17 ಮಂದಿ ಪ್ರಯಾಣಿಸುತ್ತಿದ್ದ ಪಲ್ಲಕ್ಕಿ ಬಸ್‌ನಲ್ಲಿ ಅಗ್ನಿ ಅವಘಡ – ಬೆಂಕಿ ಕೆನ್ನಾಲಿಗೆ ಕೆಎಸ್‌ಆರ್‌ಟಿಸಿ ಬಸ್ ಸುಟ್ಟು ಭಸ್ಮ!

17 ಮಂದಿ ಪ್ರಯಾಣಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ ಪಲ್ಲಕ್ಕಿ ಬಸ್ ಸಂಪೂರ್ಣ ಸುಟ್ಟು ಭಸ್ಮವಾಗಿರುವ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದಲ್ಲಿ ಬಳಿ ರಾಜ್ಯಹೆದ್ದಾರಿಯಲ್ಲಿ ನಡೆದಿದೆ.
ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಸರ್ಕಾರ ರಚಿಸೋಕೆ BJP ರೆಡಿ – ಯಾರಾಗ್ತಾರೆ ಮುಖ್ಯಮಂತ್ರಿ?
ಪಲ್ಲಕ್ಕಿ ಬಸ್ ಬೆಂಗಳೂರಿನಿಂದ ಗದಗಕ್ಕೆ ಹೋಗುತ್ತಿತ್ತು. ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದಲ್ಲಿ ಬಳಿ ರಾಜ್ಯಹೆದ್ದಾರಿಯಲ್ಲಿ ನಡೆದಿದೆ. ಕ್ಷಣಾರ್ಧದಲ್ಲಿ ಈ ದುರ್ಘಟನೆ ನಡೆದಿದ್ದು ದೊಡ್ಡ ದುರಂತ ತಪ್ಪಿದ್ದು, ಚಾಲಕನ ಸಮಪ್ರಜ್ಜೆಯಿಂದ 17 ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಬೆಂಗಳೂರಿನಿಂದ ಗದಗ ಹೊರಟಿದ್ದ (KA-57-F6680) ಸಂಖ್ಯೆಯ ಪಲ್ಲಕ್ಕಿ ಬಸ್‌ನಲ್ಲಿ ಸುಮಾರು 17 ಹೆಚ್ಚು ಪ್ರಯಾಣಿಕರು ಗದಗ ಕಡೆಗೆ ಪ್ರಯಾಣಿಸುತ್ತಿದ್ದರು. ಬ್ರೇಕ್ ಲೈನ್ ದೋಷದಿಂದ ಬೆಂಕಿ ಅವಘಡ ಸಂಭವಿಸಿದ್ದು ಎನ್ನಲಾಗಿದೆ.
ಬಸ್ ಚಾಲಕ ಪಕ್ಕೀರಪ್ಪ ಬೆಂಕಿ ನಂದಿಸಲು ಹರಸಹಾಸ ಪಟ್ಟಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ನೋಡಿರಿ

