ಮಂತ್ರಾಲಯ ರಾಯರ ಮಠದ ಹುಂಡಿ ಹಣ ಎಣಿಕೆ! – 22 ದಿನಗಳಲ್ಲಿ ಕೋಟಿ ಕೋಟಿ ಕಾಣಿಕೆ!

ಮಂತ್ರಾಲಯ ರಾಯರ ಮಠದ ಹುಂಡಿ ಹಣ ಎಣಿಕೆ! – 22 ದಿನಗಳಲ್ಲಿ ಕೋಟಿ ಕೋಟಿ ಕಾಣಿಕೆ!

ಮಂತ್ರಾಲಯವು ಕರ್ನಾಟಕ ರಾಜ್ಯದ ರಾಯಚೂರು ಜಿಲ್ಲೆಯಲ್ಲಿರುವ ಅತ್ಯಂತ ಪವಿತ್ರವಾದ ಯಾತ್ರಾ ಸ್ಥಳ. ಶ್ರೀ ರಾಘವೇಂದ್ರ ಸ್ವಾಮಿಗಳ ದರ್ಶನ ಪಡೆಯಲು ದೇಶದ ಹಲವು ಮೂಲೆಗಳಿಂದಲೇ ಅಲ್ಲದೇ ವಿದೇಶಗಳಿಂದಲೂ ಅತಿ ಹೆಚ್ಚಿನ ಭಕ್ತರು ಭೇಟಿ ನೀಡುತ್ತಾರೆ. ಇದೀಗ ಕಲಿಯುಗದ ಕಾಮದೇನು ಮಂತ್ರಾಲಯದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದೆ. 22 ದಿನದಲ್ಲಿ ಕೋಟ್ಯಂತರ ರೂಪಾಯಿ ಸಂಗ್ರಹವಾಗಿದೆ.

ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ಶುರುವಾಯ್ತು ಕುರ್ಚಿ ಕದನ! – ದೆಹಲಿಗೆ ತೆರಳಿದ ಡಿಸಿಎಂ ಡಿಕೆ ಶಿವಕುಮಾರ್‌!  

ಮಕ್ಕಳಿಗೆ ಬೇಸಿಗೆ ರಜೆಯ ಹಿನ್ನೆಲೆ ಮಂತ್ರಾಲಯದಲ್ಲಿ ಭಕ್ತರ ಸಂಖ್ಯೆ ಹೆಚ್ಚಾಗಿದೆ. ಏಪ್ರಿಲ್ ತಿಂಗಳ ಮೊದಲ 22 ದಿನಗಳಲ್ಲೇ ಗುರುರಾಘವೇಂದ್ರ ಸ್ವಾಮಿ ಮಠಕ್ಕೆ ಕೋಟ್ಯಾಂತರ ರೂಪಾಯಿ ಕಾಣಿಕೆ ಹರಿದು ಬಂದಿದೆ. 22 ದಿನದಲ್ಲಿ 3.25 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ಸಂಗ್ರಹವಾದ ಕಾಣಿಕೆಯಲ್ಲಿ 3,15,62,354 ರೂ. ಕರೆನ್ಸಿ ನೋಟುಗಳು ಹಾಗೂ 10,34,500 ರೂ. ನಾಣ್ಯಗಳು ಸಂಗ್ರಹವಾಗಿವೆ. 47 ಗ್ರಾಂ ಚಿನ್ನ, 592 ಗ್ರಾಂ ಬೆಳ್ಳಿಯನ್ನ ಕಾಣಿಕೆ ರೂಪದಲ್ಲಿ ಭಕ್ತರು ನೀಡಿದ್ದಾರೆ.

ಮಂತ್ರಾಲಯ ರಾಯರ ಮಠದಲ್ಲಿ ನಡೆಸಲಾದ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಎಣಿಕೆ ಕಾರ್ಯದಲ್ಲಿ ಮಠದ ನೂರಾರು ಸಿಬ್ಬಂದಿ, ಭಜನಾ ಮಂಡಳಿ, ಕರ ಸೇವಕರು ಭಾಗವಹಿಸಿದ್ದರು.

Shwetha M