ಪೊಲೀಸ್ ಟಾರ್ಚರ್ಗೆ ವಿದ್ಯಾರ್ಥಿ ಆತ್ಮಹತ್ಯೆ ಕೇಸ್ – ವಿದ್ಯಾಗಿರಿ ಪೊಲೀಸ್ ಠಾಣೆಯ ಮೂವರು ಪೇದೆಗಳು ಸಸ್ಪೆಂಡ್

ಧಾರವಾಡಗಲ್ಲಿ ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದ್ಯಾಗಿರಿ ಪೊಲೀಸ್ ಠಾಣೆಯ ಮೂವರು ಪೇದೆಗಳನ್ನು ಸಸ್ಪೆಂಡ್ ಮಾಡಲಾಗಿದೆ. ಹೆಡ್ ಕಾನ್ಸ್ಟೇಬಲ್ ಚಂದ್ರು ನಡುವಿನಮನಿ, ಕಿರಣ್ ಡೊಕ್ಕಣ್ಣನವರ್ ಮತ್ತು ಸಯದ್ ತಹಸಿಲ್ದಾರ್ ಅಮಾನತುಗೊಂಡಿರುವ ಅಧಿಕಾರಿಗಳು. ಗಾಂಜಾ ಸೇವನೆ ಆರೋಪದಡಿ ವಿದ್ಯಾರ್ಥಿ ಆದಿತ್ಯನನ್ನು ವಶಕ್ಕೆ ಪಡೆಯಲಾಗಿತ್ತು. ಪರೀಕ್ಷೆಯಲ್ಲಿ ಗಾಂಜಾ ಸೇವನೆ ನೆಗೆಟಿವ್ ಬಂದಿದ್ದರೂ, ಪೊಲೀಸರು ಆದಿತ್ಯನಿಂದ 2000 ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು. ತಾಯಿಯಿಂದ ಹಣ ಕೊಡಿಸಲು ಆದಿತ್ಯ ಯತ್ನಿಸಿದ್ದು, ತಾಯಿ ನಿರಾಕರಿಸಿದ ಕಾರಣ ನೇಣಿಗೆ ಶರಣಾಗಿದ್ದ ಎನ್ನಲಾಗಿತ್ತು.
ಇದನ್ನೂ ಓದಿ: ರಣ ಬಿಸಿಲಿಗೆ ರಾಜ್ಯದಲ್ಲಿ ಮತ್ತೊಂದು ಬಲಿ! – ಬಿಸಿಲಿನಲ್ಲಿ ಆಟವಾಡುತ್ತಿದ್ದ ಬಾಲಕ ದುರಂತ ಅಂತ್ಯ!
ಪ್ರಕರಣ ಸಂಬಂಧ ಹುಬ್ಬಳ್ಳಿ-ಧಾರವಾಡ ನಗರ ಪೊಲೀಸ್ ಆಯುಕ್ತರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ದೂರವಾಣಿ ಕರೆ ಮಾಡಿದ್ದಾರೆ. ಪ್ರಕರಣದ ನ್ಯಾಯಯುತ ತನಿಖೆ ನಡೆಸುವಂತೆ ಹಾಗೂ ಪ್ರಕರಣದಲ್ಲಿ ಭಾಗಿಯಾದ ತಪ್ಪಿತಸ್ಥ ಪೊಲೀಸ್ ಇನ್ಸಪೆಕ್ಟರ್ ಮತ್ತು ಸಿಬ್ಬಂದಿಯನ್ನು ಕೂಡಲೇ ಅಮಾನತುಗೊಳಿಸಿ, ಕಠಿಣ ಕ್ರಮ ಕೈಗೊಳ್ಳುವಂತೆ ಅವರು ಸೂಚನೆ ನೀಡಿದ್ದಾರೆ. ರಾಜ್ಯ ಸರ್ಕಾರ ಪ್ರಕರಣದ ನೈತಿಕ ಹೊಣೆ ಹೊರಬೇಕು ಮತ್ತು ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.
ಇನ್ನು ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ ಸಂಬಂಧ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಘಟನೆ ಸಂಬಂಧ ಹಿರಿಯ ಅಧಿಕಾರಿಗಳ ವರದಿ ಆಧಾರದಲ್ಲಿ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಡಿಸಿಪಿ ಶೃತಿ ನೇತೃತ್ವದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಸಿಬ್ಬಂದಿ ಹಣ ಕೇಳಿದ್ದರ ಬಗ್ಗೆಯೂ ತನಿಖೆಯಾಗಲಿದೆ. ಅಲ್ಲದೆ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ರಕ್ಷಣೆ ಮಾಡಲ್ಲ ಎಂದು ತಿಳಿಸಿದ್ದಾರೆ.

ನೋಡಿರಿ

