ರೇಣುಕಾಸ್ವಾಮಿ ಕೊಲೆ ಕೇಸ್ – ಮತ್ತೆ ಜಾಮೀನಿಗಾಗಿ ಕೋರ್ಟ್ ಮೊರೆ ಹೋದ ನಟ ದರ್ಶನ್!

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಪಾಲಾಗಿರುವ ನಟ ದರ್ಶನ್‌ಗೆ ಬಿಡುಗಡೆ ಭಾಗ್ಯ ಇನ್ನೂ ಸಿಕ್ಕಿಲ್ಲ. ಇದೀಗ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯಾಗುತ್ತಿದೆ. ಇದೀಗ ದರ್ಶನ್ ಈಗ ಎರಡನೇ ಬಾರಿ ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ಇದನ್ನೂ ಓದಿ: ಉಡುಪಿಯಲ್ಲಿ ಭೀಕರ ಅಪಘಾತ! – ಪ್ರವಾಸ ಹೊರಟಿದ್ದ ವಿದ್ಯಾರ್ಥಿಗಳು ದುರಂತ ಅಂತ್ಯ!
ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಅರೆಸ್ಟ್ ಆಗಿದ್ದ ದರ್ಶನ್ ಆರಂಭದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಮತ್ತು ನಂತರ ಬಳ್ಳಾರಿ ಜೈಲಿನಲ್ಲಿ ಹಲವು ತಿಂಗಳುಗಳ ಕಾಲ ಕಾಲ ಕಳೆದಿದ್ದರು. ಈ ಹಿಂದೆ ಕರ್ನಾಟಕ ಹೈಕೋರ್ಟ್ ಅವರಿಗೆ ವೈದ್ಯಕೀಯ ಕಾರಣಕ್ಕಾಗಿ ಜಾಮೀನು ನೀಡಿತ್ತು. ಇದರಿಂದಾಗಿ ಅವರು ಕೆಲ ತಿಂಗಳುಗಳ ಕಾಲ ಜೈಲಿನಿಂದ ಹೊರಗಿದ್ದರು. ಆದರೆ, ನಂತರದ ಬೆಳವಣಿಗೆಯಲ್ಲಿ ಸುಪ್ರೀಂಕೋರ್ಟ್ ಈ ಪ್ರಕರಣದ ಎಲ್ಲ ಆರೋಪಿಗಳ ಜಾಮೀನನ್ನು ರದ್ದುಗೊಳಿಸಿದ ಪರಿಣಾಮ ದರ್ಶನ್ ಅವರು ಮತ್ತೆ ಕಾನೂನು ಪ್ರಕ್ರಿಯೆಗೆ ಒಳಗಾಗಿ ಜೈಲಿಗೆ ವಾಪಸ್ ಆಗಬೇಕಾಯಿತು. ಸದ್ಯ ಅವರು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದಾರೆ. ಇದೀಗ ಮತ್ತೆ ದಾಸ ಮತ್ತೆ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.
ಹಿರಿಯ ವಕೀಲ ಮುಕುಲ್ ರೋಹ್ಟಗಿ ಕಚೇರಿಯಿಂದ ದರ್ಶನ್ ಪರ ಜಾಮೀನು ಅರ್ಜಿ ಸಲ್ಲಿಕೆಯಾಗಿದೆ. ಜೈಲು ಸೇರಿದ 8 ತಿಂಗಳ ಬಳಿಕ ಈ ಅರ್ಜಿ ಸಲ್ಲಿಸಿದ್ದು, ಮೇ 4 ಕ್ಕೆ ವಿಚಾರಣೆಗೆ ದಿನಾಂಕ ನಿಗದಿಯಾಗಿದೆ. ಜಾಮೀನು ಅರ್ಜಿಯಲ್ಲಿ ಪ್ರಕರಣದ ಟ್ರಯಲ್ ಪ್ರಾರಂಭವಾಗಿದೆ. 8 ತಿಂಗಳು ಕಳೆದ್ರೂ ಕೂಡ ಸಾಕ್ಷಿಗಳ ವಿಚಾರಣೆ ಮುಕ್ತಾಯ ಆಗಿಲ್ಲ. ಸಾಕ್ಷಿಗಳ ವಿಚಾರಣೆ ವಿಳಂಬವಾಗುತ್ತಿದೆ. ಟ್ರಯಲ್‌ನಲ್ಲಿ ಸಾಕ್ಷಿಗಳ ವಿಚಾರಣೆ ತಡ ಆದರೆ ಮುಕ್ತಾಯ ಆಗಲು ಸಾಕಷ್ಟು ವರ್ಷ ಬೇಕಾಗಲಿದೆ. ಟ್ರಯಲ್‌ಗೆ ಸಕಾರಾತ್ಮಕವಾಗಿ ಸ್ಪಂದಿಸುತ್ತೇನೆ. ಆದ್ದರಿಂದ ಜಾಮೀನು ಮಂಜೂರು ಮಾಡಿ ಎಂದು ಏಪ್ರಿಲ್ 2ನೇ ವಾರದಲ್ಲಿ ಮನವಿ ಮಾಡಿದ್ದಾರೆ.
ಟ್ರಯಲ್ ಪ್ರಾರಂಭವಾಗಿ 8 ತಿಂಗಳಿಗೆ 15 ಸಾಕ್ಷಿಗಳಷ್ಟೇ ವಿಚಾರಣೆಯಾಗಿದೆ. ಪ್ರಕರಣದಲ್ಲಿ 273 ಸಾಕ್ಷ್ಯಗಳು ಇದ್ದಾವೆ. ಟ್ರಯಲ್ ಕೋರ್ಟ್‌ನಲ್ಲಿ ರೇಣುಕಾಸ್ವಾಮಿ ತಂದೆ – ತಾಯಿ ಹೊರತು ಪಡಿಸಿದರೆ, ಮಹಜರು ಸಾಕ್ಷಿಗಳ ವಿಚಾರಣೆ ಮಾತ್ರ ನಡೆಯುತ್ತಿದೆ. ಆರೋಪಿಗಳು ಟ್ರಯಲ್ ಸಂದರ್ಭದಲ್ಲಿ ಬೇರೆ ಬೇರೆ ಅರ್ಜಿಗಳ ಸಲ್ಲಿಕೆ ಮಾಡಿದ್ದು, ತುಂಬಾ ವಿಳಂಬಕ್ಕೆ ಕಾರಣವಾಗಿದೆ.
ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆ.14 ರಂದು ಜಾಮೀನು ರದ್ದು ಮಾಡಿದ್ದ ಸುಪ್ರೀಂ ಕೋರ್ಟ್, ಆರೋಪಿಗಳಿಗೆ ತಕ್ಷಣವೇ ಶರಣಾಗಲು ಸೂಚಿಸಿತ್ತು. ಆದೇಶದ ಬಳಿಕ ಜೈಲು ಸೇರಿದ್ದ ದರ್ಶನ್, ಇದೀಗ ಮಧ್ಯಂತರ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ.

ನೋಡಿರಿ

