ಹುಬ್ಬಳ್ಳಿಯ ಜಿಮ್ನಲ್ಲಿ ಲವ್ ಜಿಹಾದ್ ಆರೋಪ – ಸಮೀರ್ ಮೇಲೆ ಹಲ್ಲೆ?, ಪೊಲೀಸ್ ಠಾಣೆಯಲ್ಲಿ ಹೈಡ್ರಾಮಾ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್ ಆರೋಪ ಕೇಳಿಬಂದಿದೆ. ಹುಬ್ಬಳಿಯ ವಿಜಯನಗರದ ನಿವಾಸಿ ಸಮೀರ್, ಹಿಂದೂ ಯುವತಿಯನ್ನು ಪರಿಚಯಿಸಿಕೊಂಡು ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಲು ಯತ್ನಿಸಿದ್ದಾನೆಂದು ಹಿಂದೂ ಸಂಘಟನೆಗಳು ಆರೋಪಿಸಿದ್ದು, ಈ ಸಂಬಂಧ ಹಿಂದು ಕಾರ್ಯಕರ್ತರು ಸಮೀರ್ ನನ್ನು ಹಿಡಿದು ಹಳೇ ಹುಬ್ಬಳ್ಳಿ ಠಾಣೆಗೆ ಪೊಲೀಸರಿಗೆ ಒಪ್ಪಿಸಿದ್ದಾರೆ.
ಯುವತಿ ಮತ್ತು ಸಮೀರ್ ನಡುವೆ ಜಿಮ್ನಲ್ಲಿ ಪರಿಚಯವಾಗಿತ್ತು. ಹಿಂದೂ ಕಾರ್ಯಕರ್ತರು ಯುವಕನನ್ನು ಹಿಡಿದು ಪೊಲೀಸರ ವಶಕ್ಕೊಪ್ಪಿಸಿದ್ದು, ಇದಾದ ಬಳಿಕ ಪರಿಸ್ಥಿತಿ ಮತ್ತಷ್ಟು ಉದ್ವಿಗ್ನಗೊಂಡಿದೆ. ಸಮೀರ್ ಕುಟುಂಬದವರು ವಿಕಾಸನಗರದಲ್ಲಿರುವ ಯುವತಿಯ ಮನೆಗೆ ನುಗ್ಗಿ ಗಲಾಟೆ ನಡೆಸಿದರೆಂಬ ಆರೋಪ ಕೇಳಿಬಂದಿದೆ. ಸಮೀರ್ ಅನ್ನು ಅಪಹರಿಸಲಾಗಿದೆ ಎಂದು ಆರೋಪಿಸಿ ಕುಟುಂಬಸ್ಥರು ಪ್ರತಿಭಟನೆ ನಡೆಸಿದರೆಂಬ ಮಾಹಿತಿ ಲಭ್ಯವಾಗಿದೆ. ಯುವತಿಯ ಮನೆಯವರ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ದೂರೂ ಕೇಳಿಬಂದಿದೆ.
ಇದನ್ನೂ ಓದಿ: ವರದಕ್ಷಿಣೆ ಕಿರುಕುಳಕ್ಕೆ ಹೋಯ್ತು ಸ್ಟಾಫ್ ನರ್ಸ್ ಪ್ರಾಣ – ಆತ್ಮಹತ್ಯೆಗೆ ಯತ್ನಿಸಿದ್ದ 4 ತಿಂಗಳ ಗರ್ಭಿಣಿ ಸಾ*ವು
ಈ ಘಟನೆಯ ಹಿನ್ನೆಲೆಯಲ್ಲಿ ಜಿಮ್ಗಳು ಲವ್ ಜಿಹಾದ್ ಕೇಂದ್ರಗಳಾಗುತ್ತಿವೆ ಎಂಬ ಆರೋಪವನ್ನು ಕೆಲ ಸಂಘಟನೆಗಳು ವ್ಯಕ್ತಪಡಿಸಿದ್ದು, ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ. ವಾಸ್ತವಾಂಶ ತಿಳಿದುಬರುವವರೆಗೆ ಸಾರ್ವಜನಿಕರು ಶಾಂತಿ ಕಾಪಾಡುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಅನ್ಯಧರ್ಮದ ಯುವಕ ಸಮೀರ್ಗೆ ತಕ್ಕ ಶಿಕ್ಷೆ ಆಗಬೇಕು, ಅವನ ಜಿಮ್ ಬಂದ್ ಮಾಡಬೇಕೆಂದು ಒತ್ತಾಯಿಸಿ ಹಿಂದೂಪರ ಸಂಘಟನೆಗಳು ಒತ್ತಾಯ ಮಾಡಿದ್ದು, ಈತ ಜಿಮ್ನಲ್ಲಿ ಹಿಂದೂ ಹುಡುಗಿಯನ್ನು ಪರಿಚಯ ಮಾಡಿಕೊಂಡು ಲವ್ ಜಿಹಾದ್ ಮಾಡ್ತಿದ್ದ ಎಂದು ಆರೋಪಿಸಿದ್ದಾರೆ. ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಬೇಟಿ ನೀಡಿದ್ದಾರೆ. ನಂತರ ಯುವಕ ಮತ್ತು ಯುವತಿ ಮನೆಯವರನ್ನು ಭೇಟಿ ಮಾಡಿ ಮಾತನಾಡಿದ್ದಾರೆ.

ನೋಡಿರಿ

