ಡ್ಯಾಡಿ ಆದ ಖುಷಿಯಲ್ಲಿ ಡಾಲಿ ಧನಂಜಯ್!‌ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ!

ಡ್ಯಾಡಿ ಆದ ಖುಷಿಯಲ್ಲಿ ಡಾಲಿ ಧನಂಜಯ್!‌ – ಗಂಡು ಮಗುವಿಗೆ ಜನ್ಮ ನೀಡಿದ ಧನ್ಯತಾ!

ಸ್ಯಾಂಡಲ್‌ವುಡ್‌ ನಟ ಡಾಲಿ ಧನಂಜಯ್‌ ತಂದೆಯಾದ ಸಂಭ್ರಮದಲ್ಲಿದ್ದಾರೆ. ಧನ್ಯತಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಈ ಸಿಹಿ ಸುದ್ದಿಯನ್ನು ಡಾಲಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ: ರಾಹುಲ್, ನಿಸ್ಸಾಂಕ ರಣಾರ್ಭಟ – ರಾಜಸ್ಥಾನ್ ವಿರುದ್ಧ 7 ವಿಕೆಟ್​ಗಳಿಂದ ಗೆದ್ದ ಡೆಲ್ಲಿ

ಮಗುವಿನ ಬೆರಳನ್ನು ಹಿಡಿದು ಸೂರ್ಯ ಉದಯಿಸುತ್ತಿದ್ದಂತೆ, ಅತ್ಯಂತ ಸಂತೋಷ, ನಮ್ಮ ಗಂಡು ಮಗುವೂ ಉದಯಿಸಿತು ಎಂದು ಬರೆದುಕೊಂಡಿದ್ದಾರೆ ಡಾಲಿ. ನಿಮ್ಮೆಲ್ಲರ ಆಶೀರ್ವಾದ ಇರಲಿ ಎಂದು ಬರೆದುಕೊಂಡಿದ್ದಾರೆ. ಇದೀಗ ಫ್ಯಾನ್ಸ್‌ ಜ್ಯೂನಿಯರ್‌ ಡಾಲಿ ಎಂದು ಕಮೆಂಟ್‌ ಮಾಡುತ್ತಿದ್ದಾರೆ.

ಇತ್ತೀಚೆಗೆ ದಂಪತಿ ಮೊದಲ ಮಗುವಿನ ನಿರೀಕ್ಷೆಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದರು. ಬೇಬಿ ಬಂಪ್‌ ಫೋಟೋಶೂಟ್‌ ಮಾಡಿ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ Our universe is expanding ಎಂದು ಬರೆದುಕೊಂಡಿದ್ದರು. ಡಾಲಿ ಹಾಗೂ ಧನ್ಯತಾ ಅವರು ಪ್ರಕೃತಿಯ ನಡುವೆ ಫೋಟೊಶೂಟ್ ಮಾಡಿಸಿದ್ದು, ಡಾಲಿ, ಗರ್ಭಿಣಿ ಪತ್ನಿಯ ಕೈ ಹಿಡಿದು ನಡೆಸುತ್ತಿರುವ ಫೋಟೋ ಹಂಚಿಕೊಂಡಿದ್ದರು.

ಇನ್ನು ಕೆಲ ತಿಂಗಳ ಹಿಂದೆ ಸಂದರ್ಶನದಲ್ಲಿ ಮಾತನಾಡಿದ್ದ ಡಾಲಿ ಧನಂಜಯ್ ತಂದೆಯಾಗುತ್ತಿರುವ ಖುಷಿಯ ಬಗ್ಗೆ ಮಾತನಾಡಿದ್ದರು. ಇದೊಂದು ಹೊಸ ಅನುಭವ ಎಂದು ಹೇಳಿಕೊಂಡಿದ್ದರು. ಕಳೆದ ವರ್ಷ ಫೆಬ್ರವರಿಯಲ್ಲಿ ಡಾಲಿ ಧನಂಜಯ್ ಮತ್ತು ವೈದ್ಯೆ ಧನ್ಯತಾ ಅವರು ಮೈಸೂರಿನಲ್ಲಿ ಬಲು ಅದ್ಧೂರಿಯಾಗಿ ವಿವಾಹವಾಗಿದ್ದರು. ಇದೀಗ ಮೊದಲ ಮಗುವಿನ ಪೋಷಕರಾಗಿದ್ದಾರೆ. ಡಾಲಿ ಧನಂಜಯ್ ಪತ್ನಿ ಧನ್ಯತಾ ಅವರು ವೃತ್ತಿಯಲ್ಲಿ ವೈದ್ಯೆಯಾಗಿದ್ದಾರೆ. ಧನ್ಯತಾ ಅವರು ತಮ್ಮ ಹಾಗೂ ಡಾಲಿ ಧನಂಜಯ್ ಅವರ ಚಿತ್ರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಕೆಲವು ತಿಂಗಳ ಹಿಂದೆ ಉದಯ ಕನ್ನಡಿಗ 2025 ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಿ ತಾವು ತಂದೆ ಆಗುತ್ತಿರುವ ಖುಷಿಯ ವಿಚಾರವನ್ನು ಡಾಲಿ ಹಂಚಿಕೊಂಡಿದ್ದರು.

Shwetha M