ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮಹತ್ವದ ಸುದ್ದಿ! – ತಾತ್ಕಾಲಿಕವಾಗಿ ಬಂದ್ ಆಗಿದ್ದ ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್ ಓಪನ್!

ನಮ್ಮ ಮೆಟ್ರೋ ಪ್ರಯಾಣಿಕರಿಗೆ ಮಹತ್ವದ ಸುದ್ದಿಯಿದೆ. ನಮ್ಮ ಮಟ್ರೋ ನೇರಳೆ ಮಾರ್ಗದಲ್ಲಿ ಸಂಚಾರದಲ್ಲಿ ಅಸ್ಥವ್ಯಸ್ಥಗೊಂಡಿತ್ತು. ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣವನ್ನು ಸೋಮವಾರ ಬೆಳಿಗ್ಗೆ ತಾತ್ಕಾಲಿಕವಾಗಿ ಬಂದ್ ಮಾಡಲಾಗಿತ್ತು. ಇದೀಗ ಮತ್ತೆ ಸಂಚಾರ ಪ್ರಾರಂಭವಾಗಿದೆ ಎಂದು ಬಿಎಂಆರ್ಸಿಎಲ್ ತಿಳಿಸಿದೆ.
ಇದನ್ನೂ ಓದಿ: ಮುಂಬೈ ಮತ್ತು ಲಕ್ನೋ ಮಧ್ಯೆ ಮಾಡು ಇಲ್ಲವೆ ಮಡಿ ಪಂದ್ಯ – ಸೋತವರು ಟೂರ್ನಿಯಿಂದಲೇ ಔಟ್
ಕಬ್ಬನ್ ಪಾರ್ಕ್ ಮೆಟ್ರೋ ನಿಲ್ದಾಣದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದ್ದು, ಮೆಟ್ರೋ ನಿಲ್ದಾಣದ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿತ್ತು. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಈ ನಿಲ್ದಾಣದಲ್ಲಿ ಸಂಚಾರ ಬಂದ್ ಆಗಿತ್ತು. ರೈಲುಗಳು ಸದ್ಯಕ್ಕೆ ಕಬ್ಬನ್ ಪಾರ್ಕ್ ನಿಲ್ದಾಣದಲ್ಲಿ ನಿಲ್ಲುವುದಿಲ್ಲ. ಹೀಗಾಗಿ, ಪ್ರಯಾಣಿಕರು ತಮ್ಮ ಪ್ರಯಾಣವನ್ನು ಅದಕ್ಕೆ ತಕ್ಕಂತೆ ಯೋಜಿಸಿಕೊಳ್ಳಬೇಕು ಎಂದು ಬಿಎಂಆರ್ಸಿಎಲ್ ತನ್ನ ಅಧಿಕೃತ ಎಕ್ಸ್ (ಟ್ವಿಟರ್) ಖಾತೆಯ ಮೂಲಕ ಮಾಹಿತಿ ನೀಡಿದೆ. ವಿದ್ಯುತ್ ಪೂರೈಕೆ ಸಹಜ ಸ್ಥಿತಿಗೆ ಬಂದ ತಕ್ಷಣ ನಿಲ್ದಾಣದ ಕಾರ್ಯಾಚರಣೆ ಪುನರಾರಂಭವಾಗಲಿದೆ ಎಂದು ಬಿಎಂಆರ್ಸಿಎಲ್ ತಿಳಿಸಿತ್ತು ಇದೀಗ ತಾತ್ಕಾಲಿಕವಾಗಿ ಬಂದ್ ಆಗಿದ್ದ ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್ ಓಪನ್ ಆಗಿದೆ.
ಈ ಕುರಿತು ನಮ್ಮ ಮೆಟ್ರೋ ತನ್ನ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ. ವಿದ್ಯುತ್ ವ್ಯತ್ಯಯದಿಂದಾಗಿ ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್ ಬಂದ್ ಆಗಿತ್ತು. ವಿದ್ಯುತ್ ಪೂರೈಕೆ ಆದ ಬಳಿಕ ಓಪನ್ ಆಗಲಿದೆ ಎಂದು ತಿಳಿಸಿತ್ತು. ಅದರಂತೆ ಇದೀಗ ಕಬ್ಬನ್ ಪಾರ್ಕ್ ಮೆಟ್ರೋ ಸ್ಟೇಷನ್ ಆಗಿದೆ.

ನೋಡಿರಿ

