ಖಾಸಗಿ ಬಸ್‌ ಮತ್ತು ಕಾರಿನ ಮಧ್ಯೆ ಭೀಕರ ಅಪಘಾತ! – ಇಬ್ಬರು ಮಕ್ಕಳು ಸೇರಿ 6 ಮಂದಿ ಸಜೀವ ದಹನ!

ಖಾಸಗಿ ಬಸ್‌ ಮತ್ತು ಕಾರಿನ ಮಧ್ಯೆ ಭೀಕರ ಅಪಘಾತ! – ಇಬ್ಬರು ಮಕ್ಕಳು ಸೇರಿ 6 ಮಂದಿ ಸಜೀವ ದಹನ!

ರಾಜ್ಯದಲ್ಲಿ ಬಸ್‌ ದುರಂತದಲ್ಲಿ ದಿನೇ ದಿನೇ ಹೆಚ್ಚಾಗ್ತಿದೆ. ಇದೀಗ ಮತ್ತೊಂದು ಬಸ್‌ ಅವಘಡ ಸಂಭವಿಸಿದೆ. ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 6 ಮಂದಿ ಸಜೀವ ದಹನಗೊಂಡಿದ್ದಾರೆ.

ಇದನ್ನೂ ಓದಿ: ಕಾಳಸಂತೆಯಲ್ಲಿ ದುಪ್ಪಟ್ಟು ಹಣಕ್ಕೆ IPL ಟಿಕೆಟ್‌ ಸೇಲ್!‌ – ದಂಧೆಯ ಮಾಸ್ಟರ್ ಮೈಂಡ್ KSCA ಸದಸ್ಯ!

ಯಾದಗಿರಿ ‌ಜಿಲ್ಲೆಯ ಸುರಪುರ ತಾಲ್ಲೂಕಿನ ಶಾಂತಪುರ ಕ್ರಾಸ್ ಬಳಿ ದುರಂತ ಸಂಭವಿಸಿದೆ. ಇಂದು ಬೆಳಗ್ಗೆ ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ VRL ಸಂಸ್ಥೆಗೆ ಬಸ್ ಇತ್ತ ಕಲಬುರಗಿಯಿಂದ ಲಿಂಗಸೂಗೂರು ಕಡೆಗೆ ಸಾಗಿತ್ತಿದ್ದ ಕಾರಿನ ನಡುವೆ ಡಿಕ್ಕಿಯಾಗಿದೆ. ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ಡೋರ್‌ ಓಪನ್‌ ಮಾಡಲು ಸಾಧ್ಯವಾಗಿಲ್ಲ. ಈ ಬೆನ್ನಲ್ಲೇ ಕಾರಿನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು ಬಸ್‌ಗೂ ಬೆಂಕಿ ವ್ಯಾಪಿಸಿದೆ. ಪರಿಣಾಮ ಎರಡು ವಾಹನಗಳು ಸುಟ್ಟು ಭಸ್ಮವಾಗಿದೆ. ಕಾರಿನದಲ್ಲಿದ್ದ ಇಬ್ಬರು ಮಕ್ಕಳು ಸೇರಿ 6 ಮಂದಿ ಮೃತಪಟ್ಟಿದ್ದಾರೆ.

ಇನ್ನು ಬಸ್‌ನಲ್ಲಿ 40ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಈ ಅವಘಡದಲ್ಲಿ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ. ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಘಟನಾ ಸ್ಥಳಕ್ಕೆ ಸುರಪುರ ಪೊಲೀಸರು ಭೇಟಿ ನೀಡಿ ಮೃತಪಟ್ಟವರ ಮಾಹಿತಿ ಕಲೆ ಹಾಕುತ್ತಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ.

Shwetha M