ಮುಂಬೈ ನೀಡಿದ ಬಿಗ್ ಟಾರ್ಗೆಟ್ ಧೂಳಿಪಟ – MI ಎದುರು SRHಗೆ ರಣರೋಚಕ ಜಯ

ವಿಸ್ ಹೆಡ್ ಹಾಗೂ ಹೆನ್ರಿಕ್ ಕ್ಲಾಸೆನ್ ಅವರ ಸ್ಪೋಟಕ ಅರ್ಧಶತಕಗಳ ಬಲದಿಂದ ಸನ್ರೈಸರ್ಸ್ ಹೈದರಾಬಾದ್ (SRH) ತಂಡ, ಎದುರಾಳಿ ಮುಂಬೈ ಇಂಡಿಯನ್ಸ್ (MI) ಎದುರು 6 ವಿಕೆಟ್ಗಳ ಭರ್ಜರಿ ಗೆಲುವು ಪಡೆಯಿತು. ಆ ಮೂಲಕ 2026ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2026) ಟೂರ್ನಿಯಲ್ಲಿ 12 ಅಂಕಗಳ ಮೂಲಕ ಪಾಯಿಂಟ್ಸ್ ಟೇಬಲ್ನಲ್ಲಿ ಮೂರನೇ ಸ್ಥಾನಕ್ಕೆ ಲಗ್ಗೆ ಇಟ್ಟಿತು. ಇನ್ನು ಬೃಹತ್ ಮೊತ್ತದ ಗುರಿ ನೀಡಿದ್ದರೂ ಬೌಲಿಂಗ್ ವೈಫಲ್ಯದಿಂದಾಗಿ ಐದು ಬಾರಿ ಚಾಂಪಿಯನ್ಸ್ ಸೋಲು ಅನುಭವಿಸಬೇಕಾಯಿತು ಹಾಗೂ ಆರು ಸೋಲುಗಳೊಂದಿಗೆ ಪ್ಲೇಆಫ್ಸ್ ಹಾದಿಯನ್ನು ಕಠಿಣವಾಗಿಸಿಕೊಂಡಿದೆ.
ಬುಧವಾರ ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ 244 ರನ್ಗಳ ಗುರಿಯನ್ನು ಹಿಂಬಾಲಿಸಿದ ಸನ್ರೈಸರ್ಸ್ ಹೈದರಾಬಾದ್ ತಂಡಕ್ಕೆ ಅಭಿಷೇಕ್ ಶರ್ಮಾ ಹಾಗೂ ಟ್ರಾವಿಸ್ ಹೆಡ್ 129 ರನ್ಗಳ ಜೊತೆಯಾಟವನ್ನು ಆಡುವ ಮೂಲಕ ಭರ್ಜರಿ ಆರಂಭವನ್ನು ತಂದುಕೊಟ್ಟರು. ಅಬ್ಬರಿಸಿದ ಅಭಿಷೇಕ್ ಶರ್ಮಾ 24 ಎಸೆತಗಳಲ್ಲಿ 45 ರನ್ ಗಳಿಸಿ ಅರ್ಧಶತಕದಂಚಿನಲ್ಲಿ ಘಝಂಫರ್ಗೆ ವಿಕೆಟ್ ಒಪ್ಪಿಸಿದರು. ಮೂರನೇ ಕ್ರಮಾಂಕದಲ್ಲಿ ಕ್ರೀಸ್ಗೆ ಬಂದ ಇಶಾನ್ ಕಿಶನ್ ಕೇವಲ ಒಂದು ರನ್ ಗಳಿಸಿ ಘಝಂಫರ್ಗೆ ಶರಣಾದರು.
ಇದನ್ನೂ ಓದಿ: ಈ ಹಣ್ಣು ತಿಂದ್ರೆ ಶುಗರ್ ನಿಯಂತ್ರಣದಲ್ಲಿರುತ್ತೆ! – ಆಹಾ.. ಅಂಜೂರದಿಂದ ಎಷ್ಟೊಂದು ಆರೋಗ್ಯ ಲಾಭ!
ಒಂದು ತುದಿಯಲ್ಲಿ ಗಟ್ಟಿಯಾಗಿ ನಿಂತು ಬ್ಯಾಟ್ ಬೀಸಿದ ಟ್ರಾವಿಸ್ ಹೆಡ್ 253.33ರ ಸ್ಟ್ರೈಕ್ ರೇಟ್ನಲ್ಲಿ ಅಬ್ಬರಿಸಿದರು. ಅವರು ಆಡಿದ 30 ಎಸೆತಗಳಲ್ಲಿ ಬರೋಬ್ಬರಿ 8 ಸಿಕ್ಸರ್ ಹಾಗೂ 4 ಬೌಂಡರಿಗಳೊಂದಿಗೆ 76 ರನ್ ಸಿಡಿಸಿದರು. ಆ ಮೂಲಕ ಎಸ್ಆರ್ಎಚ್ ತಂಡವನ್ನು ಗೆಲುವಿನ ಹಾದಿಯನ್ನು ಸುಗಮಗೊಳಿಸಿ 10ನೇ ಓವರ್ನಲ್ಲಿ ಹಾರ್ದಿಕ್ ಪಾಂಡ್ಯಗೆ ವಿಕೆಟ್ ಒಪ್ಪಿಸಿದರು.
ನಾಲ್ಕನೇ ವಿಕೆಟ್ಗೆ ಜೊತೆಯಾದ ಹೆನ್ರಿಕ್ ಕ್ಲಾಸೆನ್ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರು ಮಧ್ಯಮ ಕ್ರಮಾಂಕದಲ್ಲಿ ಭರ್ಜರಿ ಬ್ಯಾಟ್ ಮಾಡಿದರು. ಈ ಇಬ್ಬರೂ 80 ರನ್ಗಳ ಜೊತೆಯಾಟವನ್ನು ಆಡುವ ಮೂಲಕ ತಮ್ಮ ತಂಡವನ್ನು ಗೆಲುವಿನ ಸನಿಹ ತಂದಿದ್ದರು. 21 ರನ್ ಗಳಿಸಿದ ಬಳಿಕ ನಿತೀಶ್ ರೆಡ್ಡಿ ಔಟ್ ಆದರು. ಆದರೆ, ಭರ್ಜರಿ ಬ್ಯಾಟ್ ಬೀಸಿದ ಹೆನ್ರಿಕ್ ಕ್ಲಾಸೆನ್ 30 ಎಸೆತಗಳಲ್ಲಿ ಅಜೇಯ 65 ರನ್ (7 ಬೌಂಡರಿ, 4 ಸಿಕ್ಸರ್) ಗಳಿಸಿ ಅಂತಿಮವಾಗಿ ಸನ್ರೈಸರ್ಸ್ ಹೈದರಾಬಾದ್ 18.4 ಓವರ್ಗಳಿಗೆ 4 ವಿಕೆಟ್ ನಷ್ಟಕ್ಕೆ 249 ರನ್ ಗಳಿಸಿ ಗೆಲುವಿ ದಡ ಸೇರಿತು. ಕೊನೆಯಲ್ಲಿ ಅರೋರಾ 10 ಎಸೆತಗಳಲ್ಲಿ ಅಜೇಯ 30 ರನ್ ಸಿಡಿಸಿದರು.

ನೋಡಿರಿ

