ಪ್ರಧಾನಿ ಮೋದಿ ನಾಳೆ ಲೋಕಾರ್ಪಣೆ ಮಾಡಬೇಕಿದ್ದ ತೈಲ ಸಂಸ್ಕರಣಾಗಾರದಲ್ಲಿ ಭೀಕರ ಅಗ್ನಿ ಅವಘಡ

ಪ್ರಧಾನಿ ಮೋದಿ ನಾಳೆ ಲೋಕಾರ್ಪಣೆ ಮಾಡಬೇಕಿದ್ದ ತೈಲ ಸಂಸ್ಕರಣಾಗಾರದಲ್ಲಿ ಭೀಕರ ಅಗ್ನಿ ಅವಘಡ

ರಾಜಸ್ಥಾನದ ಬಲೋತ್ರಾದಲ್ಲಿ ದೊಡ್ಡ ದುರಂತ ಸಂಭವಿಸಿದೆ. ಪ್ರಧಾನಿ ಮೋದಿ ನಾಳೆ ಲೋಕಾರ್ಪಣೆ ಮಾಡಬೇಕಿದ್ದ ತೈಲ ಸಂಸ್ಕರಣಾಗಾರದಲ್ಲಿ ಬೆಂಕಿ ಅವಘಡ ಸಂಭವಿಸಿದೆ.

ಇದನ್ನೂ ಓದಿ: ಮರಕ್ಕೆ ಡಿಕ್ಕಿಯಾಗಿ ಖಾಸಗಿ ವಿಮಾನ ಪತನ! – ದಟ್ಟ ಅರಣ್ಯದಲ್ಲಿ ಆಗಿದ್ದೇನು?

ಬಲೋತ್ರಾದ ಪಚ್ಪದ್ರಾದಲ್ಲಿರುವ ಭಾರತದ ಮೊದಲ ಹೊಸ ಸಂಯೋಜಿತ ಸಂಸ್ಕರಣಾಗಾರ-ಪೆಟ್ರೋಕೆಮಿಕಲ್ ಸಂಕೀರ್ಣ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ, ತೈಲ ಸಂಸ್ಕರಣಾಗಾರದ ಕಚ್ಚಾ ತೈಲ ಬಟ್ಟಿ ಇಳಿಸುವ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಂಗಳವಾರ ಇಲ್ಲಿ ಪ್ರಧಾನಿ ಮೋದಿಯವರಿಂದ ಉದ್ಘಾಟನಾ ಕಾರ್ಯಕ್ರಮ ನಡೆಯಬೇಕಾಗಿತ್ತು. ಇದಕ್ಕೂ ಮುನ್ನ ಬೆಂಕಿ ಕಾಣಿಸಿಕೊಂಡಿರುವುದರಿಂದ ಘಟಕದೊಳಗೆ ಸಾಕಷ್ಟು ಅವ್ಯವಸ್ಥೆ ಉಂಟಾಗಿದೆ.  ರಾಜಸ್ಥಾನದ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಈ ಸ್ಥಳವನ್ನು ಪರಿಶೀಲಿಸಲು ಸಂಸ್ಕರಣಾಗಾರಕ್ಕೆ ಭೇಟಿ ನೀಡಲಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣವೇನು ಅನ್ನೋದು ಇನ್ನೂ ಬಹಿರಂಗವಾಗಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಇಂದು ತೈಲ ಸಂಸ್ಕರಣಾಗಾರದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಬೆಂಕಿ ಕೆಲವೇ ಕ್ಷಣಗಳಲ್ಲಿ ತೀವ್ರಗೊಂಡಿದ್ದು ಆ ಪ್ರದೇಶದಲ್ಲಿದ್ದ ಕಾರ್ಮಿಕರು ಮತ್ತು ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿತು. ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿ ಮಾಹಿತಿ ನೀಡಲಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ತೆರಳಿ ಬೆಂಕಿ ನಂದಿಸುತ್ತಿದ್ದಾರೆ. ಸದ್ಯ ಯಾವುದೇ ಗಾಯಗಳ ಬಗ್ಗೆ ವರದಿಗಳಾಗಿಲ್ಲ.

