ಮರಳಿ ಕಾಂಗ್ರೆಸ್ ತೆಕ್ಕೆ ಸೇರಿದ ಬಾಗಲಕೋಟೆ ಕ್ಷೇತ್ರ- ಮೇಟಿ ಪುತ್ರ ಉಮೇಶ್ ಮೇಟಿಗೆ ಗೆಲುವು

ಬಾಗಲಕೋಟೆ ಉಪ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಬಿಜೆಪಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.
ಎಚ್.ವೈ. ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ಕ್ಷೇತ್ರಕ್ಕೆ ನಡೆದಿದ್ದ ಬೈ ಎಲೆಕ್ಷನ್ನಲ್ಲಿ ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ ಮೊದಲ ಬಾರಿಯ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ವೀರಣ್ಣ ಚರಂತಿಮಠ ಸೋಲು ಅನುಭವಿಸಿದ್ದಾರೆ. ಇದೀಗ ಕಾಂಗ್ರೆಸ್ ತನ್ನ ತೆಕ್ಕೆಗೆ ತನ್ನ ಕ್ಷೇತ್ರವನ್ನು ಪುನಃ ಪಡೆದುಕೊಂಡಿದೆ.
ಹೆಚ್.ವೈ. ಮೇಟಿ ನಿಧನದ ಹಿನ್ನೆಲೆ ಅವರ ಕುಟುಂಬಕ್ಕೇ ಟಿಕೆಟ್ ನೀಡಲು ನಿರ್ಧರಿಸಿದ್ದ ಕಾಂಗ್ರೆಸ್, ಮೇಟಿ ಪುತ್ರ ಉಮೇಶ್ರನ್ನು ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿ ಕಣಕ್ಕಿಳಿಸಿತ್ತು. ಮೊದಲ ಬಾರಿ ಚುನಾವಣೆಗೆ ಸ್ಪರ್ಧಿಸಿದ್ದ ಉಮೇಶ್ ಮೇಟಿ ಅಂತಿಮವಾಗಿ ಗೆದ್ದು ಬೀಗಿದ್ದಾರೆ. ಬಾಗಲಕೋಟೆ ಉಪಚುನಾವಣೆಯಲ್ಲಿ ಉಮೇಶ್ ಮೇಟಿ ಗೆದ್ದ ನಂತರ ಮೇಟಿ ಕುಟುಂಬದವರು ಸಂಭ್ರಮ ವ್ಯಕ್ತಪಡಿಸಿದ್ದಾರೆ. ಉಮೇಶ್ ಮೇಟಿ ಸಹೋದರ ಈ ಗೆಲುವಿನ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಇದೊಂದು ಭಾವುಕ ಕ್ಷಣವಾಗಿದ್ದು, ಈ ಗೆಲುವಿನಿಂದ ನಮ್ಮ ತಂದೆ ಆತ್ಮಕ್ಕೆ ಶಾಂತಿ ಸಿಕ್ಕ ಹಾಗಾಗಿದೆ. ನಮ್ಮ ತಂದೆ ಕೈ ಹಿಡಿದಿದ್ದ ಜನರು ಈಗ ನಮ್ಮ ಸಹೋದರನ ಕೈಯನ್ನೂ ಹಿಡಿದಿದ್ದಾರೆ. ಸಿಎಂ, ಸಚಿವರು ಮತ್ತು ಮತದಾರರಿಗೆ ಧನ್ಯವಾದ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ನೋಡಿರಿ

