ಹಾಸನದಲ್ಲಿ ಸೆರೆ ಹಿಡಿದು ಲಾರಿಗೆ ತುಂಬಿಸುವ ವೇಳೆ ಕಾಡಾನೆ ಎಸ್ಕೇಪ್ – ಆಪರೇಷನ್ ಫೆಲ್ಯೂರ್

ಹಾಸನದಲ್ಲಿ ಏಪ್ರಿಲ್ 12ರ ಭಾನುವಾರದಂದು ರೈತನನ್ನ ಬಲಿ ಪಡೆದಿದ್ದ ಒಂಟಿ ಸಲಗ ಸೆರೆಹಿಡಿಯಲು ನಡೆಸಿದ ಕಾರ್ಯಚರಣೆ ವಿಫಲವಾಗಿದೆ. ಇಡೀ ದಿನ ಸುಗ್ರೀವ, ಅಯ್ಯಪ್ಪ, ಧನಂಜಯ, ಏಕಲವ್ಯ ಸೇರಿ ಆರು ಸಾಕಾನೆಗಳ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿ ಅರವಳಿಕೆ ಮದ್ದು ನೀಡಿ ಬೃಹತ್ ಒಂಟಿ ಸಲಗವನ್ನ ಸೆರೆಹಿಡಿದು ಎಳೆದುಕೊಂಡು ಹೋಗುವ ವೇಳೆ ಸಾಕಾನೆಗಳ ಜೊತೆ ರಣಭೀಕರ ಫೈಟ್ ನಡೆಸಿದ ಕಾಡಾನೆ ಕೊರಳು, ಕಾಲಿಗೆ ಕಟ್ಟಿದ್ದ ಹಗ್ಗವನ್ನ ತುಂಡರಿಸಿ ಶರವೇಗದಲ್ಲಿ ಕಾಫಿತೋಟದಲ್ಲಿ ಪರಾರಿಯಾಗಿದೆ. ಆ ಮೂಲಕ ಕಾರ್ಯಾಚರಣೆ ನಡೆಸಿದ್ದ ತಂಡಕ್ಕೆ ಚಳ್ಳೆಹಣ್ಣು ತಿನ್ನಿಸಿದೆ. ಸದ್ಯ ಆತಂಕಗೊಂಡಿರುವ ಜನರು ಕಾಡಾನೆ ಸೆರೆಗೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ: ಮನೆಯ ಮುಂದೆ ಆಟವಾಡುತ್ತಿದ್ದ ವೇಳೆ ಹಾವು ಕಚ್ಚಿ ಎರಡೂವರೆ ವರ್ಷದ ಮಗು ಸಾ*ವು!
ಕುತ್ತಿಗೆ, ಕಾಲುಗಳಿಗೆ ಹಗ್ಗ ಕಟ್ಟಿ ಎಳೆತಂದು ಲಾರಿಗೆ ಹತ್ತಿಸುತ್ತಿರುವ ವೇಳೆ ಕಾಫಿತೋಟದೊಳಗೆ ಸುಮಾರು ಒಂದು ಗಂಟೆ ಸಾಕಾನೆಗಳ ಜೊತೆಗೆ ಫೈಟ್ ನಡೆಸಿದ ಸಲಗ ಒಂದೇ ಒಂದು ಹೆಜ್ಜೆ ಮುಂದೆ ಇಡಲಿಲ್ಲ. ಏನೇ ಪ್ರಯತ್ನಪಟ್ಟರು ಜಗ್ಗದ ಸಲಗವನ್ನ ಸಾಕಾನೆಗಳು ಎಳೆದು ತರುತ್ತಿರುವ ವೇಳೆ ಒಂದೊಂದೇ ಹಗ್ಗವನ್ನ ಕಿತ್ತುಕೊಂಡ ಪರಾರಿ ಆಗಿದೆ. ಬಲಿಷ್ಟ ಸಲಗದ ಎದುರು ಸಾಕಾನೆಗಳು ಮಂಡಿಯೂರಿವೆ. ಕಾಡಾನೆ ತಪ್ಪಿಸಿಕೊಂಡು ಹೋಗಿರುವುದು ಸುತ್ತಮುತ್ತಲ ಗ್ರಾಮಗಳ ಜನರಲ್ಲಿ ಆತಂಕ ಸೃಷ್ಟಿಮಾಡಿದ್ದು, ಶೀಘ್ರ ಸೆರೆಹಿಡಿಯುವಂತೆ ಆಗ್ರಹಿಸಿದ್ದಾರೆ.

ನೋಡಿರಿ

