ಟಾಕ್ಸಿಕ್ ಟೀಂ ಜೊತೆ ಕಿಯಾರಾ ಕಿರಿಕ್? – ಆ ಸೀನ್ ತೆಗೆದುಹಾಕಲು ಡಿಮ್ಯಾಂಡ್ ಮಾಡಿದ್ರಾ ಬೋಲ್ಡ್ ಬ್ಯೂಟಿ?

ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗೋನ್-ಅಪ್ ಭಾರಿ ನಿರೀಕ್ಷೆ ಹುಟ್ಟಿಸಿದೆ. ಜೂ. 4ರಂದು ರಿಲೀಸ್ ಆಗಬೇಕಿದ್ದ ಈ ಸಿನಿಮಾ ಮತ್ತೆ ಮುಂದೂಡಿಕೆಯಾಗಿದೆ. ಹೊಸ ದಿನಾಂಕ ಮುಂದಿನ ದಿನಗಳಲ್ಲಿ ಅಪ್‌ಡೇಟ್ ಮಾಡಲಾಗುವುದು ಎಂದು ರಾಕಿಂಗ್ ಸ್ಟಾರ್ ಹೇಳಿದ್ರು. ಈ ಮಧ್ಯೆ ಕಿಯಾರಾ ಅಡ್ವಾಣಿ ಈ ಸಿನಿಮಾದಲ್ಲಿ ಬೋಲ್ಡ್ ದೃಶ್ಯಗಳಿಗೆ ಕತ್ತರಿ ಹಾಕಬೇಕು ಎಂದು ಒತ್ತಾಯಿಸಿದ್ದಾರೆ ಎಂಬ ಸುದ್ದಿ ವೈರಲ್ ಆಗಿತ್ತು. ಇದು ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಕಿಯಾರಾ ಈ ಬಗ್ಗೆ ಅಪ್‌ಡೇಟ್ ಕೊಟ್ಟಿದ್ದಾರೆ.
ಇದನ್ನೂ ಓದಿ: ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣ ಹೆಚ್ಚಳ! – ಕೋಟಾ ಹಾಸ್ಟೆಲ್‌ಗಳ ಸೀಲಿಂಗ್ ಫ್ಯಾನ್‌ಗೆ ಕಬ್ಬಿಣದ ಪಂಜರ ಅಳವಡಿಕೆ!
ಟಾಕ್ಸಿಕ್ ಸಿನಿಮಾದಲ್ಲಿ ಕಿಯಾರಾ ಅಡ್ವಾಣಿ ಕೂಡ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಕಿಯಾರಾ ಅಡ್ವಾಣಿ ಅವರು ಈಗಾಗಲೇ ಯಶ್ ಜೊತೆಗಿನ ಕೆಲವು ಬೋಲ್ಡ್ ದೃಶ್ಯಗಳಲ್ಲಿ ಭಾಗಿಯಾಗಿದ್ದಾರೆ. ಚಿತ್ರೀಕರಣಕ್ಕೂ ಮೊದಲು ನಿರ್ದೇಶಕರು ಈ ದೃಶ್ಯಗಳು ನಟಿಯ ಕಂಫರ್ಟ್ ಜೋನ್ ಒಳಗೇ ಇರುತ್ತವೆ ಎಂದು ಭರವಸೆ ನೀಡಿದ್ದರು. ಆದರೆ, ಚಿತ್ರೀಕರಣ ಮುಗಿದ ನಂತರ ಔಟ್‌ಪುಟ್ ನೋಡಿದ ಕಿಯಾರಾ ಅವರಿಗೆ ಆ ದೃಶ್ಯಗಳು ತೆರೆಯ ಮೇಲೆ ಅತಿ ಎನಿಸಿದೆಯಂತೆ. ಈ ಕಾರಣದಿಂದ ಅವರು ಚಿತ್ರದಲ್ಲಿನ ಕೆಲ ಇಂಟಿಮೇಟ್ ದೃಶ್ಯಗಳನ್ನು ಕತ್ತರಿ ಹಾಕಬೇಕೆಂದು ಮನವಿ ಮಾಡಿದ್ದಾರೆ ಎಂದು ವರದಿಯಾಗಿತ್ತು. ಆದರೀಗ ನಟಿ ಈ ಊಹಾಪೋಹಗಳಿಗೆ ಫುಲ್‌ಸ್ಟಾಪ್ ಇಟ್ಟಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಕಿಯಾರಾ ಸಾಮಾಜಿಕ ಮಾಧ್ಯಮದ ಮೂಲಕ ಆ ಹೇಳಿಕೆಗಳನ್ನು ನೇರವಾಗಿ ತಿರಸ್ಕರಿಸಿದ್ದಾರೆ. ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಗಳಲ್ಲಿ ಸುದ್ದಿ ವರದಿಯನ್ನು ಹಂಚಿಕೊಂಡ ಅವರು, “ಸಂಪೂರ್ಣ ಅಸಂಬದ್ಧ” ಎಂದು ಬರೆದಿದ್ದಾರೆ.
ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಚಿತ್ರವನ್ನು ಆರಂಭದಲ್ಲಿ ಜೂನ್ 4, 2026 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು, ಆದರೆ ಈಗ ಅದನ್ನು ಮುಂದೂಡಲಾಗಿದೆ . ಹೊಸ ರಿಲೀಸ್ ಡೇಟ್ ತಿಳಿಯಲು ಫ್ಯಾನ್ಸ್ ಕಾದಿದ್ದಾರೆ. ಕೆವಿಎನ್ ಪ್ರೊಡಕ್ಷನ್ಸ್ ಮತ್ತು ಮಾನ್ಸ್ಟರ್ ಮೈಂಡ್ ಕ್ರಿಯೇಷನ್ಸ್ ನಿರ್ಮಿಸಿರುವ ಈ ಚಿತ್ರದಲ್ಲಿ ನಯನತಾರಾ, ಹುಮಾ ಖುರೇಷಿ, ರುಕ್ಮಿಣಿ ವಸಂತ್ ಮತ್ತು ತಾರಾ ಸುತಾರಿಯಾ ಕೂಡ ನಟಿಸಿದ್ದಾರೆ.

ನೋಡಿರಿ

