ಸಣ್ಣ ರೋಗ ಬಂದ್ರೂ ICUಗೆ ಶಿಫ್ಟ್! – ಖಾಸಗಿ ಆಸ್ಪತ್ರೆ ಕರಾಳತೆ ಕಂಡು ಒಂದೇ ದಿನಕ್ಕೆ ಕೆಲಸಕ್ಕೆ ರಾಜೀನಾಮೆ ನೀಡಿದ ವೈದ್ಯೆ!

ಹಣ ಕಂಡ್ರೆ ಹೆಣ ಕೂಡ ಬಾಯಿ ಬಿಡುತ್ತೆ ಅನ್ನೋ ಮಾತಿದೆ. ಈಗಿನ ಕಾಲದಲ್ಲಿ ಜನರು ಹಣಕ್ಕಾಗಿ ಏನು ಬೇಕಾದ್ರೂ ಮಾಡುತ್ತಾರೆ. ಜೀವ ಉಳಿಸಬೇಕಾದ ವೈದ್ಯರು ಕೂಡ ಇತ್ತೀಚೆಗೆ ರೋಗಿಗಳ ಜೀವದ ಜೊತೆ ಆಟವಾಡುವ ಪ್ರಕರಣ ದಿನೇ ದಿನೆ ಬೆಳಕಿಗೆ ಬರುತ್ತಿವೆ. ಇದೀಗ ಇಲ್ಲೊಂದು ಕಡೆ ಯುವ ವೈದ್ಯೆ ಕೆಲವು ಖಾಸಗಿ ಆಸ್ಪತ್ರೆಗಳು ರೋಗಿಗಳನ್ನು ಕೇವಲ ಹಣ ಮಾಡುವ ಯಂತ್ರಗಳಂತೆ ನೋಡುತ್ತಿವೆ ಎಂಬ ಕಹಿಸತ್ಯವೊಂದನ್ನು ಅನಾವರಣ ಮಾಡಿದ್ದಾರೆ. ಅಷ್ಟೇ ಅಲ್ಲ ಆ ವೈದ್ಯೆ ಕೆಲಸಕ್ಕೆ ಸೇರಿದ ಒಂದೇ ದಿನದಲ್ಲಿ ತನ್ನ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಇದನ್ನೂ ಓದಿ; ಅಮೆರಿಕಾ – ಇರಾನ್ ಕದನ ವಿರಾಮ ಬೆನ್ನಲ್ಲೇ ತೈಲ ಬೆಲೆಯಲ್ಲಿ ಭಾರಿ ಕುಸಿತ!
ಈ ಘಟನೆ ಚಂಡೀಗಢದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದ್ದು, ಈಗ ದೇಶಾದ್ಯಂತ ಭಾರಿ ಚರ್ಚೆಗೆ ಗ್ರಾಸವಾಗಿದೆ. ಯುವ ವೈದ್ಯೆ ಡಾ. ಪ್ರಭ್ಲೀನ್ ಕೌರ್ ಕೆಲಸಕ್ಕೆ ರಾಜೀನಾಮೆ ನೀಡಿದ ವೈದ್ಯೆ.
ವೈದ್ಯೆ ಡಾ. ಪ್ರಭ್ಲೀನ್ ಕೌರ್ ಅವರು ಚಂಡೀಗಢದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದಕ್ಕೆ ವೈದ್ಯೆಯಾಗಿ ಕೆಲಸಕ್ಕೆ ಸೇರಿದ್ದರು. ಆದರೆ, ಕೆಲಸಕ್ಕೆ ಸೇರಿದ ಮೊದಲ ದಿನವೇ ಆಸ್ಪತ್ರೆಯ ಆಡಳಿತ ಮಂಡಳಿಯ ಅಮಾನವೀಯ ಧೋರಣೆಯನ್ನು ಕಂಡು ಬೆಚ್ಚಿಬಿದ್ದ ಅವರು, ಕೂಡಲೇ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ಹೊರಬಂದಿದ್ದಾರೆ. ಕೆಲಸಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಆಸ್ಪತ್ರೆಯ ಕರಾಳಮುಖವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗ್ತಿದೆ.
