ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಹಾವು ಕಚ್ಚಿ ಎರಡೂವರೆ ವರ್ಷದ ಮಗು ಸಾ*ವು!

ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಹಾವು ಕಚ್ಚಿ ಎರಡೂವರೆ ವರ್ಷದ ಮಗು ಸಾ*ವು!

ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಹಾವು ಕಚ್ಚಿ ಎರಡೂವರೆ ವರ್ಷದ ಮಗು ಮೃತಪಟ್ಟಿರುವ ಘಟನೆ ಸಾಗರದ   ಎಸ್.ಎನ್. ನಗರದಲ್ಲಿ ನಡೆದಿದೆ. ಗಣೇಶ್ ಎಂಬುವವರ ಪುತ್ರ ಭವಿನ್ ಮೃತ ಬಾಲಕ.  ಅಜ್ಜಿ ಮನೆಗೆ ಬಂದಿದ್ದ ಭವಿನ್ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದ ಬಾಲಕನ ಕೈಗೆ ನಾಗರಹಾವು ಕಚ್ಚಿದೆ ಎನ್ನಲಾಗಿದೆ.

ಇದನ್ನೂ ಓದಿ: ಚೆೆನ್ನೈ ಸೂಪರ್‌ ಕಿಂಗ್ಸ್‌ಗೆ ಶಾಕ್ ಮೇಲೆ ಶಾಕ್ – ಖಲೀಲ್‌ ಅಹ್ಮದ್‌ CSKಯಿಂದ OUT

ತಕ್ಷಣವೇ ಮಗುವನ್ನು ಸಾಗರದ ಉಪವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಗು ಕೊನೆಯುಸಿರೆಳೆದಿದೆ.

ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆಗೆ ಹೃದಯಾಘಾತ 

ಮಧುಗಿರಿಯ ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶೆ ಎ.ಎನ್. ಕಾಂತಮ್ಮ(43)  ಅವರು ಹೃದಯಾಘಾತದಿಂದ ಗುರುವಾರ ನಿಧನರಾಗಿದ್ದಾರೆ. ಮಳವಳ್ಳಿ ತಾಲೂಕಿನ ಅಂಚೆದೊಡ್ಡಿ ಗ್ರಾಮದವರಾದ ಇವರು ಮಧುಗಿರಿಯಲ್ಲಿ 2025ರ ಜೂನ್ ನಿಂದ ನ್ಯಾಯಧೀಶೆಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.

ಅವಿವಾಹಿತರಾದ ಇವರು ಗುರುವಾರ ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರ ನಿಧನಕ್ಕೆ ಮಧುಗಿರಿ ತಾಲೂಕಿನ ವಕೀಲರು, ನ್ಯಾಯಾಲಯದ ಸಿಬ್ಬಂದಿ ಸೇರಿ ಹಲವರು ಸಂತಾಪ ಸೂಚಿಸಿದ್ದಾರೆ.

Kishor KV