ಮುಂಬೈ ವಿರುದ್ದ RRಗೆ ಭರ್ಜರಿ ಜಯ – ಜಸ್‌ಪ್ರೀತ್ ಬುಮ್ರಾಗೆ ಶಾಕ್ ಕೊಟ್ಟ ವೈಭವ್

ಯಶಸ್ವಿ ಜೈಸ್ವಾಲ್ ಸ್ಪೋಟಕ ಬ್ಯಾಟಿಂಗ್ ಹಾಗೂ ಬೌಲರ್‌ಗಳ ಪರಿಣಾಮಕಾರಿ ಬೌಲಿಂಗ್ ದಾಳಿಯಿಂದ ಮುಂಬೈ ವಿರುದ್ದ ರಾಜಸ್ಥಾನ್ ರಾಯಲ್ಸ್ ಭರ್ಜರಿ ಜಯ ಸಾಧಿಸಿದೆ. ಮಳೆಯಿಂದ 11 ಓವರ್‌ಗಳಿಗ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 27 ರನ್‌ಗಳ ಗೆಲುವು ಸಾಧಿಸಿತು. 2026ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸತತ ಮೂರು ಪಂದ್ಯಗಳ ಗೆಲುವಿನ ಬಳಿಕ ರಿಯಾನ್ ಪರಾಗ್ ನಾಯಕತ್ವದ ಆರ್‌ಆರ್, ಪಾಯಿಂಟ್ಸ್ ಟೇಬಲ್‌ನಲ್ಲಿ ಪುನಃ ಅಗ್ರ ಸ್ಥಾನಕ್ಕೆ ಮರಳಿತು. ಹಾರ್ದಿಕ್ ಪಾಂಡ್ಯ ನಾಯಕತ್ವದ ಮುಂಬೈ ಸತತ ಎರಡನೇ ಪಂದ್ಯದಲ್ಲಿಯೂ ಸೋಲು ಒಪ್ಪಿಕೊಂಡಿತು.
ಬರ್ಸಪರ ಕ್ರೀಡಾಂಗಣದಲ್ಲಿ ನಡೆದಿದ್ದ ಐಪಿಎಲ್ ಟೂರ್ನಿಗೆ ಮಳೆ ಅಡ್ಡಿಯಾಗಿತ್ತು. ಈ ಹಿನ್ನೆಲೆಯಲ್ಲಿ ಪಂದ್ಯವನ್ನು 11 ಓವರ್‌ಗಳಿಗೆ ಇಳಿಸಲಾಯಿತು. ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾದ ರಾಜಸ್ಥಾನ್ ರಾಯಲ್ಸ್ ತಂಡ, ಜೈಸ್ವಾಲ್ (77 ರನ್) ಹಾಗೂ ವೈಭವ್ ಸೂರ್ಯವಂಶಿ (39 ರನ್) ಅವರ ಅಬ್ಬರದ ಬ್ಯಾಟಿಂಗ್ ಬಲದಿಂದ 11 ಓವರ್‌ಗಳಿಗೆ 3 ವಿಕೆಟ್ ನಷ್ಟಕ್ಕೆ 150 ರನ್‌ಗಳನ್ನು ಕಲೆ ಹಾಕಿತು. ಬಳಿಕ ಗುರಿಯನ್ನು ಹಿಂಬಾಲಿಸಿದ ಮುಂಬೈ ಇಂಡಿಯನ್ಸ್, ತನ್ನ ಬ್ಯಾಟಿಂಗ್ ವೈಫಲ್ಯದಿಂದಾಗಿ 11 ಓವರ್‌ಗಳನ್ನು ಮುಗಿಸಿದರೂ 9 ವಿಕೆಟ್‌ಗಳ ನಷ್ಟಕ್ಕೆ 123 ರನ್‌ಗಳಿಗೆ ಸೀಮಿತವಾಯಿತು.
ಇದನ್ನೂ ಓದಿ: PSL ನಡುವೆ ಡೇವಿಡ್ ವಾರ್ನರ್ ಅರೆಸ್ಟ್ – ರಾತ್ರಿ ವೇಳೆ ಆಗಿದ್ದೇನು ಗೊತ್ತಾ
ಜಸ್‌ಪ್ರೀತ್ ಬುಮ್ರಾಗೆ ವೈಭವ್ ಶಾಕ್
ಟಾಸ್ ಸೋತು ಮೊದಲು ಬ್ಯಾಟ್ ಮಾಡುವಂತಾದ ಆರ್‌ಆರ್ ಪರ ಇನಿಂಗ್ಸ್ ಆರಂಭಿಸಿದ ಯಶಸ್ವಿ ಜೈಸ್ವಾಲ್ ಹಾಗೂ ವೈಭವ್ ಸೂರ್ಯವಂಶಿ ತಮ್ಮ ಸ್ಪೋಟಕ ಬ್ಯಾಟಿಂಗ್ ಮೂಲಕ ಮುಂಬೈ ಬೌಲಿಂಗ್ ದಾಳಿಯನ್ನು ಮೆಟ್ಟಿ ನಿಂತರು. ಈ ಜೋಡಿ ಮೊದಲನೇ ವಿಕೆಟ್‌ಗೆ ಕೇವಲ 30 ಎಸೆತಗಳಲ್ಲಿ 80 ರನ್‌ಗಳನ್ನು ಕಲೆ ಹಾಕಿತು. ಇದು ಪಂದ್ಯದ ಪಾಲಿಗೆ ಟರ್ನಿಂಗ್ ಪಾಯಿಂಟ್ ಆಯಿತು. ಜಸ್‌ಪ್ರೀತ್ ಬುಮ್ರಾಗೆ 15ರ ವಯಸ್ಸಿನ ವೈಭವ್ ಸೂರ್ಯವಂಶಿ ಹೇಗೆ ಬ್ಯಾಟ್ ಮಾಡಬಹುದೆಂದು ಸಾಕಷ್ಟು ಕುತೂಹಲವಿತ್ತು. ಅದರಂತೆ ವೈಭವ್, ಬುಮ್ರಾ ಅವರ ಮೊದಲನೇ ಎಸೆತದಲ್ಲಿ ಲಾಂಗ್ ಆನ್ ಮೇಲೆ ಸಿಕ್ಸರ್ ಬಾರಿಸಿ ಎಲ್ಲರಿಗೂ ಅಚ್ಚರಿ ಮೂಡಿಸಿದರು, ಇದೇ ಓವರ್‌ನಲ್ಲಿ ಬುಮ್ರಾಗೆ ವೈಭವ್ ಮತ್ತೊಂದು ಸಿಕ್ಸರ್ ಸಿಡಿಸಿದ್ದು ವಿಶೇಷ. ಒಟ್ಟು 14 ಎಸೆತಗಳಲ್ಲಿ 5 ಸಿಕ್ಸರ್ ಹಾಗೂ ಒಂದು ಬೌಂಡರಿಯೊಂದಿಗೆ ಸೂರ್ಯವಂಶಿ 39 ರನ್ ಗಳಿಸಿ ವಿಕೆಟ್ ಒಪ್ಪಿಸಿದರು.

ನೋಡಿರಿ

