲ್ಲಿ ಕೇವಲ 500 ರೂಪಾಯಿಗೆ ಸೀಮಿತಗೊಳಿಸಿ ಗ್ಯಾಸ್ ನೀಡಲಾಗುತ್ತಿದೆ. ಇದರಿಂದ ಆಕ್ರೋಶಗೊಂಡ ಚಾಲಕರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಗ್ಯಾಸ್ ಅಭಾವ ಕೇವಲ ಚಾಲಕರಿಗಷ್ಟೇ ಅಲ್ಲ, ಪ್ರಯಾಣಿಕರಿಗೂ ಶಾಪವಾಗಿ ಪರಿಣಮಿಸಿದೆ. ಬಳ್ಳಾರಿಯಲ್ಲಿ 9 ದಿನದ ಮಗುವನ್ನು ಆಸ್ಪತ್ರೆಗೆ ಕರೆದೊಯ್ಯಬೇಕಿದ್ದ ಆಟೋದಲ್ಲಿ ಗ್ಯಾಸ್ ಖಾಲಿಯಾಗಿದ್ದು, ಬಂಕ್ಗಳ ಮುಂದೆ ನೂರಾರು ಆಟೋಗಳು ನಿಂತಿದ್ದರಿಂದ ತಾಯಿ ಮತ್ತು ಮಗು ಪರದಾಡುವಂತಾಯಿತು.

ನೋಡಿರಿ

