ಇರಾನ್ – ಅಮೆರಿಕಾ ನಡುವೆ 14 ದಿನ ಕದನ ವಿರಾಮ – ಲೆಬನಾನ್ ಮೇಲೆ ದಾಳಿ ಮಾಡೋಕೆ ಇಸ್ರೇಲ್ ಬೇರೆ ಪ್ಲ್ಯಾನ್ ಮಾಡಿದ್ಯಾ? ?

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ ಎರಡು ವಾರಗಳ ತಾತ್ಕಾಲಿಕ ಕದನ ವಿರಾಮಕ್ಕೆ ಇಸ್ರೇಲ್ ಬೆಂಬಲ ಸೂಚಿಸಿದರೂ, ಈ ವಿರಾಮ ಎಲ್ಲ ಪ್ರದೇಶಗಳಿಗೂ ಅನ್ವಯಿಸುವುದಿಲ್ಲ ಎಂಬ ಸಂದೇಶವನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ನೀಡಿದ್ದಾರೆ. ಈ ಕದನ ವಿರಾಮವು ಕೇವಲ ಇರಾನ್ ಮತ್ತು ಅಮೆರಿಕ ನಡುವಿನ ಸಂಘರ್ಷಕ್ಕೆ ಸಂಬಂಧಿಸಿದ್ದಾಗಿದ್ದು, ಲೆಬನಾನ್ನಲ್ಲಿರುವ ಹಿಜ್ಬುಲ್ಲಾ ವಿರುದ್ಧದ ಇಸ್ರೇಲ್ನ ಕಾರ್ಯಾಚರಣೆಗಳು ಮುಂದುವರಿಯಲಿವೆ ಎಂದು ನೆತನ್ಯಾಹು ತಿಳಿಸಿದ್ದಾರೆ.
ಇದನ್ನೂ ಓದಿ: ಕೇರಳದಿಂದ ಟ್ರೆಕ್ಕಿಂಗ್ಗೆ ಬಂದಿದ್ದ ಬಾಲಕಿ ಮುಳ್ಳಯ್ಯನಗಿರಿ ತಪ್ಪಲಿನಲ್ಲಿ ನಾಪತ್ತೆ!
ಇರಾನ್ ತನ್ನ ಪರಮಾಣು, ಕ್ಷಿಪಣಿ ಮತ್ತು ಭಯೋತ್ಪಾದನಾ ಬೆದರಿಕೆಗಳನ್ನು ನಿಲ್ಲಿಸಬೇಕು ಹಾಗೂ ಹಾರ್ಮುಜ್ ಜಲಸಂಧಿಯನ್ನು ತಕ್ಷಣವೇ ಮುಕ್ತಗೊಳಿಸಬೇಕು ಎಂಬ ಷರತ್ತಿನ ಮೇಲೆ ಕದನ ವಿರಾಮ ಒಪ್ಪಂದಕ್ಕೆ ಇಸ್ರೇಲ್ ಬೆಂಬಲ ವ್ಯಕ್ತಪಡಿಸಿದೆ. ಬನಾನ್ನಲ್ಲಿ ಇರಾನ್ ಬೆಂಬಲಿತ ಹಿಜ್ಬುಲ್ಲಾ ಸಂಘಟನೆಯ ವಿರುದ್ಧ ಇಸ್ರೇಲ್ ಈಗಾಗಲೇ ಸೈನಿಕ ಕಾರ್ಯಾಚರಣೆಗಳನ್ನು ಮುಂದುವರೆಸುತ್ತಿದ್ದು, ಈ ಪ್ರದೇಶದಲ್ಲಿ ದಾಳಿಗಳನ್ನು ನಿಲ್ಲಿಸುವ ಯಾವುದೇ ಉದ್ದೇಶ ಇಲ್ಲ ಇಸ್ರೇಲ್ ಸ್ಪಷ್ಟಪಡಿಸಿದೆ. ಇದರಿಂದ ಇರಾನ್ ವಿರುದ್ಧದ ನೇರ ಯುದ್ಧ ತಾತ್ಕಾಲಿಕವಾಗಿ ನಿಲ್ಲಿದರೂ, ಪರೋಕ್ಷ ಯುದ್ಧಗಳು ಇನ್ನೂ ಮುಂದುವರಿಯಲಿವೆ ಎಂಬ ಆತಂಕ ಹೆಚ್ಚಾಗಿದೆ.
ಈ ಬೆಳವಣಿಗೆಗಳಿಂದ ಮಧ್ಯಪ್ರಾಚ್ಯದಲ್ಲಿ ಸಂಘರ್ಷ ಮುಂದುವರೆಯುವ ಸಾಧ್ಯತೆಗಳು ಕಂಡು ಬರುತ್ತಿವೆ. ಒಂದು ಕಡೆ ಇರಾನ್-ಅಮೆರಿಕಾ ನಡುವೆ ಕದನ ವಿರಾಮ ಜಾರಿಯಾಗುತ್ತಿದ್ದರೆ, ಮತ್ತೊಂದೆಡೆ ಇಸ್ರೇಲ್-ಲೆಬನಾನ್ ಗಡಿಯಲ್ಲಿ ಉದ್ವಿಗ್ನತೆ ಹೆಚ್ಚುತ್ತಿದೆ. ಇದು ಯಾವ ಕ್ಷಣದಲ್ಲಾದರೂ ದೊಡ್ಡ ಮಟ್ಟದ ಸಂಘರ್ಷಕ್ಕೆ ದಾರಿ ಮಾಡಿಕೊಡುವ ಸಾಧ್ಯತೆ ಇದೆ.
ಅಮೆರಿಕ ಹಾಗೂ ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ ಬೆನ್ನಲ್ಲೇ ಇರಾನ್ ಜನತೆ ರಾಷ್ಟ್ರಧ್ವಜ ಹಿಡಿದು ವಿಜಯೋತ್ಸವ ಆಚರಣೆ ಮಾಡಿದೆ. ಕದನ ವಿರಾಮ ಹಿನ್ನೆಲೆ ಟೆಹ್ರಾನ್ನ ಪ್ರಮುಖ ಬೀದಿಗಳಲ್ಲಿ ವಿಜಯೋತ್ಸವ ಆಚರಿಸಲಾಗಿದೆ. ಜೀವ್ಸ್ ಹಾಗೂ ಅಮೆರಿಕನ್ನರ ಮೇಲೆ ನಮ್ಮ ಗೆಲುವಾಗಿದೆ ಎಂದು ಘೋಷಣೆ ಕೂಗುತ್ತಾ ಸಂಭ್ರಮಾಚರಣೆ ಮಾಡಿದ್ದಾರೆ.

ನೋಡಿರಿ

