ನಮ್ಮ ಪ್ರಪಂಚ ದೊಡ್ಡದಾಗುತ್ತಿದೆ! – ಮೊದಲ ಮಗುವಿನ ನಿರೀಕ್ಷೆಯಲ್ಲಿ ಡಾಲಿ ಧನಂಜಯ್ ದಂಪತಿ!

ಸ್ಯಾಂಡಲ್‌ವುಡ್ ನಟ ಡಾಲಿ ಧನಂಜಯ್ ಹಾಗೂ ಧನ್ಯತಾ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದೀಗ ಈ ಕ್ಯೂಟ್ ಕಪಲ್ ಬೇಬಿ ಬಂಪ್ ಫೋಟೋ ಹಂಚಿಕೊಂಡಿದ್ದಾರೆ.
ಇದನ್ನೂ ಓದಿ: ರಣ ಬಿಸಿಲಿಗೆ ರಾಜ್ಯದಲ್ಲಿ ಮತ್ತೊಂದು ಬಲಿ! – ಬಿಸಿಲಿನಲ್ಲಿ ಆಟವಾಡುತ್ತಿದ್ದ ಬಾಲಕ ದುರಂತ ಅಂತ್ಯ!
ಇತ್ತೀಚೆಗಷ್ಟೇ ತಂದೆಯಾಗುತ್ತಿರುವ ವಿಷಯವನ್ನು ತಿಳಿಸಿದ್ದ ಧನಂಜಯ್, ಅಂದಿನಿಂದ ಯಾವುದೇ ಫೋಟೋಗಳನ್ನು ಹಂಚಿಕೊಂಡಿರಲಿಲ್ಲ. ಆದರೆ ಈಗ ಮೊದಲ ಬಾರಿಗೆ ಧನಂಜಯ್ ಮತ್ತು ಧನ್ಯತಾ ಅವರು ಪ್ರಕೃತಿಯ ಮಡಿಲಿನಲ್ಲಿ ಮಾಡಿಸಿರುವ ಆಕರ್ಷಕ ಫೋಟೋಶೂಟ್ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ರಿವೀಲ್ ಮಾಡಿದ್ದಾರೆ. ಈ ಮುದ್ದಾದ ಫೋಟೋಗಳನ್ನು ಹಂಚಿಕೊಂಡಿರುವ ದಂಪತಿ, “ನಮ್ಮ ಪ್ರಪಂಚ ದೊಡ್ಡದಾಗುತ್ತಿದೆ” ಎಂಬ ಸಾಲುಗಳನ್ನು ಬರೆದುಕೊಂಡಿದ್ದಾರೆ.
ನಟ ಡಾಲಿ ಧನಂಜಯ್ ಅವರು ವಿವಾಹವಾಗಿರುವ ಡಾ. ಧನ್ಯತಾ ಅವರು ಮೂಲತಃ ಚಿತ್ರದುರ್ಗದವರು. ಧನಂಜಯ್ ಮತ್ತು ಧನ್ಯತಾ ಅವರು ಹಲವು ವರ್ಷಗಳಿಂದ ಒಬ್ಬರಿಗೊಬ್ಬರು ಪರಿಚಯವಿದ್ದು, ಉತ್ತಮ ಸ್ನೇಹಿತರಾಗಿದ್ದರು. ಕಾಲಕ್ರಮೇಣ ಈ ಸ್ನೇಹವು ಪ್ರೀತಿಗೆ ತಿರುಗಿ, ಇಬ್ಬರೂ ಪರಸ್ಪರ ಇಷ್ಟಪಟ್ಟಿದ್ದರು. ಇವರ ಪ್ರೀತಿಗೆ ಎರಡೂ ಕುಟುಂಬದ ಪೋಷಕರು ಕೂಡ ಒಪ್ಪಿಗೆ ಸೂಚಿಸಿದ್ದರು. 2025ರ ಫೆ.16ರಂದು ಡಾಲಿ ಧನಂಜಯ್ ಅವರು ಡಾ.ಧನ್ಯತಾ ಜೊತೆ ಮೈಸೂರಿನಲ್ಲಿ ವೈವಾಹಿಕ ಜೀವನಕ್ಕೆ ಕಾಲಿಟ್ಟರು. ಮದುವೆ ಮತ್ತು ಆರತಕ್ಷತೆಗೆ ಸಿನಿಮಾ ರಂಗ ಮತ್ತು ರಾಜಕೀಯದ ಗಣ್ಯರು ಭಾಗಿಯಾಗಿ ಶುಭಹಾರೈಸಿದ್ದರು.

ನೋಡಿರಿ

