ಜೂನ್ 4 ಕ್ಕೆ ರಿಲೀಸ್ ಆಗಲ್ಲ ಟಾಕ್ಸಿಕ್ – ಫ್ಯಾನ್ಸ್ಗೆ ಬ್ಯಾಡ್ ನ್ಯೂಸ್ ಕೊಟ್ಟ ಯಶ್

ಟ್ಸಾಕ್ಸಿಕ್ ಸಿನಿಮಾಗಾಗಿ ಕಾಯುತ್ತಿದ್ದ ರಾಕಿಂಗ್ ಸ್ಟಾರ್ ಯಶ್ ಅಭಿಮಾನಿಗಳಿಗೆ ನಿರಾಸೆಯಾಗಿದೆೆ. . ‘ಟಾಕ್ಸಿಕ್’ ಸಿನಿಮಾ ರಿಲೀಸ್ ಮತ್ತೆ ಮುಂದಕ್ಕೆ ಹೋಗಲಿದೆ ಎಂಬ ಸುದ್ದಿ ಈ ಮೊದಲಿನಿಂದಲೂ ಹರಿದಾಡುತ್ತಲೇ ಇತ್ತು. ಈಗ ಅದು ನಿಜವಾಗಿದೆ. ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ ಸಿನಿಮಾ ಜೂನ್ 4ರಂದು ಬಿಡುಗಡೆಯಾಗುತ್ತಿಲ್ಲ. ಚಿತ್ರದ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದ್ದು, ಶೀಘ್ರದಲ್ಲೇ ಹೊಸ ದಿನಾಂಕವನ್ನು ಘೋಷಿಸುವುದಾಗಿ ಯಶ್ ತಿಳಿಸಿದ್ದಾರೆ.
ಇದನ್ನೂ ಓದಿ: ಸಂಜೆ ವೇಳೆಗೆ ಈ ಕೆಲಸಗಳನ್ನ ಅಪ್ಪಿತಪ್ಪಿಯೂ ಮಾಡಬೇಡಿ – ಚಿಕ್ಕ ಚಿಕ್ಕ ತಪ್ಪು ಕಂಟಕವಾಗುತ್ತೆ ಹುಷಾರ್
ಇತ್ತೀಚೆಗೆ ನಡೆದ ‘ಸಿನಿಮಾ ಕಾನ್’ ಅಲ್ಲಿ ‘ಟಾಕ್ಸಿಕ್’ ಚಿತ್ರಕ್ಕೆ ಜಾಗತಿಕ ಮಟ್ಟದ ವಿತರಕರಿಂದ ಸಿನಿಮಾಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆಯಂತೆ. ವಿಶ್ವದಾದ್ಯಂತ ದೊಡ್ಡ ಮಟ್ಟದಲ್ಲಿ ಈ ಚಿತ್ರವನ್ನು ಬಿಡುಗಡೆ ಮಾಡಲು ಭರ್ಜರಿ ಬೇಡಿಕೆ ಬಂದಿರುವ ಹಿನ್ನೆಲೆಯಲ್ಲಿ, ಚಿತ್ರತಂಡ ತನ್ನ ಬಿಡುಗಡೆ ದಿನಾಂಕವನ್ನು ಮುಂದಕ್ಕೆ ಹಾಕಿಕೊಳ್ಳಲು ನಿರ್ಧರಿಸಿದೆ. ಸಿನಿಮಾವನ್ನು ಕೇವಲ ಭಾರತಕ್ಕೆ ಸೀಮಿತಗೊಳಿಸದೆ, ಅಂತರಾಷ್ಟ್ರೀಯ ಮಟ್ಟದಲ್ಲಿ ಅತಿ ದೊಡ್ಡ ಮಟ್ಟಕ್ಕೆ ತಲುಪಿಸಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಯಶ್ ತಿಳಿಸಿದ್ದಾರೆ.

ನೋಡಿರಿ

