ಪ್ರಧಾನಿ ಮೋದಿ ಉದ್ಘಾಟನೆ ಮಾಡಬೇಕಿರುವ ಎಕ್ಸ್ಪ್ರೆಸ್ವೇನಲ್ಲಿ ಭೀಕರ ಸರಣಿ ಅಪಘಾತ – 7 ವಾಹನಗಳು ಜಖಂ!

ಲಕ್ನೋದಲ್ಲಿ ಭೀಕರ ಸರಣಿ ಅಪಘಾತ ಸಂಭವಿಸಿದೆ. ನಾಳೆ ಪ್ರಧಾನಿ ಮೋದಿ ಅವರಿಂದ ಉದ್ಘಾಟನೆಯಾಗಬೇಕಿರುವ ದೆಹಲಿ-ಡೆಹ್ರಾಡೂನ್ ಎಕ್ಸ್ಪ್ರೆಸ್ವೇಯ ಮೋಹಂದ್ ರೇಂಜ್ನಲ್ಲೀ ಭೀಕರ ಸರಣಿ ಅಪಘಾತ ನಡೆದಿದೆ.
ಇದನ್ನೂ ಓದಿ: ಸುಳ್ಯದಲ್ಲಿ ಬಾವಿಗೆ ಬಿದ್ದ ಕಾಡಾನೆ! – ಅರಣ್ಯ ಇಲಾಖೆಯಿಂದ ಗಜರಾಜನ ರಕ್ಷಣೆಗೆ ಕಾರ್ಯಾಚರಣೆ
ಉತ್ತರ ಪ್ರದೇಶದ ಸಹರಾನ್ಪುರದ ಬಿಹಾರಿಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ. ಎಲ್ಪಿಜಿ ಸಿಲಿಂಡರ್ಗಳನ್ನು ಸಾಗಿಸುತ್ತಿದ್ದ ಟ್ರಕ್ನ ಬ್ರೇಕ್ ಫೈಲ್ ಆಗಿದ್ದು, ನಿಯಂತ್ರಣ ಕಳೆದುಕೊಂಡಿದೆ. ಇದ್ರಿಂದಾಗಿ ಟ್ರಕ್ ಸುಮಾರು 7 ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಇನ್ನು ಅವಘಡದ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಪೊಲೀಸರು ಹಾಗೂ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನ ಆಸ್ಪತ್ರೆಗೆ ಸಾಗಿಸಿದ್ದಾರೆ. ಏಪ್ರಿಲ್ 14 ರಂದು ಪ್ರಧಾನಿಯವರಿಂದ ಎಕ್ಸ್ಪ್ರೆಸ್ವೇ ಉದ್ಘಾಟನೆಗೆ ಒಂದು ದಿನ ಮುನ್ನ ಈ ಅಪಘಾತ ಸಂಭವಿಸಿದೆ.
ಅಂದ್ಹಾಗೆ, ಉತ್ತರ ಪ್ರದೇಶದ ದೆಹಲಿ-ಡೆಹ್ರಾಡೂನ್ ಎಕ್ಸ್ಪ್ರೆಸ್ವೇ ಏಪ್ರಿಲ್ 14 ರಂದು (ನಾಳೆ) ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆ ಆಗಬೇಕಿದೆ. ಇಂದು ಸಿಎಂ ಯೋಗಿ ಆದಿತ್ಯನಾಥ್ ಸ್ಥಳಕ್ಕೆ ಭೇಟಿ ನೀಡಿ ಭದ್ರತಾ ವ್ಯವಸ್ಥೆಗಳನ್ನ ಪರಿಶೀಲಿಸಲಿದ್ದಾರೆ. ಈ ಹೊತ್ತಿನಲ್ಲೇ ಅಪಘಾತ ಸಂಭವಿಸಿದೆ. ಘಟನೆ ಬಳಿಕ ಪೊಲೀಸರು ಎಚ್ಚೆತ್ತುಕೊಂಡಿದ್ದು, ವಿಐಪಿ ಸಂಚಾರಕ್ಕೆ ಅಡ್ಡಿಯಾಗದಂತೆ ನೋಡಿಕೊಳ್ಳಲು ಸಕಲ ಕ್ರಮ ಕೈಗೊಂಡಿದ್ದಾರೆ.

ನೋಡಿರಿ

