ಮರಕ್ಕೆ ಡಿಕ್ಕಿಯಾಗಿ ಖಾಸಗಿ ವಿಮಾನ ಪತನ.. ಇಬ್ಬರು ದುರ್ಮರಣ! – ದಟ್ಟ ಅರಣ್ಯದಲ್ಲಿ ಆಗಿದ್ದೇನು?

ಮರಕ್ಕೆ ಡಿಕ್ಕಿಯಾಗಿ ಖಾಸಗಿ ವಿಮಾನ ಪತನ.. ಇಬ್ಬರು ದುರ್ಮರಣ! – ದಟ್ಟ ಅರಣ್ಯದಲ್ಲಿ ಆಗಿದ್ದೇನು?

ರಾಯ್ಪುರ್‌ನಲ್ಲಿ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಖಾಸಗಿ ವಿಮಾನ ಮಕ್ಕೆ ಢಿಕ್ಕಿಯಾಗಿ ಪತನಗೊಂಡಿದ್ದು, ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

ಇದನ್ನೂ ಓದಿ: ಇರಾನ್‌ಗೆ ಶಾಕ್‌ ಕೊಟ್ಟ ಅಮೆರಿಕ! – ಹಡಗು ವಶಕ್ಕೆ ಪಡೆದ US ನೌಕಾ ಪಡೆ!

ಈ ಘಟನೆ ಛತ್ತೀಸ್‌ಗಢದ ಜಶ್‌ಪುರ ಜಿಲ್ಲೆಯ ನಾರಾಯಣಪುರ ಪೊಲೀಸ್ ಠಾಣೆ ಪ್ರದೇಶದ ಖುರಾಸಗಢ ಗ್ರಾಮದ ಬಳಿಯ ರತನ್‌ಪಹ್ಲಿ ಅರಣ್ಯದಲ್ಲಿ ಈ ಅವಘಡ ಸಂಭವಿಸಿದೆ. ವಿಮಾನ ಕೇವಲ 30 ಅಡಿ ಎತ್ತರಲ್ಲಿ ಹಾರಾಟ ನಡೆಸುತ್ತಿತ್ತು. ಈ ವೇಳೆ ವಿಮಾನ ಮರಕ್ಕೆ ಡಿಕ್ಕಿಯಾಗಿದೆ. ಈ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಅರಣ್ಯದಲ್ಲಿ ನಡೆದಿದ್ದೇನು?

ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನವು ನೆಲದಿಂದ ಸುಮಾರು 30 ಅಡಿ ಎತ್ತರದಲ್ಲಿ ಹಾರುತ್ತ, ಮರಕ್ಕೆ ಡಿಕ್ಕಿಯಾಗಿದೆ. ಅಪಘಾತಕ್ಕೂ ಕೆಲವೇ ಕ್ಷಣಗಳ ಮುನ್ನ ಭಾರೀ ಕೆಳಮಟ್ಟದಲ್ಲಿ ಸಣ್ಣ ಸಿಂಗಲ್-ಎಂಜಿನ್ ಪ್ರೊಪೆಲ್ಲರ್ ವಿಮಾನ ಕೆಳಕ್ಕೆ ಹಾರುತ್ತಿರುವ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿದೆ. ವಿಮಾನ ಪತನಗೊಂಡ ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.  ರಕ್ಷಣಾ ತಂಡ ಸ್ಥಳಕ್ಕೆ ಧಾವಿಸಿ, ಪರಿಶೀಲನೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Shwetha M