ಬಿಸಿಲಿನ ತಾಪಕ್ಕೆ ಯುವಕ ಬಲಿ! – ತರಕಾರಿ ತರಲು ಹೋದಾತ ಮಸಣ ಸೇರಿದ!

ರಾಜ್ಯದಲ್ಲಿ ತಾಪಮಾನ ದಿನೇ ದಿನೆ ಹೆಚ್ಚಾಗುತ್ತಿದೆ. ಬಿಸಿಲಿನ ಝಳಕ್ಕೆ ಜನರ ಬಳಲಿ ಬೆಂಡಾಗಿದ್ದಾರೆ. ಮನೆಯಿಂದ ಹೊರ ಬರಲಾಗದ ಪರಿಸ್ಥಿತಿ ಉಂಟಾಗಿದೆ. ಇದೀಗ ಬಿಸಿಲಿನ ಶಾಖಕ್ಕೆ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.
ಇದನ್ನೂ ಓದಿ: ಕಂದಕಕ್ಕೆ ಬಿದ್ದ ಬಸ್! – ಭೀಕರ ಅಪಘಾತಕ್ಕೆ 15 ಮಂದಿ ಬಲಿ!
ಬೀದರ್ ಜಿಲ್ಲೆಯ ಕಮಲನಗರ ಪಟ್ಟಣದ ಡಿಗ್ಗಿ ರೋಡ್ ಬಳಿ ನಡೆದಿದೆ. ಬಿಸಿಲಿನ ಝಳಕ್ಕೆ ಕುಸಿದು ಬಿದ್ದು ಯುವಕ ಸಾವನ್ನಪ್ಪಿದ್ದಾನೆ. ಯುಪಿ ಮೂಲದ ಮೊಹ್ಮದ್ ಸಮೀರ್ ಅಹ್ಮದ್ (20) ಮೃತಪಟ್ಟ ದುರ್ದೈವಿ. ಗರಿಷ್ಠ ತಾಪಮಾನ ಸಹಿಸಲಾರದೇ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.
ಅಷ್ಟಕ್ಕೂ ಆಗಿದ್ದೇನು?
ಮೊಹ್ಮದ್ ಸಮೀರ್ ಅಹ್ಮದ್ ತರಕಾರಿ ತರಲು ಹೋಗಿದ್ದ. ತರಕಾರಿ ತೆಗೆದುಕೊಂಡು ಮನೆಗೆ ವಾಪಸ್ಸಾಗುವಾಗ ತಲೆ ತಿರುಗಿದಂತಾಗಿದ್ದು, ಕೂಡಲೇ ಸಮೀಪದಲ್ಲಿಯೇ ಇದ್ದ ಮೆಕಾನಿಕ್ ಅಂಗಡಿಯಲ್ಲಿ ನೀರು ಕುಡಿದು ವಿಶ್ರಾಂತಿ ಪಡೆದಿದ್ದ. ಸ್ವಲ್ಪ ಹೊತ್ತಾದ ಮೇಲೆ ಮನೆಗೆ ಮರಳುವಾಗ ಡಿಗ್ಗಿ ಗ್ರಾಮದ ರಸ್ತೆ ಬಳಿ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಬಿಸಿಲಿನಿಂದಲೇ ಮಗ ಸಾವನ್ನಪ್ಪಿದ್ದಾನೆ ಎಂದು ತಂದೆ ಲಯಿಕ್ ಅಹ್ಮದ್ ದೂರು ನೀಡಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಕಮಲನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನೋಡಿರಿ

