ಪಶ್ಚಿಮ ಬಂಗಾಳದಲ್ಲಿ ಮತದಾನದ ಹೊತ್ತಲ್ಲೇ ಕಚ್ಚಾಬಾಂಬ್‌ ದಾಳಿ! – ಹಲವರಿಗೆ ಗಾಯ!

ಪಶ್ಚಿಮ ಬಂಗಾಳದಲ್ಲಿ ಮತದಾನದ ಹೊತ್ತಲ್ಲೇ ಕಚ್ಚಾಬಾಂಬ್‌ ದಾಳಿ! – ಹಲವರಿಗೆ ಗಾಯ!

ತಮಿಳುನಾಡಿನ ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ ಪಶ್ಚಿಮ ಬಂಗಾಳದ 294 ಕ್ಷೇತ್ರಗಳಲ್ಲಿ 152 ಕ್ಷೇತ್ರಗಳಿಗೆ ಇಂದು 7 ಗಂಟೆಯಿಂದ ಮತದಾನ ಆರಂಭವಾಗಿವೆ. ಇದೀಗ ಪಶ್ಚಿಮ ಬಂಗಾಳದಲ್ಲಿ ಆತಂಕಾರಿ ಘಟನೆಯೊಂದು ನಡೆದಿದೆ. ಮತದಾನ ನಡೆಯುತ್ತಿದ್ದ ಸ್ಥಳದಲ್ಲಿ ಬಾಂಬ್‌ ದಾಳಿ ನಡೆದಿದೆ.

ಇದನ್ನೂ ಓದಿ: ಜಡೇಜಾ ಜಾದೂ.. ಲಕ್ನೋಗೆ ಸೋಲುಣಿಸಿದ ರಾಯಲ್ಸ್!‌ – 40 ರನ್‌ಗಳಿಂದ ಗೆದ್ದ RR

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ  ಮೊದಲ ಹಂತಕ್ಕೆ ನಡೆಯುತ್ತಿದೆ. ಈ ಹೊತ್ತಲ್ಲೇ ಮುರ್ಷಿದಾಬಾದ್‌ ಜಿಲ್ಲೆಯ ನೌಡಾ ಎಂಬಲ್ಲಿ ಬಾಂಬ್‌ ದಾಳಿಯಾಗಿದೆ.  ಕೆಲವು ಅಪರಿಚಿತ ವ್ಯಕ್ತಿಗಳು ಕಚ್ಚಾ ಬಾಂಬ್‌ದಾಳಿ ನಡೆಸಿದ್ದಾರೆ. ಈ ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಇದು ಸ್ಥಳೀಯರಲ್ಲಿ ಭೀತಿ ಹೆಚ್ಚಿಸಿದೆ. ಕಚ್ಚಾ ಬಾಂಬ್‌ ದಾಳಿಯ ಬಳಿಕ ಹಿಂಸಾಚಾರ ಪೀಡಿತವಾಗಿರುವ ಮುರ್ಷಿದಾಬಾದ್‌ ಜಿಲ್ಲೆಯಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ಕಳೆದ ತಿಂಗಳು, ಜಿಲ್ಲೆಯ ಜಂಗಿಪುರ ಮತ್ತು ರಘುನಾಥಗಂಜ್ ಪ್ರದೇಶಗಳಲ್ಲಿ ಎರಡು ಗುಂಪುಗಳ ನಡುವೆ ಭಾರೀ ಘರ್ಷಣೆ ನಡೆದಿತ್ತು. ಇದರಿಂದಾಗಿ ಅಧಿಕಾರಿಗಳು ನಿಷೇಧಾಜ್ಞೆ ಹೊರಡಿಸಿ 30 ಜನರನ್ನ ಬಂಧಿಸಲಾಗಿತ್ತು. ಅಂದಿನಿಂದಲೂ ಕೇಂದ್ರ ಪಡೆಗಳು ಸಹ ಈ ಸ್ಥಳದ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿವೆ.

ಇನ್ನು ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದೆ. ಉತ್ತರ ಬಂಗಾಳದ ಎಲ್ಲಾ 152 ಕ್ಷೇತ್ರಗಳಲ್ಲಿ ಮತದಾನ ಆರಂಭಗೊಂಡಿದೆ. ಉತ್ತರ ಬಂಗಾಳದ ಮುರ್ಷಿದಾಬಾದ್, ಜರ್ಗಾಮ, ಮೇದಿನಿಪುರ, ಬಂಕುರಾ, ಪುರುಲಿಯಾ, ಪಶ್ಚಿಮ ಬರ್ಧಮಾನ್ ಮತ್ತು ಬಿರ್ಬುಮ್‌ನಲ್ಲಿ ಮೊದಲ ಹಂತದ ಚುನಾವಣೆ ನಡೆಯುತ್ತಿದೆ.

ಮೊದಲ ಹಂತದಲ್ಲಿ 16 ಜಿಲ್ಲೆಗಳ 152 ಕ್ಷೇತ್ರಗಳಿದ್ದು, 1,478 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಹೆಚ್ಚುವರಿ 4,660 ಸಹಾಯಕ ಮತಗಟ್ಟೆಗಳನ್ನ ಸ್ಥಾಪಿಸಲಾಗಿದೆ. ಒಟ್ಟು ಮತಗಟ್ಟೆಗಳ ಪೈಕಿ 8,000 ಕ್ಕೂ ಹೆಚ್ಚು ಮತಗಟ್ಟೆಗಳನ್ನು ಅತಿಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಲಾಗಿದೆ. ರಾಜ್ಯದಾದ್ಯಂತ 780 ಕ್ಕೂ ಹೆಚ್ಚು ಕೇಂದ್ರ ಭದ್ರತಾ ಪಡೆಗಳ ಕಂಪನಿಗಳು ನಿಯೋಜನೆ ಮಾಡಿದೆ. ಮತದಾನಕ್ಕೂ ಮುನ್ನ ಈಗಾಗಲೇ 199 ಕ್ಕೂ ಹೆಚ್ಚು ಗೂಂಡಾಗಳನ್ನು ಬಂಧಿಸಲಾಗಿದೆ.

Shwetha M