ರಾಜ್ಯದಲ್ಲಿ ಹೀಟ್‌ಸ್ಟ್ರೋಕ್‌ಗೆ ಮತ್ತೊಂದು ಬಲಿ! – ಬೆಳಗಾವಿಯಲ್ಲಿ ಪಂಚಾಯತ್‌ ಅಧಿಕಾರಿ ಸಾವು!

ರಾಜ್ಯದಲ್ಲಿ ಹೀಟ್‌ಸ್ಟ್ರೋಕ್‌ಗೆ ಮತ್ತೊಂದು ಬಲಿ! – ಬೆಳಗಾವಿಯಲ್ಲಿ ಪಂಚಾಯತ್‌ ಅಧಿಕಾರಿ ಸಾವು!

ರಾಜ್ಯದಲ್ಲಿ ದಿನೇ ದಿನ ತಾಪಮಾನ ಹೆಚ್ಚುಗುತ್ತಿದೆ. ಬಿಸಿಲಿನ ಶಾಖಕ್ಕೆ ಜನರು ಹೈರಾಣಾಗಿದ್ದಾರೆ. ಜನರ ಆರೋಗ್ಯದ ಮೇಲೂ ಗಂಭೀರ ಪರಿಣಾಮ ಬೀಳುತ್ತಿದೆ. ಇದೀಗ ಹೀಟ್‌ಸ್ಟ್ರೋಕ್‌ಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದೆ.

ಇದನ್ನೂ ಓದಿ: ಗೃಹ ಜ್ಯೋತಿ ಫಲಾನುಭವಿಗಳಿಗೆ ಮಹತ್ವದ ಸುದ್ದಿ! – ಉಚಿತ ವಿದ್ಯುತ್ ಯೋಜನೆ ಬಗ್ಗೆ ಬೆಸ್ಕಾಂ ಮಹತ್ವದ ಪ್ರಕಟಣೆ!

ಬಿಸಿಲಿನ ತಾಪಕ್ಕೆ ಬೆಳಗಾವಿ ಜಿಲ್ಲೆಯ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ನಿವಾಸಿಯಾಗಿರುವ ವೆಂಕಟೇಶ್ ಬಳ್ಳಾರಿ (35) ಮೃತ ದುರ್ದೈವಿ.

ವೆಂಕಟೇಶ್ ಬಳ್ಳಾರಿ ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣ ಪಂಚಾಯತ್ ಮುಖ್ಯಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು. ಸೋಮವಾರ (ಏ.21) ಬಸವೇಶ್ವರ ಜಯಂತಿ ಸಂದರ್ಭದಲ್ಲಿ ಫೋಟೋ ಪೂಜೆ ಬಳಿಕ ಮೆರವಣಿಗೆ ಸಂದರ್ಭದಲ್ಲಿ ತಲೆ ತಿರುಗಿ ಕುಸಿದು ಬಿದ್ದಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ಕುರಿತು ಆಪ್ತರು ಮಾಹಿತಿ ನೀಡಿದ್ದು, ವೆಂಕಟೇಶ್ ಬಳ್ಳಾರಿ ಅವರು ಬಿಸಿಲಿನ ತಾಪ ತಾಳಲಾರದೇ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಇನ್ನು ತಾಪಮಾನ ಹೆಚ್ಚಳದಿಂದಾಗಿ ಜನರು ಅನಾರೋಗ್ಯಕ್ಕೆ ಒಳಗಾಗುತ್ತಿದ್ದಾರೆ. ಈಗಾಗಲೇ ಹೀಟ್‌ಸ್ಟ್ರೋಕ್‌ನಿಂದಾಗಿ ಹಲವು ಮಂದಿ ಅಸ್ವಸ್ಥಗೊಂಡಿದ್ದಾರೆ ಎಂದು ವರದಿಯಾಗಿದೆ.

Shwetha M