ಬಸವ ಜಯಮೃತ್ಯುಂಜಯ ಸ್ವಾಮೀಜಿಗಳು ಸ್ವಾಮೀಜಿಗಳಾಗಿ ಉಳಿದಿಲ್ಲ – MLA ವಿಜಯಾನಂದ ಕಾಶಪ್ಪನವರ್ ಶಾಕಿಂಗ್ ಹೇಳಿಕೆ

ಕೂಡಲ ಸಂಗಮದ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಮೇಲೆ ಲೈಂಗಿಕ ಕಿರುಕುಳ ಆರೋಪ ದಾಖಲಾಗಿದೆ. ಸ್ವಾಮೀಜಿ ತನ್ನ ವಿಡಿಯೋ ಮಾಡಿಕೊಂಡು ಬೆದರಿಕೆ ಹಾಕುತ್ತಿದ್ದಾರೆ ಎಂದು ಬೆಂಗಳೂರು ಮೂಲದ ಮಹಿಳೆಯ ಆರೋಪ ಮಾಡಿದ್ದಾರೆ. ಈ ಕುರಿತು ರಾಜ್ಯ ಮಹಿಳಾ ಆಯೋಗಕ್ಕೆ ದೂರು ದಾಖಲು ಮಾಡಿದ್ದಾರೆ. ಇದರ ಬೆನ್ನಲ್ಲೇ ಈ ಪ್ರಕರಣ ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಈ ಬಗ್ಗೆ ಕಾಂಗ್ರೆಸ್ ಶಾಸಕ ಹಾಗೂ ಪಂಚಮಸಾಲಿ ಸಮಾಜದ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ್ ಪ್ರತಿಕ್ರಿಯಿಸಿದ್ದು, ಬೆಂಕಿ ಇಲ್ಲದೆ ಹೊಗೆ ಆಡುವುದಿಲ್ಲ. ಸ್ವಾಮೀಜಿಗಳು ಚಾರಿತ್ರ್ಯವಂತರಾಗಿದ್ದರೆ. ಕೋರ್ಟ್ ನಿಂದ ಇಂಜೆಕ್ಷನ್ ಯಾಕೆ ತರುತ್ತಿದ್ದರು? ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ಕೊಡಗಿನಲ್ಲಿ ವಿರೋಶ್ ಗ್ರ್ಯಾಂಡ್ ಪಾರ್ಟಿ! – ಕೊಡವ ಸಂಪ್ರದಾಯದಲ್ಲಿ ಮಿಂಚಿದ ರಶ್ಮಿಕಾ ಮಂದಣ್ಣ
ಬಾಗಲಕೋಟೆಯಲ್ಲಿ ಮಾತನಾಡಿದ ವಿಜಯಾನಂದ ಕಾಶಪ್ಪನವರ್. ಬಸವ ಜಯಮೃತ್ಯುಂಜಯ ಸ್ವಾಮೀಜಿಗಳು ಸ್ವಾಮೀಜಿಗಳಾಗಿ ಉಳಿದಿಲ್ಲ. ನಡೆ-ನುಡಿಯಲ್ಲಿ ಅವರು ಸ್ವಾಮೀಜಿಗಳಾಗಿಲ್ಲ. ಅದೇ ಹಿನ್ನೆಲೆಯಿಂದ ನಾವು ಅವರನ್ನು ಪೀಠದಿಂದ ಉಚ್ಚಾಟನೆ ಮಾಡಿದ್ದು. ಉಚ್ಚಾಟನೆಗೂ ಮುನ್ನ ಅವರಿಗೆ ಸುಧಾರಿಸಿಕೊಳ್ಳಿ ಎಂದು ಹೇಳಿ ನೋಟಿಸ್ ಕೂಡ ಕೊಟ್ಟಿದ್ದೆವು. ಆದರೂ ಅವರು ಬದಲಾಗಲಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು ನಾವು ಉಚ್ಚಾಟನೆ ಮಾಡಿದ್ದೆವು. ಕಾಲ ಎಲ್ಲ ಉತ್ತರ ನೀಡುತ್ತಿದೆ. ಇದೀಗ ಅದೆಲ್ಲ ನಡೆಯುತ್ತಿದೆ ಎಂದಿದ್ದಾರೆ.
ಮಹಿಳೆ ಬ್ಲಾಕ್ ಮೇಲ್ ಮಾಡಿದಳು 3 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದಳು ಎಂಬ ವಿಚಾರದ ಬಗ್ಗೆ ಮಾತನಾಡಿ,
ಮಹಿಳೆ ಹಣಕ್ಕೆ ಡಿಮ್ಯಾಂಡ್ ಮಾಡಿದಳು ಬ್ಲಾಕ್ ಮೇಲ್ ಮಾಡಿದ್ದಳು ಎನ್ನುವುದಾದರೆ, ಏನಾದರೂ ಆಗಿರಲೇಬೇಕು ಅಲ್ವಾ? ಸುಮ್ಮನೆ ಒಬ್ಬ ಮಹಿಳೆ ಯಾಕೆ ಆರೋಪ ಮಾಡುತ್ತಾರೆ. ಅಂತಹ ಕೃತ್ಯಕ್ಕೆ ಇವರು ಆಸ್ಪದ ಯಾಕೆ ನೀಡಬೇಕು. ಸಮಯ ಸಂದರ್ಭ ಬಂದಾಗ ಎಲ್ಲವೂ ಆಗಲಿದೆ. ಈಗ ಒಂದೊಂದೇ ಹೊರಗೆ ಬರುತ್ತಿದೆ. ಘಟನೆಗೆ ಸಂಬಂಧಪಟ್ಟಂತೆ ಕೋರ್ಟ್ ಇದೆ ಕಾನೂನಿದೆ. ಅದು ಅದರ ಪ್ರಕಾರ ಏನಾಗಬೇಕು ಆಗುತ್ತದೆ ಎಂದು ಹೇಳಿದ್ದಾರೆ.

ನೋಡಿರಿ