ಪ್ರಾಥಮಿಕ ಮಾಹಿತಿಯ ಪ್ರಕಾರ, ತೈಲ ಸಂಸ್ಕರಣಾಗಾರದ ಕಚ್ಚಾ ತೈಲ ಬಟ್ಟಿ ಇಳಿಸುವ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಂಗಳವಾರ ಇಲ್ಲಿ ಪ್ರಧಾನಿ ಮೋದಿಯವರಿಂದ ಉದ್ಘಾಟನಾ ಕಾರ್ಯಕ್ರಮ ನಡೆಯಬೇಕಾಗಿತ್ತು. ಇದಕ್ಕೂ ಮುನ್ನ ಬೆಂಕಿ ಕಾಣಿಸಿಕೊಂಡಿರುವುದರಿಂದ ಘಟಕದೊಳಗೆ ಸಾಕಷ್ಟು ಅವ್ಯವಸ್ಥೆ ಉಂಟಾಗಿದೆ.  ರಾಜಸ್ಥಾನದ ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಈ ಸ್ಥಳವನ್ನು ಪರಿಶೀಲಿಸಲು ಸಂಸ್ಕರಣಾಗಾರಕ್ಕೆ ಭೇಟಿ ನೀಡಲಿದ್ದಾರೆ. ಬೆಂಕಿ ಅವಘಡಕ್ಕೆ ಕಾರಣವೇನು ಅನ್ನೋದು ಇನ್ನೂ ಬಹಿರಂಗವಾಗಿಲ್ಲ. ಈ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಬಲೋತ್ರಾದ ಪಚ್ಪದ್ರಾದಲ್ಲಿರುವ ಭಾರತದ ಮೊದಲ ಹೊಸ ಸಂಯೋಜಿತ ಸಂಸ್ಕರಣಾಗಾರ-ಪೆಟ್ರೋಕೆಮಿಕಲ್ ಸಂಕೀರ್ಣವನ್ನು. 79,450 ಕೋಟಿ ರೂ.ಗಳಿಗೂ ಹೆಚ್ಚು ಹೂಡಿಕೆಯೊಂದಿಗೆ  ನಿರ್ಮಾಣ ಮಾಡಲಾಗಿತ್ತು. ಯೋಜನೆಯು ಭಾರತದ ಇಂಧನ ಮತ್ತು ಪೆಟ್ರೋಕೆಮಿಕಲ್ ವಲಯದಲ್ಲಿ ಮಹತ್ವದ ಮೈಲಿಗಲ್ಲಾಗಲಿದೆ. ಈ 9 ಮಿಲಿಯನ್ ಟನ್ ವಾರ್ಷಿಕ ಸಂಸ್ಕರಣಾಗಾರ ಮತ್ತು ಪೆಟ್ರೋಕೆಮಿಕಲ್ ಯೋಜನೆಯನ್ನು ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (HPCL) ಮತ್ತು ರಾಜಸ್ಥಾನ ಸರ್ಕಾರದ ಜಂಟಿ ಉದ್ಯಮವಾಗಿ ಅಭಿವೃದ್ಧಿಪಡಿಸಲಾಗಿದೆ. ಈ ಅತ್ಯಾಧುನಿಕ ಸ್ಥಾವರವು ತೈಲ ಸಂಸ್ಕರಣೆ ಮತ್ತು ಪೆಟ್ರೋಕೆಮಿಕಲ್ ಉತ್ಪಾದನೆಯನ್ನು ಸಂಯೋಜಿಸುತ್ತದೆ, ವರ್ಷಕ್ಕೆ 2.4 ಮಿಲಿಯನ್ ಟನ್ ಪೆಟ್ರೋಕೆಮಿಕಲ್ ಉತ್ಪಾದನಾ ಸಾಮರ್ಥ್ಯ ಹೊಂದಿದೆ. ಈ ಯೋಜನೆಯು ಭಾರತದ ಇಂಧನ ಭದ್ರತೆಯನ್ನು ಬಲಪಡಿಸುವಲ್ಲಿ, ಪೆಟ್ರೋಕೆಮಿಕಲ್ ವಲಯದಲ್ಲಿ ಸ್ವಾವಲಂಬನೆಯನ್ನು ಹೆಚ್ಚಿಸುವಲ್ಲಿ ಮತ್ತು ಕೈಗಾರಿಕಾ ಅಭಿವೃದ್ಧಿಯನ್ನು ವೇಗಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ನಾಳೆ ಈ ಮಹತ್ವದ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಬೇಕಿತ್ತು. ಆದ್ರೀಗ ತೈಲ ಸಂಸ್ಕರಣಾಗಾರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಇದರ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ಭಾರಿ ವೈರಲ್‌ ಆಗ್ತಿದೆ.

Shwetha M