ಡೆಲ್ಲಿ ಕ್ಯಾಪಿಟಲ್ಸ್‌ಗೆ ಬಿಗ್‌ ಶಾಕ್!‌ – ಮುಖಕ್ಕೆ ಚೆಂಡು ಬಡಿದು ಯುವ ಆಟಗಾರನಿಗೆ ಗಂಭೀರ ಗಾಯ!

ಡೆಲ್ಲಿ ಕ್ಯಾಪಿಟಲ್ಸ್‌ಗೆ ಬಿಗ್‌ ಶಾಕ್!‌ – ಮುಖಕ್ಕೆ ಚೆಂಡು ಬಡಿದು ಯುವ ಆಟಗಾರನಿಗೆ ಗಂಭೀರ ಗಾಯ!

ಇಂದು ಡೆಲ್ಲಿ ಕ್ಯಾಪಿಟಲ್ಸ್‌ ಹಾಗೂ ಪಂಜಾಬ್‌ ಕಿಂಗ್ಸ್‌ ನಡುವೆ ಹೈವೋಲ್ಟೇಜ್‌ ಮ್ಯಾಚ್‌ ನಡೆಯಲಿದೆ. ಈ ಪಂದ್ಯಕ್ಕೂ ಮುನ್ನವೇ ಡೆಲ್ಲಿ ಕ್ಯಾಪಿಟಲ್ಸ್‌ಗೆ ಶಾಕ್‌ ಎದುರಾಗಿದೆ. ತಂಡ ಯುವ ಆಟಗಾರ ಅಭ್ಯಾಸದ ಬೇಳೆ ಗಂಭೀರ ಗಾಯಗೊಂಡಿದ್ದಾರೆ.

ಇದನ್ನೂ ಓದಿ: ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ವೇಳೆ ಪ್ರವಾಸಿಗರ ಮೇಲೆ ಕಾಡಾನೆ ಅಟ್ಯಾಕ್!‌ – ಆಮೇಲೆ ಏನಾಯ್ತು?

ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಶುಕ್ರವಾರ ಸಂಜೆ ನೆಟ್ಸ್‌ನಲ್ಲಿ ಬ್ಯಾಟಿಂಗ್ ಅಭ್ಯಾಸ ನಡೆಸುತ್ತಿರುವ ವೇಳೆ ಯುವ ಬ್ಯಾಟರ್ ಸಾಹಿಲ್ ಪರಾಖ್ ಅವರ ಮುಖಕ್ಕೆ ಬಲವಾಗಿ ಚೆಂಡು ಬಡಿದಿದೆ. ವೇಗದ ಬೌಲರ್ ಎಸೆದ ಬೌನ್ಸರ್ ಅನ್ನು ಎದುರಿಸುವಾಗ ಚೆಂಡು ನೇರವಾಗಿ ಅವರ ಮುಖಕ್ಕೆ (ಹೆಲ್ಮೆಟ್‌ನ ಗ್ರಿಲ್ ನಡುವಿನಿಂದ) ಬಡಿದಿದೆ. ಇದ್ರಿಂದಾಗಿ ಸಾಹಿಲ್‌ ತೀವ್ರ ಗಾಯವಾಗಿದೆ. ಚೆಂಡು ತಗುಲಿದ ತಕ್ಷಣ ಸಾಹಿಲ್ ಮೈದಾನದಲ್ಲೇ ಕುಸಿದು ಬಿದ್ದರು ಎಂದು ವರದಿಯಾಗಿದೆ.

ಮುಖಕ್ಕೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಸಾಹಿಲ್ ಅವರ ಮುಖದಿಂದ ತೀವ್ರ ರಕ್ತಸ್ರಾವವಾಗುತ್ತಿತ್ತು. ತಕ್ಷಣವೇ ತಂಡದ ವೈದ್ಯಕೀಯ ಸಿಬ್ಬಂದಿ ಮೈದಾನಕ್ಕೆ ಧಾವಿಸಿ ಪ್ರಥಮ ಚಿಕಿತ್ಸೆ ನೀಡಿದರು. ಗಾಯದ ತೀವ್ರತೆ ಹೆಚ್ಚಿದ್ದರಿಂದ, ಅವರನ್ನು ಸ್ಟ್ರೆಚರ್ ಮೂಲಕ ಮೈದಾನದಿಂದ ಹೊರಕ್ಕೆ ಕರೆತರಲಾಯಿತು. ಬಳಿಕ ಕ್ರೀಡಾಂಗಣಕ್ಕೆ ಆಂಬ್ಯುಲೆನ್ಸ್ ತರಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಾಯಗೊಂಡ ಯಂಗ್‌ ಬ್ಯಾಟರ್‌ ಸಾಹಿಲ್‌ ಯಾರು?

ಮಹಾರಾಷ್ಟ್ರದ ನಾಸಿಕ್ ಮೂಲದ ಸಾಹಿಲ್ ಪರಾಖ್ ಒಬ್ಬ ಪ್ರತಿಭಾವಂತ ಎಡಗೈ ಬ್ಯಾಟರ್. ಈ ಬಾರಿಯ ಹರಾಜಿನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಅವರನ್ನು ₹30 ಲಕ್ಷಕ್ಕೆ ಖರೀದಿಸಿತ್ತು.  ಸದ್ಯ ಸಾಹಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಮುಖದ ಮೂಳೆ ಮುರಿತವಾಗಿದೆಯೇ ಎಂದು ಪರೀಕ್ಷಿಸಲು ಸ್ಕ್ಯಾನಿಂಗ್ ನಡೆಸಲಾಗಿದೆ. ಡೆಲ್ಲಿ ಕ್ಯಾಪಿಟಲ್ಸ್ ಮ್ಯಾನೇಜ್‌ಮೆಂಟ್ ಈ ಬಗ್ಗೆ ಇನ್ನು ಅಧಿಕೃತ ಪ್ರಕಟಣೆ ನೀಡಿಲ್ಲವಾದರೂ, ಸಹ ಆಟಗಾರರು ಮತ್ತು ಅಭಿಮಾನಿಗಳು ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಆಶಿಸುತ್ತಿದ್ದಾರೆ.

Shwetha M