ಶೃಂಗೇರಿ ಕ್ಷೇತ್ರದಲ್ಲಿ ಅಂಚೆಮತ ವಿವಾದಕ್ಕೆ ತೆರೆ – ಬಿಜೆಪಿ ಶಾಸಕರಾಗಿ ಡಿ.ಎನ್ ಜೀವರಾಜ್ ಪ್ರಮಾಣ ವಚನ ಸ್ವೀಕಾರ

ಶೃಂಗೇರಿ ಕ್ಷೇತ್ರದಲ್ಲಿ ಅಂಚೆಮತ ವಿವಾದಕ್ಕೆ ತೆರೆ – ಬಿಜೆಪಿ ಶಾಸಕರಾಗಿ ಡಿ.ಎನ್ ಜೀವರಾಜ್ ಪ್ರಮಾಣ ವಚನ ಸ್ವೀಕಾರ

ರಾಜ್ಯ ರಾಜಕಾರಣದಲ್ಲಿ ಕಿಚ್ಚು ಹಚ್ಚಿದ್ದ ಶೃಂಗೇರಿ ವಿಧಾನಸಭಾ ಕ್ಷೇತ್ರದ ಹಗ್ಗಜಗ್ಗಾಟ ಕೊನೆಗೂ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಕ್ಷೇತ್ರದ ನೂತನ ಶಾಸಕರಾಗಿ ಡಿ ಎನ್ ಜೀವರಾಜ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಇಂದು ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಲು ಸಭಾಧ್ಯಕ್ಷ ಯುಟಿ ಖಾದರ್ ಸಮಯ ನಿಗದಿಪಡಿಸಿದ್ದರು. ಕ್ಷೇತ್ರದ ಅಂಚೆ ಮತಗಳ ಮರುಎಣಿಕೆ ಬಳಿಕ ಉಂಟಾದ ರಾಜಕೀಯ ಗದ್ದಲದಿಂದ ಈ ಕ್ಷೇತ್ರ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿತ್ತು.

ಇದನ್ನೂ ಓದಿ : REVENGEನಲ್ಲೂ ಗೆಲ್ಲುತ್ತಾ RCB? – ಪಂತ್ ಪಡೆಗೆ RED ALERT

ವಿಧಾನಸೌಧದ ಮೊದಲ ಮಹಡಿಯಲ್ಲಿ ನಡೆದ ಸಮಾರಂಭದಲ್ಲಿ ಸಭಾಧ್ಯಕ್ಷ ಯು.ಟಿ. ಖಾದರ್ ಅವರು ಡಿ.ಎನ್‌. ಜೀವರಾಜ್ ಅವರಿಗೆ ಶಾಸಕರಾಗಿ ಪ್ರಮಾಣ ವಚನ ಬೋಧಿಸಿದರು. ಈ ವೇಳೆ ವಿಧಾನಸಭೆಯ ಕಾರ್ಯದರ್ಶಿ ವಿಶಲಾಕ್ಷಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆ‌ರ್. ಅಶೋಕ್ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

2023ರ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿ ಡಿ ರಾಜೇಗೌಡ ಅವರು 201 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಚುನಾವಣೆಯಲ್ಲಿ ಸೋತಿದ್ದ ಜೀವರಾಜ್ ಅಂಚೆ ಮತಗಳನ್ನು ಮರುಎಣಿಕೆ ಮಾಡಬೇಕೆಂದು ಕೋರ್ಟ್ ಮೊರೆಹೋಗಿದ್ದರು. ಕಳೆದ ವಾರಾಂತ್ಯ ಹೈಕೋರ್ಟ್ ಆದೇಶದಂತೆ ಮರುಎಣಿಕೆ ಮಾಡಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಅವರು ಪಡೆದಿದ್ದ 569 ಅಂಚೆ ಮತಗಳಲ್ಲಿ 318 ಮತಗಳು ಅಸಿಂಧು ಎಂದು ಘೋಷಿಸಲ್ಪಟ್ಟಿದ್ದು, ಇದರಿಂದ ಫಲಿತಾಂಶದಲ್ಲಿ ಮಹತ್ತರ ಬದಲಾವಣೆಯಾಗಿದೆ. ಇದರ ಪರಿಣಾಮವಾಗಿ ಬಿಜೆಪಿಯ ಡಿ.ಎನ್. ಜೀವರಾಜ್ ಅವರು 52 ಮತಗಳ ಅಂತರದಿಂದ ಮುನ್ನಡೆ ಪಡೆದು ಅಂತಿಮವಾಗಿ ಜಯಗಳಿಸಿದ್ದಾರೆ.

Shantha Kumari