ಪಶ್ಚಿಮ ಬಂಗಾಳ ಮತದಾನದ ವೇಳೆ ಹಿಂಸಾಚಾರ! – ಬಿಜೆಪಿ ಕಾರ್ಯಕರ್ತನ ಮೇಲೆ ದಾಳಿ, ಟಿಎಂಸಿಯಿಂದ ಬೂತ್ ಧ್ವಂಸ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನವು ಇಂದು ನಡೆಯುತ್ತಿದೆ. ಇದೀಗ ಮತದಾನ ನಡೆಯುತ್ತಿದ್ದ ವೇಳೆಯೇ ಮತಗಟ್ಟೆಯಲ್ಲಿ ಹಿಂಸಾಚಾರ ನಡೆದಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ 2ನೇ ಹಂತದ ಮತದಾನ ಆರಂಭ! – ಮತದಾರರಿಗೆ ಮೋದಿ ವಿಶೇಷ ಮನವಿ!
ಚಪ್ರಾ ವಿಧಾನಸಭಾ ಕ್ಷೇತ್ರದ ಬೂತ್ ಸಂಖ್ಯೆ 53ರಲ್ಲಿ ಬಿಜೆಪಿ ಪೋಲಿಂಗ್ ಏಜೆಂಟ್ ಮೇಲೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ಕಬ್ಬಿಣದ ರಾಡ್ಗಳಿಂದ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ತೀವ್ರವಾಗಿ ಗಾಯಗೊಂಡಿರುವ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಶಾಂತಿಪುರದ ವಾರ್ಡ್ ಸಂಖ್ಯೆ 16ರಲ್ಲಿ ಬಿಜೆಪಿ ಚುನಾವಣಾ ಕಾರ್ಯಾಲಯವನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ ಎಂದು ವರದಿಯಾಗಿದೆ. ಹೌರಾದ ಬಲ್ಲಿಯಲ್ಲಿ ಇವಿಎಂ ದೋಷದ ಹಿನ್ನೆಲೆಯಲ್ಲಿ ಬಲ್ಲಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಈ ವೇಳೆ ಕೇಂದ್ರ ಭದ್ರತಾ ಪಡೆಗಳು ಲಾಠಿ ಪ್ರಹಾರ ನಡೆಸಿದ್ದು, ಇಬ್ಬರನ್ನು ಬಂಧಿಸಲಾಗಿದೆ.
ಪಶ್ಚಿಮ ಬಂಗಾಳದ 7 ಜಿಲ್ಲೆಗಳ 142 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆಯುತ್ತಿದೆ. ಸುಮಾರು 3.22 ಕೋಟಿ ಮತದಾರರು ಇಂದು 1,448 ಅಭ್ಯರ್ಥಿಗಳ ಭವಿಷ್ಯವನ್ನು ನಿರ್ಧರಿಸಲಿದ್ದಾರೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು ಕೇಂದ್ರ ಭದ್ರತಾ ಪಡೆಗಳು ಬಿಜೆಪಿಯ ನಿರ್ದೇಶನದಂತೆ ಕಾರ್ಯನಿರ್ವಹಿಸುತ್ತಿವೆ ಮತ್ತು ಟಿಎಂಸಿ ಕಾರ್ಯಕರ್ತರ ಮೇಲೆ ದೌರ್ಜನ್ಯ ಎಸಗುತ್ತಿವೆ ಎಂದು ಗಂಭೀರ ಆರೋಪ ಮಾಡಿದ್ದಾರೆ. ಬಿಜೆಪಿ ಅಧ್ಯಕ್ಷ ಸುವೇಂದು ಅಧಿಕಾರಿ ತನ್ನ ಏಜೆಂಟ್ಗಳು ಮತ್ತು ಕಾರ್ಯಕರ್ತರ ಮೇಲೆ ಟಿಎಂಸಿ ಉದ್ದೇಶಪೂರ್ವಕವಾಗಿ ದಾಳಿ ನಡೆಸುತ್ತಿದೆ ಎಂದು ದೂರಿದ್ದಾರೆ.
ಬೆಳಿಗ್ಗೆ 9 ಗಂಟೆಯವರೆಗೆ ರಾಜ್ಯದಲ್ಲಿ ಸರಾಸರಿ 18.39% ಮತದಾನ ದಾಖಲಾಗಿದೆ. ಪೂರ್ವ ಬರ್ಧಮಾನ್ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ 20.86% ಮತದಾನವಾಗಿದ್ದರೆ, ಹೂಗ್ಲಿಯಲ್ಲಿ 20.16% ಮತದಾನ ನಡೆದಿದೆ.

ನೋಡಿರಿ

