ಕಂದಕಕ್ಕೆ ಬಿದ್ದ ಬಸ್! – ಭೀಕರ ಅಪಘಾತಕ್ಕೆ 15 ಮಂದಿ ಬಲಿ!

ಜಮ್ಮು ಮತ್ತು ಕಾಶ್ಮೀರದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಜಮ್ಮುವಿನ ರಾಮನಗರ-ಉಧಂಪುರ ಹೆದ್ದಾರಿಯಲ್ಲಿ ಬಸ್ವೊಂದು ಕಂದಕಕ್ಕೆ ಉರುಳಿಬಿದ್ದಿದ್ದು, 15 ಮಂದಿ ಸಾವನ್ನಪ್ಪಿದ್ದಾರೆ.
ಇದನ್ನೂ ಓದಿ: ಚಾರ್ಧಾಮ್ ಯಾತ್ರೆ ಆರಂಭ! – ಗೋಮೂತ್ರ ಕುಡಿದವ್ರಿಗೆ ಮಾತ್ರ ಗಂಗೋತ್ರಿಗೆ ಪ್ರವೇಶ, ಹಿಂದೂಗಳಲ್ಲದವ್ರಿಗೆ ನೋ ಎಂಟ್ರಿ!
ಜಮ್ಮು ಮತ್ತು ಕಾಶ್ಮೀರದ ಉಧಂಪುರ ಜಿಲ್ಲೆಯಲ್ಲಿ ಬಸ್ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಬಿದ್ದಿದೆ. ಪರಿಣಾಮ ಬಸ್ಸಿನಲ್ಲಿದ್ದ 15 ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಸೋಮವಾರ ಬೆಳಗ್ಗೆ 10 ಗಂಟೆಯ ಸುಮಾರಿಗೆ ಘಟನೆ ಸಂಭವಿಸಿದೆ. ರಾಮನಗರದಿಂದ ಉಧಂಪುರಕ್ಕೆ ಹೋಗುತ್ತಿದ್ದ ಬಸ್, ತಿರುವಿನಲ್ಲಿ ನಿಯಂತ್ರಣ ಕಳೆದುಕೊಂಡು ದುರಂತ ಸಂಭವಿಸಿದೆ.
ಘಟನಾ ಸ್ಥಳದಲ್ಲಿ ಸೇನೆ, ಪೊಲೀಸರು ಹಾಗೂ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ. ಈ ಪೈಕಿ ಹಲವರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ಘಟನೆ ಕುರಿತು ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದಾರೆ. ಅಲ್ಲದೇ ಗಂಭೀರವಾಗಿ ಗಾಯಗೊಂಡವರನ್ನು ವಿಮಾನದಲ್ಲಿ ಸಾಗಿಸುವ ವ್ಯವಸ್ಥೆ ಸೇರಿದಂತೆ ಎಲ್ಲಾ ರೀತಿಯ ಸಹಾಯವನ್ನು ಒದಗಿಸುವ ಭರವಸೆ ನೀಡಿದ್ದಾರೆ.

ನೋಡಿರಿ

