ದ್ವಿತೀಯ ಪಿಯುಸಿ ಫಲಿತಾಂಶದ ದಿನಾಂಕ ಫಿಕ್ಸ್! – ರಿಸಲ್ಟ್ ನೋಡುವುದು ಹೇಗೆ?

ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳು ಮತ್ತು ಪೋಷಕರು ಕಾಯುತ್ತಿರುವ ದ್ವಿತೀಯ ಪಿಯುಸಿ ಫಲಿತಾಂಶ ಇಂದು ಪ್ರಕಟವಾಗಲಿದೆ ಎಂದು ಹೇಳಲಾಗಿತ್ತು. ಆದ್ರೆ ದ್ವಿತೀಯ ಪಿಯುಸಿ ಫಲಿತಾಂಶ ಮುಂದೂಡಿಕೆ ಮಾಡಲಾಗಿದೆ. ಏ. 9 ರಂದು ಫಲಿತಾಂಶ ಪ್ರಕಟವಾಗಲಿದೆ.
ಇದನ್ನೂ ಓದಿ: ಕೇಂದ್ರ ಸರ್ಕಾರದಿಂದ ಗುಡ್ನ್ಯೂಸ್! – LPG ಸಿಲಿಂಡರ್ ಹಂಚಿಕೆ ಎರಡು ಪಟ್ಟು ಹೆಚ್ಚಳ!
ಕಳೆದ ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ನಡೆಸಲಾಗಿತ್ತು. ಇಂದು ಲಕ್ಷಾಂತರ ವಿದ್ಯಾರ್ಥಿಗಳ ರಿಸಲ್ಟ್ ಹೊರಬೀಳಲಿದೆ ಎನ್ನಲಾಗಿತ್ತು. ಆದರೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಫಲಿತಾಂಶ ಪ್ರಕಟಿಸಲು ಸಿದ್ಧತೆ ಮಾಡಿಕೊಂಡಿದ್ದರೂ, ತಾಂತ್ರಿಕ ಕಾರಣಗಳಿಂದಾಗಿ ಪ್ರಕಟಣೆಯನ್ನು ಮುಂದೂಡಲಾಗಿತ್ತು. ಇದೀಗ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವು ಏಪ್ರಿಲ್ 9 ರಂದು ಪ್ರಕಟವಾಗಲಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಈಗಾಗಲೇ ಮೌಲ್ಯಮಾಪನ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಫಲಿತಾಂಶ ಬಿಡುಗಡೆಗೆ ಬೇಕಾದ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದೆ. ಫಲಿತಾಂಶ ಪ್ರಕಟಣೆಯ ಕುರಿತು ಇಲಾಖೆಯು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಈಗಾಗಲೇ ಪತ್ರ ಬರೆದಿದೆ. ಸಚಿವರ ಲಭ್ಯತೆಯನ್ನು ಆಧರಿಸಿ ಅಧಿಕೃತವಾಗಿ ಫಲಿತಾಂಶ ಹೊರಬೀಳಲಿದೆ. ತಾಂತ್ರಿಕ ಕೆಲಸಗಳು ಹಾಗೂ ಅಂಕಗಳ ಕ್ರೋಡೀಕರಣ ಪ್ರಕ್ರಿಯೆ ಮುಗಿದಿದ್ದು, ಏಪ್ರಿಲ್ 9 ರಂದು ರಿಸಲ್ಟ್ ನೀಡಲು ಇಲಾಖೆ ಉತ್ಸುಕವಾಗಿದೆ.
ದ್ವಿತೀಯ ಪಿಯುಸಿ ಫಲಿತಾಂಶ ನೋಡುವುದು ಹೇಗೆ?
ಇನ್ನು ದ್ವಿತೀಯ ಪಿಯುಸಿ ಫಲಿತಾಂಶ ಪಡೆಯಲು ಹಲವು ಲಿಂಕ್ಗಳನ್ನು ಶಿಕ್ಷಣ ನೀಡಿದೆ. karresults.nic.in ಮತ್ತು kseab.karnataka.gov.in ಅನ್ನು ಶಿಕ್ಷಣ ಇಲಾಖೆ ನೀಡಿದೆ. ಒಂದು ವೇಳೆ ಈ ಲಿಂಕ್ಗಳಲ್ಲಿ ದೋಷ ಬಂದರೆ, ಇತರ ಆಯ್ಕೆಯನ್ನು ಕೂಡ ನೀಡಲಾಗಿದೆ. PUC ಫಲಿತಾಂಶಗಳನ್ನು ಡಿಜಿಲಾಕರ್ ವೆಬ್ಸೈಟ್ – digilocker.gov.in ನಲ್ಲಿಯೂ ಪರಿಶೀಲಿಸಲು ಅವಕಾಶವನ್ನು ನೀಡಲಾಗಿದೆ.

ನೋಡಿರಿ

