ಮ್ಯಾಚ್ ವೇಳೆ ಧಮ್ ಎಳೆದ ಪರಾಗ್ಗೆ ಬಿಗ್ಶಾಕ್! RR ನಾಯಕನಿಗೆ ಶಿಕ್ಷೆ ವಿಧಿಸಿದ BCCI!

ಪಂಜಾಬ್ ಕಿಂಗ್ಸ್ ವಿರುದ್ದದ ಪಂದ್ಯದ ವೇಳೆ RR ಕ್ಯಾಪ್ಟನ್ ರಿಯಾನ್ ಪರಾಗ್ ದೊಡ್ಡ ಎಡವಟ್ಟು ಮಾಡಿಕೊಂಡಿದ್ದಾರೆ. ಮ್ಯಾಚ್ ವೇಳೆ ಡ್ರೆಸ್ಸಿಂಗ್ ರೂಮ್ನಲ್ಲಿ ವೇಪಿಂಗ್ ಪರಾಗ್ ಸಿಕ್ಕಿಬಿದ್ದಿದ್ದರು. ಇದೀಗ ರಾಜಸ್ಥಾನ್ ರಾಯಲ್ಸ್ ನಾಯಕ ರಿಯಾನ್ ಪರಾಗ್ಗೆ ಬಿಸಿಸಿಐ ಶಿಕ್ಷೆ ವಿಧಿಸಿದೆ.
ಇದನ್ನೂ ಓದಿ: ರಜತ್ ಕಿಶನ್ ರೀಲ್ಸ್ ಕಿತಾಪತಿ! – ಮತ್ತೆ ಅರೆಸ್ಟ್ ಆಗ್ತಾರಾ ಬಿಗ್ಬಾಸ್ ಮಾಜಿ ಸ್ಪರ್ಧಿ?
ಪಂಜಾಬ್ ಕಿಂಗ್ಸ್ ಪಂದ್ಯದ ವೇಳೆ ರಿಯಾನ್ ಪರಾಗ್ ಇ ಸಿಗರೇಟ್ ಸೇದುವುದು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗಿತ್ತು. ಅನೇಕರು ಇದರ ಬಗ್ಗೆ ಪ್ರಶ್ನಿಸಿ ರಿಯಾನ್ ಪರಾಗ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಬಿಸಿಸಿಗೆ ಒತ್ತಾಯಿಸಿದ್ದರು. ಈ ಬೆನ್ನಲ್ಲೆ ಪರಾಗ್ನ ವಿಚಾರಣೆ ನಡೆಸಿದ್ದು, ಈ ವೇಳೆ ತನ್ನ ತಪ್ಪನ್ನ ಒಪ್ಪಿಕೊಂಡಿದ್ದಾರೆ. ಇದೀಗ ಬಿಸಿಸಿಐ ಐಪಿಎಲ್ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ರಿಯಾನ್ ಪರಾಗ್ಗೆ ಭಾರೀ ದಂಡ ವಿಧಿಸಿದೆ. ಆಟಗಾರರು ಮತ್ತು ತಂಡಗಳಿಗೆ ವಿಧಿಸಲಾಗಿರುವ ಐಪಿಎಲ್ ನೀತಿ ಸಂಹಿತೆಯ ಲೆವೆಲ್ 1 ಅನ್ನು ಉಲ್ಲಂಘಿಸಿದ್ದಕ್ಕಾಗಿ ರಿಯಾನ್ಗೆ ಪಂದ್ಯ ಶುಲ್ಕದ ಶೇಕಡಾ 25 ರಷ್ಟು ದಂಡ ಮತ್ತು ಒಂದು ಡಿಮೆರಿಟ್ ಪಾಯಿಂಟ್ ನೀಡಲಾಗಿದೆ.
ಇನ್ನು ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಬಿಸಿಸಿಐ, ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2026 ರ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯ ಸಂಖ್ಯೆ 40 ರ ಸಂದರ್ಭದಲ್ಲಿ ಆಟಗಾರರು ಮತ್ತು ತಂಡದ ಅಧಿಕಾರಿಗಳಿಗೆ ಐಪಿಎಲ್ ನೀತಿ ಸಂಹಿತೆಯ ಹಂತ 1 ಅನ್ನು ಉಲ್ಲಂಘಿಸಿದ್ದಕ್ಕಾಗಿ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್ ಅವರಿಗೆ ಪಂದ್ಯ ಶುಲ್ಕದ 25% ದಂಡ ವಿಧಿಸಲಾಗಿದೆ ಮತ್ತು ಒಂದು ಡಿಮೆರಿಟ್ ಪಾಯಿಂಟ್ ಅನ್ನು ಸಹ ನೀಡಲಾಗಿದೆ. ರಿಯಾನ್ ಐಪಿಎಲ್ ನೀತಿ ಸಂಹಿತೆಯ ಆರ್ಟಿಕಲ್ 2.21 ಅನ್ನು ಉಲ್ಲಂಘಿಸಿರುವುದು ಕಂಡುಬಂದಿದೆ, ಇದು ‘ಆಟಕ್ಕೆ ಅಪಖ್ಯಾತಿ ತರುವ ನಡವಳಿಕೆ’ಗೆ ಸಂಬಂಧಿಸಿದೆ. ಎರಡನೇ ಇನ್ನಿಂಗ್ಸ್ನಲ್ಲಿ ರಿಯಾನ್ ಡ್ರೆಸ್ಸಿಂಗ್ ಕೋಣೆಯೊಳಗೆ ವೇಪ್ ಬಳಸುತ್ತಿರುವುದು ಕಂಡುಬಂದಾಗ ಈ ಘಟನೆ ತಿಳಿದುಬಂದಿದೆ ಎಂದು ಬಿಸಿಸಿಐ ಹೇಳಿಕೆ ಬಿಡುಗಡೆ ಮಾಡಿದೆ.
ಇನ್ನು ರಿಯಾನ್ ಪರಾಗ್ಗೆ ದಂಡ ವಿಧಿಸಿದ ಬಳಿಕ ಬಿಸಿಸಿಐ ಎಚ್ಚರಿಕೆಯನ್ನ ಕೂಡ ನೀಡಿದೆ. ಈ ತಪ್ಪುಗಳನ್ನು ಪುನರಾವರ್ತಿಸದಂತೆ ಎಚ್ಚರಿಕೆಯನ್ನೂ ನೀಡಲಾಗಿದೆ. ಭಾಗವಹಿಸುವ ಪ್ರತಿಯೊಬ್ಬರೂ ಹೆಚ್ಚಿನ ಜವಾಬ್ದಾರಿಯನ್ನು ವಹಿಸಬೇಕೆಂದು ನಾವು ಒತ್ತಾಯಿಸುತ್ತೇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎನ್ನಲಾಗ್ತಿದೆ.

ನೋಡಿರಿ

