ಇಂದು RCB Vs GTಹೈವೋಲ್ಟೇಜ್‌ ಮ್ಯಾಚ್!‌ – ಚಿನ್ನಸ್ವಾಮಿ ಸ್ಟೇಡಿಯಂ ಸುತ್ತ ಹೈ ಅಲರ್ಟ್!

ಇಂದು RCB Vs GTಹೈವೋಲ್ಟೇಜ್‌ ಮ್ಯಾಚ್!‌ – ಚಿನ್ನಸ್ವಾಮಿ ಸ್ಟೇಡಿಯಂ ಸುತ್ತ ಹೈ ಅಲರ್ಟ್!

ಇಂದು ಆರ್‌ಸಿಬಿ ಹಾಗೂ ಗುಜರಾತ್‌ ಟೈಟಾನ್ಸ್‌ ಮಧ್ಯೆ ಹೈವೋಲ್ಟೇಜ್‌ ಮ್ಯಾಚ್‌ ನಡೆಯಲಿದೆ. ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂದು ಸಂಜೆ ಪಂದ್ಯ ನಡೆಯಲಿದೆ. ಇದೀಗ ಕ್ರೀಡಾಂಗಣದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಇದನ್ನೂ ಓದಿ:ಮಂತ್ರಾಲಯ ರಾಯರ ಮಠದ ಹುಂಡಿ ಹಣ ಎಣಿಕೆ! – 22 ದಿನಗಳಲ್ಲಿ ಕೋಟಿ ಕೋಟಿ ಕಾಣಿಕೆ! 

ಈ ಸೀಸನ್‌ನಲ್ಲಿ ಆರ್‌ಸಿಬಿ ತವರು ನೆಲದಲ್ಲಿ ಆಡಲಿರುವ ಕೊನೆಯ ಲೀಗ್ ಪಂದ್ಯ ಇದಾಗಿದ್ದು ಕ್ರೀಡಾಂಗಣದ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಕಳೆದ ಪಂದ್ಯಗಳ ಅನುಭವದ ಆಧಾರದ ಮೇಲೆ ಪೊಲೀಸರು ಈ ಬಾರಿಯೂ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದಾರೆ.

ಕ್ರೀಡಾಂಗಣದ ಸುತ್ತಮುತ್ತಲ ರಸ್ತೆಗಳಲ್ಲಿ ಸಂಚಾರ ದಟ್ಟಣೆ ತಡೆಯಲು ಸಂಚಾರ ಪೊಲೀಸರು ವಿಶೇಷ ಗಮನ ಹರಿಸಿದ್ದಾರೆ. ಸ್ಟೇಡಿಯಂ ಹತ್ತಿರದ ಹಲವು ರಸ್ತೆಗಳನ್ನು ನೋ ಪಾರ್ಕಿಂಗ್ ವಲಯಗಳೆಂದು ಘೋಷಿಸಲಾಗಿದೆ.

ವಾಹನ ಸವಾರರಿಗೆ ಪರ್ಯಾಯ ಮಾರ್ಗಗಳ ಸೂಚನೆ ನೀಡಲಾಗಿದ್ದು, ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ. ಸುಮಾರು 2,300 ಪೊಲೀಸ್ ಸಿಬ್ಬಂದಿ ಪಂದ್ಯದ ಭದ್ರತಾ ಕರ್ತವ್ಯದಲ್ಲಿ ಭಾಗಿಯಾಗಲಿದ್ದಾರೆ. ಡಿಸಿಪಿ, ಎಸಿಪಿ ಮತ್ತು ಇನ್ಸ್‌ಪೆಕ್ಟರ್ ಶ್ರೇಣಿಯ ಅಧಿಕಾರಿಗಳ ನೇತೃತ್ವದಲ್ಲಿ ಜನಜಂಗುಳಿ ನಿಯಂತ್ರಿಸಲು ಭದ್ರತಾ ಪ್ಲಾನ್ ಸಿದ್ಧಪಡಿಸಲಾಗಿದೆ.

ಕಳೆದ ಪಂದ್ಯಗಳ ವೇಳೆ ನೂರಕ್ಕೂ ಹೆಚ್ಚು ಟಿಕೆಟ್‌ಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಪ್ರಕರಣಗಳು ಪತ್ತೆಯಾಗಿದ್ದವು. ಇದನ್ನು ಗಂಭೀರವಾಗಿ ಪರಿಗಣಿಸಿರುವ ಸಿಸಿಬಿ ಪೊಲೀಸರು ಇಂದು ಮಫ್ತಿಯಲ್ಲಿ ಕ್ರೀಡಾಂಗಣದ ಸುತ್ತ ಕಾರ್ಯಾಚರಣೆ ನಡೆಸಲಿದ್ದಾರೆ. ಟಿಕೆಟ್ ಅಕ್ರಮ ಮಾರಾಟಗಾರರ ಮೇಲೆ ಸತತ ನಿಗಾ ಇರಿಸಲಾಗಿದೆ.

ಪಂದ್ಯ ವೀಕ್ಷಣೆಗೆ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುವುದರಿಂದ ಜನದಟ್ಟಣೆಯ ಲಾಭ ಪಡೆದು ಮೊಬೈಲ್ ಕಳ್ಳತನ ಮಾಡುವ ತಂಡಗಳ ಬಗ್ಗೆ ಪೊಲೀಸರು ನಿಗಾ ವಹಿಸಿದ್ದಾರೆ. ಸಾರ್ವಜನಿಕರು ತಮ್ಮ ಅಮೂಲ್ಯ ವಸ್ತುಗಳ ಬಗ್ಗೆ ಜಾಗರೂಕರಾಗಿರುವಂತೆ ಸೂಚಿಸಲಾಗಿದೆ.

Shwetha M