ವೈರಲ್ ಆದ ವಿಡಿಯೋದಲ್ಲಿ, ಆಸ್ಪತ್ರೆಗೆ ಬರುವ ಸಾಮಾನ್ಯ ರೋಗಿಗಳಿಗೂ ಪ್ರಾಥಮಿಕ ಚಿಕಿತ್ಸೆ ನೀಡುವ ಬದಲು, ಹಣ ಸುಲಿಗೆ ಉದ್ದೇಶದಿಂದ ನೇರವಾಗಿ ಐಸಿಯುಗೆ ದಾಖಲಿಸಲಾಗುತ್ತಿದೆ. ಆಸ್ಪತ್ರೆಯ ಆದಾಯವನ್ನು ಹೆಚ್ಚಿಸಲು ವೈದ್ಯರ ಮೇಲೆ ಒತ್ತಡ ಹೇರಲಾಗುತ್ತಿದೆ. ರೋಗಿಗಳಿಗೆ ಅಗತ್ಯವಿಲ್ಲದಿದ್ದರೂ ದುಬಾರಿ ಪರೀಕ್ಷೆ ಮತ್ತು ಚಿಕಿತ್ಸೆಗಳನ್ನು ನೀಡಲಾಗುತ್ತಿದೆ. ಈ ಸಂಪೂರ್ಣ ದಂಧೆಯು ಆಸ್ಪತ್ರೆಯ ಹಿರಿಯ ವೈದ್ಯರೊಬ್ಬರ ನೇರ ನಿಯಂತ್ರಣದಲ್ಲಿ ನಡೆಯುತ್ತಿದೆ ಎಂದು ಅವರು ಗಂಭೀರವಾಗಿ ಆರೋಪಿಸಿದ್ದಾರೆ.
ನನಗೆ ಸಂಬಳ ಅಥವಾ ದೊಡ್ಡ ಹುದ್ದೆಗಿಂತ ರೋಗಿಗಳ ಸುರಕ್ಷತೆ ಮತ್ತು ವೈದ್ಯಕೀಯ ವೃತ್ತಿಯ ನೈತಿಕತೆಯೇ ಮುಖ್ಯ. ರೋಗಿಗಳನ್ನು ಲೂಟಿ ಮಾಡುವ ಇಂತಹ ವ್ಯವಸ್ಥೆಯಲ್ಲಿ ನಾನು ಭಾಗಿಯಾಗಲಾರೆ ಎಂದು ಹೇಳಿದ್ದಾರೆ. ಇದೀಗ ಕೌರ್ ಧೈರ್ಯದ ನಡೆಗೆ ಸೋಶಿಯಲ್ ಮೀಡಿಯಾದಲ್ಲಿ ಬೆಂಬಲ ವ್ಯಕ್ತವಾಗಿದೆ. ಆಸ್ಪತ್ರೆಯ ಹೆಸರನ್ನು ಬಹಿರಂಗಪಡಿಸಿ ಅದರ ಪರವಾನಗಿ ರದ್ದುಗೊಳಿಸಬೇಕು ಎಂದು ಒತ್ತಾಯಿಸುತ್ತಿದ್ದಾರೆ. ವೈದ್ಯಕೀಯ ಕ್ಷೇತ್ರಕ್ಕೆ ಇಂತಹ ಪ್ರಾಮಾಣಿಕ ವೈದ್ಯರ ಅಗತ್ಯವಿದೆ ಎಂದು ಸಾವಿರಾರು ಜನರು ಕಮೆಂಟ್ ಮಾಡುತ್ತಿದ್ದಾರೆ.

ನೋಡಿರಿ

