ಮದ್ಯಪ್ರಿಯರಿಗೆ ಶಾಕ್ ಕೊಟ್ಟ ಸರ್ಕಾರ! – ಮೇ 1ರಿಂದಲೇ ಹೊಸ ಬೆಲೆ ಜಾರಿ?

ಮದ್ಯಪ್ರಿಯರಿಗೆ ಶಾಕಿಂಗ್ ಸುದ್ದಿಯೊಂದಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ್ಮೇಲೆ ಈಗಾಗಲೇ 4 ಬಾರಿ ಮದ್ಯದ ಬೆಲೆ ಹೆಚ್ಚಿಸಿರುವ ಸರ್ಕಾರ, ಇದೀಗ 5ನೇ ಬಾರಿಗೆ ದರ ಹೆಚ್ಚಿಸಲು ಮುಂದಾಗಿದೆ ಮತ್ತು ಮೇ 1ರಿಂದಲೇ ಈ ದರ ಜಾರಿಗೆ ಬರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇದು ಮದ್ಯಪ್ರಿಯರ ಆಕ್ರೋಶಕ್ಕೆ ಕಾರಣವಾಗಿದೆ.
ಇದನ್ನೂ ಓದಿ: ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ವೇಳೆ ಪ್ರವಾಸಿಗರ ಮೇಲೆ ಕಾಡಾನೆ ಅಟ್ಯಾಕ್! – ಆಮೇಲೆ ಏನಾಯ್ತು?
ರಾಜ್ಯ ಸರ್ಕಾರ ಐದನೇ ಬಾರಿಗೆ ಅಬಕಾರಿ ಸುಂಕವನ್ನು ಪರಿಷ್ಕರಿಸಲು ಸರ್ಕಾರ ಸಜ್ಜಾಗಿದೆ. ಮೇ 1 ರಿಂದ ಮದ್ಯದ ಹೊಸ ದರಗಳು ಜಾರಿಗೆ ಬರುವ ಸಾಧ್ಯತೆಯಿದೆ. ಸರ್ಕಾರವು ಹೊರಡಿಸಿರುವ ಕರಡು ಅಧಿಸೂಚನೆಯಂತೆ, ಇನ್ನು ಮುಂದೆ ಮದ್ಯದ ಬಾಟಲಿಯಲ್ಲಿರುವ ಆಲ್ಕೋಹಾಲ್ ಪ್ರಮಾಣದ ಆಧಾರದ ಮೇಲೆ ತೆರಿಗೆ ವಿಧಿಸಲಾಗುತ್ತದೆ. ಅಂದರೆ, ಮದ್ಯದಲ್ಲಿ ಆಲ್ಕೋಹಾಲ್ ಅಂಶ ಹೆಚ್ಚಿದ್ದಷ್ಟೂ ತೆರಿಗೆ ಹೆಚ್ಚಾಗಲಿದೆ. ಈ ಹೊಸ ನೀತಿಯಿಂದಾಗಿ ಕಡಿಮೆ ಆಲ್ಕೋಹಾಲ್ ಹೊಂದಿರುವ ಪ್ರೀಮಿಯಂ ಮದ್ಯದ ಬೆಲೆ ಅಲ್ಪ ಪ್ರಮಾಣದಲ್ಲಿ ಇಳಿಕೆಯಾಗುವ ಸಾಧ್ಯತೆಯಿದ್ದರೂ, ಸಾಮಾನ್ಯ ಜನರು ಬಳಸುವ ಮದ್ಯದ ಬೆಲೆ ಶೇ 20ರಷ್ಟು ಏರಿಕೆಯಾಗಲಿದೆ. ಇದ್ರಿಂದಾಗಿ ರಾಜ್ಯದ ಮಧ್ಯಮ ಮತ್ತು ಕೆಳವರ್ಗದ ಮದ್ಯಪ್ರಿಯರ ಜೇಬಿಗೆ ಕತ್ತರಿ ಹಾಕಲಿದೆ.
ರಾಜ್ಯದ ಒಟ್ಟು ಅಬಕಾರಿ ಆದಾಯದಲ್ಲಿ ಶೇ 80ರಷ್ಟು ಪಾಲು ಹೊಂದಿರುವ ಮೊದಲ ನಾಲ್ಕು ಸ್ಲ್ಯಾಬ್‌ಗಳ ಮದ್ಯದ ಬೆಲೆ ಗಣನೀಯವಾಗಿ ಹೆಚ್ಚಾಗಲಿದೆ. ವಿಸ್ಕಿ, ರಮ್, ಬ್ರಾಂಡಿ ಮತ್ತು ಜಿನ್ ಬೆಲೆಯಲ್ಲಿ ಒಂದು ಕ್ವಾರ್ಟರ್‌ಗೆ 15 ರಿಂದ 25 ರೂಪಾಯಿಗಳಷ್ಟು ಏರಿಕೆಯಾಗುವ ಅಂದಾಜಿದೆ.
ಇದೀಗ ಮೂರು ವರ್ಷಗಳ ಅವಧಿಯಲ್ಲಿ ಐದನೇ ಬಾರಿಗೆ ದರ ಏರಿಕೆ ಮಾಡುತ್ತಿರುವುದಕ್ಕೆ ಮದ್ಯಪ್ರಿಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸರ್ಕಾರ ತನ್ನ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಪದೇ ಪದೇ ಕುಡುಕರನ್ನೇ ಟಾರ್ಗೆಟ್ ಮಾಡುತ್ತಿದೆ ಎಂದು ಮದ್ಯದ ವ್ಯಾಪಾರಿಗಳು ಹಾಗೂ ಗ್ರಾಹಕರು ಕಿಡಿಕಾರಿದ್ದಾರೆ.
ಎಷ್ಟು ಹೆಚ್ಚಾಗಲಿದೆ ಮದ್ಯದ ದರ?
- ಸ್ಲ್ಯಾಬ್-1: ₹80 ರಿಂದ ₹95ಕ್ಕೆ ಏರಿಕೆ (₹15 ಹೆಚ್ಚಳ)
- ಸ್ಲ್ಯಾಬ್-2: ₹95 ರಿಂದ ₹110ಕ್ಕೆ ಏರಿಕೆ (₹15 ಹೆಚ್ಚಳ)
- ಸ್ಲ್ಯಾಬ್-3: ₹120 ರಿಂದ ₹135ಕ್ಕೆ ಏರಿಕೆ (₹15 ಹೆಚ್ಚಳ)
- ಸ್ಲ್ಯಾಬ್-4: ₹150 ರಿಂದ ₹170ಕ್ಕೆ ಏರಿಕೆ (₹20 ಹೆಚ್ಚಳ)
ಒಂದು ಫುಲ್ ಬಾಟಲ್ ಮದ್ಯದ ಮೇಲೆ ಎಂಆರ್‌ಪಿ (MRP) ದರದಲ್ಲಿ ಸುಮಾರು 50 ರಿಂದ 100 ರೂಪಾಯಿಗಳಷ್ಟು ಹೆಚ್ಚಳವಾಗಲಿದ್ದು, ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಸರ್ವಿಸ್ ಚಾರ್ಜ್ ಸೇರಿ ಈ ಹೊರೆ ಮತ್ತಷ್ಟು ಹೆಚ್ಚಾಗಲಿದೆ.

ನೋಡಿರಿ

