ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ ಕೈಗಳಲ್ಲಿದ್ದಾರೆ.. ಚಿಂತಿಸಬೇಡಿ – ಇರಾನ್!

ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ ಕೈಗಳಲ್ಲಿದ್ದಾರೆ.. ಚಿಂತಿಸಬೇಡಿ – ಇರಾನ್!

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯಿಂದ ಪರ್ಷಿಯನ್ ಕೊಲ್ಲಿ ಮೂಲಕ ಭಾರತಕ್ಕೆ ಇಂಧನ ಸಾಗಿಸುತ್ತಿದ್ದ ಹಡಗುಗಳು ಹೊರ್ಮುಜ್ ಜಲಸಂಧಿಯ ಬಳಿ ನಿಲುಗಡೆಯಾಗಿವೆ. ಇದು ಆತಂಕಕ್ಕೆ ಕಾರಣವಾಗಿತ್ತು. ಇದೀಗ ಇರಾನ್‌ ಹಾರ್ಮುಜ್‌ ಜಲಸಂಧಿಯ ಬಗ್ಗೆ ನಮ್ಮ ಭಾರತೀಯ ಸ್ನೇಹಿತರು ಚಿಂತಿಸುವ ಅಗತ್ಯವಿಲ್ಲ ಎಂದು ತಿಳಿಸಿದೆ.

ಇದನ್ನೂ ಓದಿ:‌ ಅಗ್ನಿಸಾಕ್ಷಿ ಧಾರಾವಾಹಿ ಪ್ರಿಯರಿಗೆ ಗುಡ್‌ನ್ಯೂಸ್ – ಹೊಸ ಕಥೆ, ಹೊಸ ರೂಪದಲ್ಲಿ ಬರುತ್ತಿದೆ ಅಗ್ನಿಸಾಕ್ಷಿ ಸೀರಿಯಲ್

ಇರಾನ್‌ ಮೇಲೆ ಇಸ್ರೇಲ್‌ ಮತ್ತು ಅಮೆರಿಕ ಜಂಟಿ ದಾಳಿ ನಡೆಸಿದ ಹಿನ್ನೆಲೆ, ಅಸ್ತವ್ಯಸ್ತಗೊಂಡಿರುವ ಪ್ರಮುಖ ಹಡಗು ಮಾರ್ಗವಾದ ಹಾರ್ಮುಜ್‌ ಜಲಸಂಧಿ ಬಗ್ಗೆ ಇರಾನ್‌ ಪ್ರತಿಕ್ರಿಯಿಸಿದೆ. ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ ಕೈಗಳಲ್ಲಿದ್ದಾರೆ. ಅವರು ಚಿಂತಿಸುವ ಅಗತ್ಯವಿಲ್ಲ ಎಂದು ಇರಾನ್‌ ಸ್ಪಷ್ಟಪಡಿಸಿದೆ.

ನಮ್ಮ ಭಾರತೀಯ ಸ್ನೇಹಿತರು ಸುರಕ್ಷಿತ ಕೈಗಳಲ್ಲಿದ್ದಾರೆ.. ಚಿಂತಿಸಬೇಡಿ  ಎಂದು ಭಾರತದಲ್ಲಿರುವ ಇರಾನ್ ರಾಯಭಾರ ಕಚೇರಿ ಗುರುವಾರ ಎಕ್ಸ್‌ ಪೋಸ್ಟ್‌ನಲ್ಲಿ ತಿಳಿಸಿದೆ. ವಿಶ್ವದ ಶೇ.20 ರಷ್ಟು ಇಂಧನವನ್ನು ಸಾಗಿಸುವ ಹಡಗು ಮಾರ್ಗವಾದ ಹಾರ್ಮುಜ್ ಜಲಸಂಧಿಯನ್ನು ಇರಾನ್ ನಿಯಂತ್ರಿಸುತ್ತಿದೆ.

ಕಳೆದ ತಿಂಗಳು ಸಂಘರ್ಷ ಪ್ರಾರಂಭವಾದಾಗಿನಿಂದ, ಇರಾನ್ ಕೆಲವೇ ಹಡಗುಗಳಿಗೆ ಮಾತ್ರ ಅದನ್ನು ದಾಟಲು ಅವಕಾಶ ನೀಡಿದೆ. ಭಾರತ, ಚೀನಾ, ರಷ್ಯಾ, ಇರಾಕ್ ಮತ್ತು ಪಾಕಿಸ್ತಾನ ಸೇರಿದಂತೆ ಸ್ನೇಹಪರ ರಾಷ್ಟ್ರಗಳಿಗೆ ಹಾರ್ಮುಜ್ ಮೂಲಕ ಹಾದುಹೋಗಲು ಅವಕಾಶ ನೀಡಿರುವುದಾಗಿ ಇರಾನ್ ಹೇಳಿದೆ. ಈ ದಿಗ್ಬಂಧನವು ಭಾರತ ಸೇರಿದಂತೆ ಹಲವು ದೇಶಗಳಿಗೆ ಇಂಧನ ಪೂರೈಕೆಯಲ್ಲಿ ತೀವ್ರ ಅಡಚಣೆಗಳನ್ನುಂಟುಮಾಡಿದೆ. ಅನಿಲ ಮತ್ತು ಪೆಟ್ರೋಲ್‌, ಡೀಸೆಲ್‌ಗೆ ಸಮಸ್ಯೆ ಎದುರಾಗಿದೆ.

Shwetha M