ಹಾಸನದಲ್ಲಿ ಮಾವ , ಅಳಿಯ ಜಲಸಮಾಧಿ – ಕೆರೆಯಲ್ಲಿ ಬಿದ್ದ ಅಳಿಯನನ್ನ ರಕ್ಷಣೆ ಮಾಡೋಕೆ ಹೋದ ಮಾವನೂ ಸಾ*ವು

ಹಾಸನದಲ್ಲಿ ಮಾವ , ಅಳಿಯ ಜಲಸಮಾಧಿ – ಕೆರೆಯಲ್ಲಿ ಬಿದ್ದ ಅಳಿಯನನ್ನ ರಕ್ಷಣೆ ಮಾಡೋಕೆ ಹೋದ ಮಾವನೂ ಸಾ*ವು

ಕಾಲು ಜಾರಿ ಕೆರೆಗೆ ಬಿದ್ದ ಬಾಲಕನ ರಕ್ಷಣೆ ಗೆ ಹೋದ ಮಾವನೂ ದಾರುಣವಾಗಿ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಎನ್‌. ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. ಪ್ರಭಾಕರ್ (45), ಪ್ರತೀಕ್ (12) ಮೃತ ದುರ್ದೈವಿಗಳು. ಮೂಲತಃ ದುದ್ದ ಹೋಬಳಿ ಸೋಮನಹಳ್ಳಿ ಗ್ರಾಮದ ಪ್ರತೀಕ್ ಬೇಸಿಗೆ ರಜೆ ಹಿನ್ನಲೆ ಮಾವ ಪ್ರಭಾಕರ್ ಮನೆಗೆ ಬಂದಿದ್ದ. ಕೆರೆಯ ಏರಿ ಮೇಲೆ ಮಾವ ಮತ್ತು ಅಳಿಯ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾಲು ಜಾರಿ ಕೆರೆಗೆ ಪ್ರತೀಕ್ ಬಿದ್ದಿದ್ದಾನೆ. ಆತನ ರಕ್ಷಿಸಿಲು ಕೆರೆಗೆ ಇಳಿದ ಪ್ರಭಾಕರ್, ಈಜು ಬಾರದ ಕಾರಣ ಅಳಿಯನ ಜೊತೆಗೇ ಜಲ ಸಮಾಧಿ ಆಗಿದ್ದಾರೆ. ಮೃತದೇಹವನ್ನು ಅಗ್ನಿಶಾಮಕದಳದ ಸಿಬ್ಬಂದಿ ಹೊರ ತೆಗೆದಿದ್ದು, ಗಂಡಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ದೇಶದಲ್ಲಿ ತಾಪಮಾನ ಹೆಚ್ಚಳ! – ಹೀಟ್ ಸ್ಟ್ರೋಕ್ ನಿಂದ ಆರೋಗ್ಯ ಕಾಪಾಡಿಕೊಳ್ಳುವುದು ಹೇಗೆ?

ಈಜಲು ಹೋಗಿದ್ದ ಇಬ್ಬರು ಯುವಕರು ನೀರು ಪಾಲು 

ಕಾವೇರಿ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನೀರಲ್ಲಿ ಮುಳುಗಿ ಪ್ರಾಣಬಿಟ್ಟಿರುವ ಘಟನೆ ಪಿರಿಯಾಪಟ್ಟಣದ ದೊಡ್ಡ ಹರವೆ ಗ್ರಾಮದ ಬಳಿ ನಡೆದಿದೆ. ಗಣೇಶ್ (22) ಮತ್ತು ಇಮ್ರಾನ್ (28) ಮೃತಪಟ್ಟವರಾಗಿದ್ದಾರೆ. ಪಟ್ಟಣದಲ್ಲಿ ಟೈಲ್ಸ್‌ ಮತ್ತು ಪೇಂಟಿಂಗ್‌ ಕೆಲಸ ಮಾಡುತ್ತಿದ್ದ ನಾಲ್ವರು ಯುವಕರು ಭಾನುವಾರ ಮಧ್ಯಾಹ್ನ ಈಜಲೆಂದು ನದಿಗೆ ತೆರಳಿದ್ದರು. ಈ ವೇಳೆ ಇಬ್ಬರು ಯುವಕರು ನೀರು ಪಾಲಾಗಿದ್ದಾರೆ. ಗಣೇಶ್‌ ಮೃತದೇಹ ಹೊರಕ್ಕೆ ತೆಗೆಯಲಾಗಿದ್ದು, ಇಮ್ರಾನ್‌ ಶವಕ್ಕಾಗಿ ಶೋಧ ಮುಂದುವರಿದಿದೆ. ಈ ಸಂಬಧ ಬೈಲಕುಪ್ಪೆ ಠಾಣೆಯಲ್ಲಿ ದೂರು ದಾಖಲಾಗಿದೆ.

Kishor KV