ದೇಶದಲ್ಲಿ ತಾಪಮಾನ ಹೆಚ್ಚಳ! – ಹೀಟ್ ಸ್ಟ್ರೋಕ್ ನಿಂದ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ದೇಶದಲ್ಲಿ ತಾಪಮಾನ ಹೆಚ್ಚಳ! – ಹೀಟ್ ಸ್ಟ್ರೋಕ್ ನಿಂದ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ಏಪ್ರಿಲ್ ತಿಂಗಳಲ್ಲೇ ಭಾರತದ ಹಲವು ರಾಜ್ಯಗಳಲ್ಲಿ ತಾಪಮಾನವು 40 ಡಿಗ್ರಿ ಸೆಲ್ಸಿಯಸ್‌ ದಾಟುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಬಿಸಿಗಾಳಿಯ ಬಗ್ಗೆ ತೀವ್ರ ಎಚ್ಚರಿಕೆ ನೀಡಿದೆ. ತಾಪಮಾನ ಹೆಚ್ಚಾಗುತ್ತಿದ್ದಂತೆ ಅನಾರೋಗ್ಯ ಸಮಸ್ಯೆ ಕೂಡ ಕಾಣಿಸಿಕೊಳ್ತಿದೆ. ಇದೀಗ ತಾಪಮಾನದಿಂದ ಪಾರಾಗಲು ಇಲ್ಲಿದೆ ಟಿಪ್ಸ್!‌

ಇದನ್ನೂ ಓದಿ: ರಾಜ್ಯದ ಜನರಿಗೆ ದರ ಏರಿಕೆ ಶಾಕ್!‌ – ವಿದ್ಯುತ್ ದರ ಏರಿಕೆ ಯೂನಿಟ್‌ಗೆ 56 ಪೈಸೆ ಹೆಚ್ಚಳ!

ರಾಜ್ಯದೆಲ್ಲೆಡೆ ತಾಪಮಾನ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಅವಶ್ಯಕತೆ ಇಲ್ಲದೆ ಮನೆಯಿಂದ ಹೊರಬರುವುದನ್ನು ತಪ್ಪಿಸುಂತೆ ಹೇಳಲಾಗಿದೆ. ಬೇಸಿಗೆ ರಜೆಯಲ್ಲಿ ಮಕ್ಕಳು ಬಿಸಿಲಲ್ಲಿ ಆಟವಾಡುವುದನ್ನು ಆದಷ್ಟು ನಿಯಂತ್ರಿಸುವಂತೆ ಸೂಚಿಸಲಾಗಿದೆ.

ಉಷ್ಣ ಅಲೆ ಹಾಗೂ ಉಷ್ಣಾಘಾತದಿಂದ (ಹೀಟ್ ಸ್ಟ್ರೋಕ್) ರಕ್ಷಿಸಿಕೊಳ್ಳಲು ಆರೋಗ್ಯ ಇಲಾಖೆ ಕೆಲವು ಸಲಹೆ ಸೂಚನೆಗಳನ್ನು ನೀಡಿದೆ. ಮಧ್ಯಾಹ್ನ 12 ರಿಂದ 4 ಗಂಟೆಯವರೆಗೆ ಸೂರ್ಯನ ಬೆಳಕಿಗೆ ನೇರ ಮೈಯೊಡ್ಡುವುದನ್ನು ಆದಷ್ಟು ತಪ್ಪಿಸಿ. ನಿಯಮಿತವಾಗಿ ನೀರು ಕುಡಿಯಿರಿ. ಎಳನೀರು, ಮಜ್ಜಿಗೆ ಅಥವಾ ಮನೆಯಲ್ಲಿ ತಯಾರಿಸಿದ ಹಣ್ಣಿನ ರಸಗಳನ್ನು ಸೇವಿಸಿ. ತಿಳಿ ಬಣ್ಣದ, ಸಡಿಲವಾದ ಹತ್ತಿ ಬಟ್ಟೆಗಳನ್ನು ಧರಿಸಿ. ಹೊರಗೆ ಹೋಗುವಾಗ ಛತ್ರಿ ಅಥವಾ ಟೋಪಿಯನ್ನು ಬಳಸಿ. ಕೆಫೀನ್ (ಕಾಫಿ/ಟೀ) ಮತ್ತು ಹೆಚ್ಚಿನ ಸಕ್ಕರೆಯುಕ್ತ ಪಾನೀಯಗಳ ಸೇವನೆ ಕಡಿಮೆ ಮಾಡಿ, ಇವು ದೇಹವನ್ನು ನಿರ್ಜಲೀಕರಣಗೊಳಿಸುತ್ತವೆ.

Shwetha M