ಉತ್ತರ ಕನ್ನಡದಲ್ಲಿ ಮರಕ್ಕೆ ಡಿಕ್ಕಿ ಹೊಡೆದ ಕಾರು! – ಇಬ್ಬರನ್ನು ಬಲಿ ಪಡೆದ ಅತಿವೇಗದ ಚಾಲನೆ!

ಉತ್ತರ ಕನ್ನಡದಲ್ಲಿ ಮರಕ್ಕೆ ಡಿಕ್ಕಿ ಹೊಡೆದ ಕಾರು! – ಇಬ್ಬರನ್ನು ಬಲಿ ಪಡೆದ ಅತಿವೇಗದ ಚಾಲನೆ!

ಉತ್ತರ ಕನ್ನಡದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಅತಿವೇಗದ ಚಾಲನೆಯಿಂದ ಕಾರೊಂದು ಮರಕ್ಕೆ ಡಿಕ್ಕಿಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಓರ್ವ ಗಂಭೀರ ಗಾಯಗೊಂಡಿರುವ ಘಟನೆ ನಡೆದಿದೆ.

ಇದನ್ನೂ ಓದಿ: ಮುಂಬೈಗೆ ವಿಜಯದ ತಿಲಕ! – GT ವಿರುದ್ದ 99 ರನ್‌ಗಳ ಭರ್ಜರಿ ಜಯ ಸಾಧಿಸಿದ MI

ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಕರ್ಕಾ ಕ್ರಾಸ್‌ನ ಅಜಗಾಂವ ಬಳಿ ಈ ಅಪಘಾತ ಸಂಭವಿಸಿದೆ. ಚಾಲಕ ಅತೀ ವೇಗವಾಗಿ ಕಾರು ಚಲಾಯಿಸಿದ್ದು, ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿದೆ.  ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡಿದ್ದಾರೆ.

ಧಾರವಾಡದ ಫಾರೂಖ್ ಸಾಬ್ ಮತ್ತು ಹಳಿಯಾಳದ ಮುದಸ್ಸಿರ್ ಇಸ್ಮಾಯಿಲ್ ಮುಲ್ಲಾ ಮೃತ ದುರ್ದೈವಿಗಳು. ಸದ್ಯ ಮೃತದೇಹಗಳನ್ನು ಹಳಿಯಾಳ ತಾಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ದಾಂಡೇಲಿಯಿಂದ ಹಳಿಯಾಳಕ್ಕೆ ಹೋಗುವಾಗ ಈ ಘಟನೆ ನಡೆದಿದ್ದು, ಡಿಕ್ಕಿಯ ರಭಸಕ್ಕೆ ಕಾರು ಎರಡು ಮರಗಳ ನಡುವೆ ಸಿಲುಕಿಕೊಂಡಿದೆ. ಘಟನೆ ಸಂಬಂಧ ದಾಂಡೇಲಿ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.

Shwetha M